ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ರಾಹುಲ್ ಪ್ಲಾನ್
ಬಿಜೆಪಿ ಸೋಲಿಸಲು ತಂತ್ರ ಹೆಣೆದ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ
ಈಗಿನಿಂದಲೇ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ
ಸಾಂಟಾ ಕ್ಲಾರಾ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯನ್ನು ಸೋಲಿಸಬಹುದು ಎಂದು ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಹೇಳಿದ್ದಾರೆ.
ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಸಿಲಿಕಾನ್ ವ್ಯಾಲಿ ಕ್ಯಾಂಪಸ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಾಹುಲ್ ಗಾಂಧಿಯವರು, ಬಿಜೆಪಿಯನ್ನು ಸೋಲಿಸಲು ಪ್ರತಿ ಪಕ್ಷಗಳು ಜಗ್ಗಟ್ಟಿನಿಂದ ಕೆಲಸ ಮಾಡಬೇಕು. ಹೀಗಾಗಿ ಕಾಂಗ್ರೆಸ್ ಎಲ್ಲಾ ಪಕ್ಷಗಳನ್ನು ಒಂದೆಡೆ ಸೇರಿಸುವ ಪ್ರಯತ್ನ ಮಾಡುತ್ತಿದೆ. ಬಿಜೆಪಿಯಲ್ಲಿರೋ ದುರ್ಬಲತೆ ಎದ್ದು ಕಾಣುತ್ತಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಸೋಲಿಸುವುದು ಕಷ್ಟವೇನಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾವು ಇತ್ತೀಚೆಗೆ ಕರ್ನಾಟಕದಲ್ಲಿ ಅಭೂತಪೂರ್ವ ಜಯ ಸಾಧಿಸಿದ್ದೇವೆ. ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ನೋಡಿದರೆ ಬಿಜೆಪಿಯನ್ನು ಸೋಲಿಸುವುದು ಕಷ್ಟವಲ್ಲ. ಆದರೆ, ಸರಿಯಾದ ರೀತಿಯಲ್ಲಿ ತಂತ್ರ ರೂಪಿಸಬೇಕು ಎಂದರು.
ಕರ್ನಾಟಕ ಚುನಾವಣೆಗೆ ಬಿಜೆಪಿ ಕಾಂಗ್ರೆಸ್ ಪಕ್ಷಕ್ಕಿಂತ 10 ಪಟ್ಟು ಹೆಚ್ಚು ಹಣ ಖರ್ಚು ಮಾಡಿದೆ. ಲೋಕಸಭಾ ಚುನಾವಣೆಗೂ ಹೀಗೆ ಮಾಡಲು ಬಿಜೆಪಿ ಪ್ಲಾನ್ ಮಾಡಿಕೊಂಡಿದೆ. ಈ ಹೊತ್ತಲ್ಲೇ ನಾವು ಎಲ್ಲರೂ ಒಗ್ಗಟ್ಟಿನ ಮಂತ್ರ ಪಠಿಸುವುದು ಅಗತ್ಯವಿಗೆ ಎಂದರು ರಾಹುಲ್ ಗಾಂಧಿ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ