ಪ್ರಧಾನಿ ಮೋದಿಗೆ ನಿಂದಿಸಿದ್ದ ಕೇಸ್..!
ಸುಪ್ರೀಂಕೋರ್ಟ್ನಿಂದ ಬಿಗ್ ರಿಲೀಫ್
ಈ ಬಗ್ಗೆ ರಾಹುಲ್ ಗಾಂಧಿ ಹೇಳಿದ್ದೇನು?
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಗೆ ನಿಂದಿಸಿದ್ದರು ಎನ್ನಲಾದ ಕೇಸ್ನಲ್ಲಿ 2 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ. ಇಂದು ಸುಪ್ರೀಂಕೋರ್ಟ್ ರಾಹುಲ್ ಗಾಂಧಿಗೆ ವಿಧಿಸಲಾಗಿದ್ದ ಶಿಕ್ಷೆಗೆ ತಡೆಯಾಜ್ಞೆ ನೀಡಿ ಆದೇಶಿಸಿದೆ.
ಇನ್ನು, ಈ ಬೆನ್ನಲ್ಲೇ ಸುಪ್ರೀಂಕೋರ್ಟ್ ಹೊರಡಿಸಿದ ಸಂಬಂಧ ಟ್ವೀಟ್ ಮಾಡಿದ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ, ಏನಾದರೂ ಆಗಲಿ. ನನ್ನ ಕರ್ತವ್ಯಕ್ಕೆ ನಾನು ಬದ್ಧ. ಭಾರತ ಎಂಬ ಕಲ್ಪನೆಯನ್ನು ಕಾಪಾಡುವುದೇ ನನ್ನ ಉದ್ದೇಶ ಎಂದಿದ್ದಾರೆ.
Come what may, my duty remains the same.
Protect the idea of India.
— Rahul Gandhi (@RahulGandhi) August 4, 2023
ಏನಿದು ಕೇಸ್?
ಹಲವು ವರ್ಷಗಳ ಹಿಂದೆ ಕರ್ನಾಟಕದಲ್ಲಿ ಕಾಂಗ್ರೆಸ್ನಿಂದ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತಾಡಿದ್ದ ರಾಹುಲ್ ಗಾಂಧಿ, ಭಾರತದ ಬ್ಯಾಂಕುಗಳಿಗೆ ಪಂಗನಾಮ ಹಾಕಿ ಓಡಿ ಹೋಗಿರೋ ಕಳ್ಳರ ಹೆಸರಿನಲ್ಲಿ ಮೋದಿ ಎಂಬ ಸರ್ನೇಮ್ ಇದೆ. ಮೋದಿ ಸರ್ನೇಮ್ ಹೊಂದಿರೋ ಎಲ್ಲರೂ ಕಳ್ಳರೇ ಎಂದಿದ್ದರು.
ಮೋದಿ ಉಪನಾಮದ ಬಗ್ಗೆ ಹೇಳಿಕೆ ನೀಡಿದ್ದ ಕೇಸ್ನಲ್ಲಿ ರಾಹುಲ್ ಗಾಂಧಿಗೆ ಎರಡು ವರ್ಷಗಳ ಕಾಲ ಶಿಕ್ಷೆ ಘೋಷಿಸಲಾಗಿತ್ತು. ಈಗ ಸುಪ್ರೀಂಕೋರ್ಟ್ ಇದಕ್ಕೆ ತಡೆಯಾಜ್ಞೆ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ.
ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿದ್ದ ಗುಜರಾತ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ ಸುಪ್ರೀಂಕೋರ್ಟ್, ರಾಹುಲ್ ಗಾಂಧಿ ಸಂಸದ ಸ್ಥಾನಕ್ಕೆ ಅರ್ಹರು ಎಂದಿದೆ. ಈ ಮೂಲಕ ರಾಹುಲ್ ಗಾಂಧಿ ಸಂಸತ್ ಸದಸ್ಯರ ಸ್ಥಾನಮಾನವನ್ನು ಮರುಸ್ಥಾಪಿಸಿದೆ. ಮುಂದಿನ ವರ್ಷ ನಡೆಯಲಿರೋ ಲೋಕಸಭಾ ಚುನಾವಣೆಗೂ ಸ್ಪರ್ಧಿಸಬಹುದು ಎಂದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ