ಆಪರೇಷನ್ ಸಿಂಧೂರ್ ಬಗ್ಗೆ ರಾಹುಲ್ ಗಾಂಧಿ ಟ್ವೀಟ್.. ಸಿದ್ದರಾಮಯ್ಯ ಏನಂದ್ರು..?

author-image
Ganesh
Updated On
ಆಪರೇಷನ್ ಸಿಂಧೂರ್ ಬಗ್ಗೆ ರಾಹುಲ್ ಗಾಂಧಿ ಟ್ವೀಟ್.. ಸಿದ್ದರಾಮಯ್ಯ ಏನಂದ್ರು..?
Advertisment
  • ಪಾಕ್ ಭಯೋತ್ಪಾದಕರ ವಿರುದ್ಧ ಆಪರೇಷನ್ ಸಿಂಧೂರ್
  • 80ಕ್ಕೂ ಹೆಚ್ಚು ಉಗ್ರರು ಉಡೀಸ್ ಆಗಿರುವ ಬಗ್ಗೆ ಮಾಹಿತಿ
  • ಸೇನೆಯ ಪರಾಕ್ರಮವನ್ನು ಕೊಂಡಾಡುತ್ತಿದೆ ಇಡೀ ದೇಶ

ಪಾಕ್ ಉಗ್ರರ ವಿರುದ್ಧ ಭಾರತೀಯ ಸೇನೆಯು ಆಪರೇಷನ್ ಸಿಂಧೂರ್ ನಡೆಸಿದೆ. ಮಾಹಿತಿಗಳ ಪ್ರಕಾರ 80ಕ್ಕೂ ಹೆಚ್ಚು ಉಗ್ರರು ಹತರಾಗಿದ್ದಾರೆ. ಬೆನ್ನಲ್ಲೇ ಭಾರತದಲ್ಲಿ ಸಂಭ್ರಮಾಚರಣೆ ಜೋರಾಗಿದೆ. ಸೇನೆಯ ಪರಾಕ್ರಮದ ಬಗ್ಗೆ ಕಾಂಗ್ರೆಸ್​ ನಾಯಕರು ಕೊಂಡಾಡಿದ್ದಾರೆ.

ಭಾರತೀಯ ಸೇನೆ ಕ್ಷಿಪಣಿ ದಾಳಿ ನಡೆಸಿದ ವಿಚಾರ ತಿಳಿದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ನಮ್ಮ ಸಶಸ್ತ್ರ ಪಡೆಗಳ ಮೇಲೆ ಹೆಮ್ಮೆ ಇದೆ. ಜೈ ಹಿಂದ್ ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ಸಿಎಂ ಸಿದ್ದರಾಮಯ್ಯ.. ಆಪರೇಷನ್ ಸಿಂಧೂರ್ ಹಿಂದಿರುವ ನಮ್ಮ ಸೇನೆಯ ಧೈರ್ಯಕ್ಕೆ ಸೆಲ್ಯೂಟ್ ಮಾಡ್ತೇನೆ. ಭಯೋತ್ಪಾದನೆಯನ್ನ ಭಾರತ ಯಾವತ್ತೂ ಸಹಿಸಲ್ಲ. ಪಹಲ್ಗಾಮ್‌ನಲ್ಲಿ ನಡೆದ ಕ್ರೂರ ದಾಳಿಯು ಕೇವಲ ಮುಗ್ಧ ಜೀವಗಳ ಮೇಲಲ್ಲ. ಇದು ಭಾರತದ ಕನಸುಗಳು ಮತ್ತು ಚೈತನ್ಯದ ಮೇಲಿನ ದಾಳಿಯಾಗಿದೆ. ಧೈರ್ಯಶಾಲಿ ಸೈನಿಕರ ಪ್ರತಿಯೊಂದು ಪ್ರಯತ್ನವು ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವ ಪ್ರತಿಜ್ಞೆ. ಸೇನೆಯ ಕಾರ್ಯಗಳಿಗೆ ನಾವು ಹೆಮ್ಮೆಪಡುತ್ತೇವೆ. ಭಯೋತ್ಪಾದನೆಗೆ ಇಲ್ಲಿ ಸ್ಥಾನವಿಲ್ಲ. ಭಾರತವು ಶಕ್ತಿ ಮತ್ತು ಏಕತೆಯೊಂದಿಗೆ ಪ್ರತಿಕ್ರಿಯಿಸುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಟ್ವೀಟ್ ಮಾಡಿ.. ಪಹಲ್ಗಾಮ್ ನಲ್ಲಿ ನಡೆದ ಹೇಡಿತನದ ಭಯೋತ್ಪಾದಕ ದಾಳಿಗೆ #ಆಪರೇಷನ್ ಸಿಂಧೂರ್ ಸೂಕ್ತ ಪ್ರತ್ಯುತ್ತರ. ನಾವು ಸರ್ಕಾರದೊಂದಿಗೆ ನಿಲ್ಲುತ್ತೇವೆ. ನಮ್ಮ ಭದ್ರತಾ ಪಡೆಗಳೊಂದಿಗೆ ನಿಲ್ಲುತ್ತೇವೆ. ಜೈ ಹಿಂದ್ ಎಂದು ಪ್ರತಿಕ್ರಿಯಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment