newsfirstkannada.com

ಅಮೇಥಿ ಬಿಟ್ಟು ರಾಯ್​ಬರೇಲಿ ಅಖಾಡಕ್ಕಿಳಿದ ರಾಹುಲ್ ಗಾಂಧಿ; ಕಾಂಗ್ರೆಸ್ ಮೆಗಾ ಪ್ಲಾನ್ ಏನು?

Share :

Published May 3, 2024 at 4:16pm

Update May 3, 2024 at 4:19pm

  ರೋಡ್​ ಶೋ ಮೂಲಕ ಬಂದು ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

  ರಾಹುಲ್​ ಗಾಂಧಿ ಯಾವ, ಯಾವ ಕ್ಷೇತ್ರಗಳಿಂದ ಸ್ಪರ್ಧೆ ಮಾಡುತ್ತಿದ್ದಾರೆ?

  ತಾಯಿ, ಸಹೋದರಿ, ಮಾವನ ಜೊತೆ ಬಂದು ರಾಹುಲ್ ಗಾಂಧಿ ನಾಮಿನೇಷನ್​

ಲಕ್ನೋ: ತೀವ್ರ ಕುತೂಹಲ ಮೂಡಿಸಿದ್ದ ರಾಯ್​ಬರೇಲಿ ಲೋಕಸಭಾ ಕ್ಷೇತ್ರದಿಂದ ಯಾರು ಸ್ಪರ್ಧೆ ಮಾಡುತ್ತಾರೆ ಎಂಬುದಕ್ಕೆ ತೆರೆ ಬಿದ್ದಿದೆ. ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿಯವರು ಸ್ಪರ್ಧಿಸುತ್ತಿದ್ದ ರಾಯ್​ಬರೇಲಿ ಕ್ಷೇತ್ರದಿಂದ ಈ ಬಾರಿ ರಾಹುಲ್​ ಗಾಂಧಿ ಸ್ಪರ್ಧೆ ಮಾಡುತ್ತಿದ್ದು ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ತಮ್ಮ ಪಕ್ಷದ ಬೆಂಬಲಿಗರು, ಕಾರ್ಯಕರ್ತರೊಂದಿಗೆ ರೋಡ್​ ಶೋ ಮೂಲಕ ಆಗಮಿಸಿ ರಾಯ್ ಬರೇಲಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇನ್ನು ಇದೇ ವೇಳೆ ರಾಹುಲ್​ ಗಾಂಧಿಯವರ ಜೊತೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ವಾದ್ರಾ, ರಾಬರ್ಟ್ ವಾದ್ರಾ ಮತ್ತು ರಾಜಸ್ಥಾನದ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ಸಾಥ್ ನೀಡಿದರು.

ಇದನ್ನೂ ಓದಿ: ಸಿಲಿಕಾನ್​ ಸಿಟಿಗೆ ತಂಪೆರೆದ ವರುಣ.. ಇಂದು ರಾತ್ರಿ ಭರ್ಜರಿ ಮಳೆ ಬೀಳುವ ಸಾಧ್ಯತೆ

ಬೆಳಗ್ಗೆಯಷ್ಟೇ ಕಾಂಗ್ರೆಸ್ ಅಮೇಥಿ ಹಾಗೂ ರಾಯ್ ಬರೇಲಿ ಅಭ್ಯರ್ಥಿಗಳ ಹೆಸರನ್ನು ರಿಲೀಸ್ ಮಾಡಿತ್ತು. ಇದರ ಬೆನ್ನಲ್ಲೇ ರಾಹುಲ್ ಗಾಂಧಿಯವರು ರಾಯ್ ಬರೇಲಿಯಿಂದ ಸ್ಪರ್ಧೆ ಮಾಡುವುದು ಕನ್​​ಫರ್ಮ್ ಆಗಿದೆ. ಅಮೇಠಿಯಿಂದ ರಾಹುಲ್ ಗಾಂಧಿ ಸ್ಪರ್ಧೆ ಮಾಡ್ತಾರೆ ಎನ್ನಲಾಗಿತ್ತಾದ್ರೂ ಆದರೆ ಕೆಲ ಕಾರಣಗಳಿಂದ ಅಮೇಠಿ ಬದಲಿಗೆ ರಾಯ್ ಬರೇಲಿಯನ್ನು ಬಿಟ್ಟುಕೊಡಲಾಗಿದೆ. ಸೋನಿಯಾ ಗಾಂಧಿಯವರು ಇದೇ ಕ್ಷೇತ್ರದಿಂದ ಪ್ರತಿನಿಧಿಸುತ್ತಿದ್ದರು. ಇವರ ಬಳಿಕ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡ್ತಾರೆ ಎನ್ನಲಾಗಿತ್ತು. ಈ ಎಲ್ಲದ ನಡುವೆ ಅಂತಿಮವಾಗಿ ರಾಹುಲ್ ಗಾಂಧಿ ರಾಯ್​​ಬರೇಲಿಯಿಂದ ಅಖಾಡಕ್ಕೆ ಇಳಿದಿದ್ದಾರೆ. ಇದು ರಾಹುಲ್ ಗಾಂಧಿಯವರ 2ನೇ ಕ್ಷೇತ್ರವಾಗಿದೆ. ಈಗಾಗಲೇ ಅವರು ಕೇರಳದ ವಯನಾಡ್​ನಿಂದ ಸ್ಪರ್ಧೆ ಮಾಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಗೆದ್ದೇ ಗೆಲ್ಲುವ ಗ್ಯಾರಂಟಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿದ್ದಾರೆ. ಈ ಹಿನ್ನೆಲೆಯಲ್ಲಿ ಗಾಂಧಿ ಕುಟುಂಬದ ಭದ್ರಕೋಟೆಯಾಗಿದ್ದ ಅಮೇಥಿ ಅನ್ನು ಬಿಟ್ಟು ರಾಯ್‌ಬರೇಲಿಯಲ್ಲಿ ತಮ್ಮ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಅಮೇಥಿಯಲ್ಲಿ ಕಳೆದ ಬಾರಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಗಾಂಧಿ ಸೋತಿದ್ದರು. ಈ ಬಾರಿ  ರಾಯ್‌ಬರೇಲಿ ಹಾಗೂ ವಯನಾಡು ಎರಡು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಬಿಜೆಪಿಗೆ ಟಕ್ಕರ್ ಕೊಡೋ ಪ್ಲಾನ್ ಮಾಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅಮೇಥಿ ಬಿಟ್ಟು ರಾಯ್​ಬರೇಲಿ ಅಖಾಡಕ್ಕಿಳಿದ ರಾಹುಲ್ ಗಾಂಧಿ; ಕಾಂಗ್ರೆಸ್ ಮೆಗಾ ಪ್ಲಾನ್ ಏನು?

https://newsfirstlive.com/wp-content/uploads/2024/05/RAHUL_GANDHI.jpg

Load More