newsfirstkannada.com

ಲೋಕಸಭಾ ಚುನಾವಣೆ; ಮತ್ತೆ ಕೇರಳದ ವಯನಾಡ್ ಕ್ಷೇತ್ರದಿಂದಲೇ ರಾಹುಲ್​ ಗಾಂಧಿ ಕಣಕ್ಕೆ!

Share :

Published March 8, 2024 at 5:37pm

    2024ರ ಲೋಕಸಭಾ ಚುನಾವಣೆ ಗೆಲ್ಲಲು ಕಾಂಗ್ರೆಸ್​ ಭರ್ಜರಿ ತಯಾರಿ

    ಟಿಕೆಟ್​​ ಫೈನಲ್​​ ಬಗ್ಗೆ ಇಂಡಿಯನ್​ ನ್ಯಾಷನಲ್​ ಕಾಂಗ್ರೆಸ್ ಮಹತ್ವದ ಸಭೆ

    ಸುಮಾರು 40ಕ್ಕೂ ಹೆಚ್ಚು ಸ್ಥಾನಗಳಿಗೂ ಅಭ್ಯರ್ಥಿಗಳ ಹೆಸರು ಫೈನಲ್​..!

ಬೆಂಗಳೂರು: 2024ರ ಲೋಕಸಭಾ ಚುನಾವಣೆಗೆ ಇಂಡಿಯನ್​ ನ್ಯಾಷನಲ್​ ಕಾಂಗ್ರೆಸ್​ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ರಿಲೀಸ್​ ಮಾಡಿದೆ. ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆದ ಹೈವೋಲ್ಟೇಜ್​ ಮೀಟಿಂಗ್​ನಲ್ಲಿ ಛತ್ತೀಸ್‌ಗಢ, ಕೇರಳ ಮತ್ತಿತರ ರಾಜ್ಯಗಳ ಸುಮಾರು 40 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರು ಫೈನಲ್​ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್​ ವರಿಷ್ಠ ರಾಹುಲ್​ ಗಾಂಧಿ ಅವರು ಈ ಬಾರಿ ಕೂಡ ಕೇರಳದ ವಯನಾಡ್ ಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದಾರೆ. ಕೇರಳದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ ಎಂದು ವರದಿಯಾಗಿದೆ.

ಛತ್ತೀಸ್‌ಗಢದ ಮಾಜಿ ಸಿಎಂ ಭೂಪೇಶ್ ಬಘೇಲ್ ರಾಜನಂದಗಾಂವ್‌ನಿಂದ ಕಣಕ್ಕಿಳಿಯಲಿದ್ದಾರೆ. ಮಾಜಿ ಸಚಿವ ತಾಮ್ರಧ್ವಜ್ ಸಾಹು ಮಹಾಸಮುಂಡ್‌ ಅಭ್ಯರ್ಥಿಯಾಗಲಿದ್ದಾರೆ. ಕಾಂಗ್ರೆಸ್‌ನ ಈ ಸಭೆಯಲ್ಲಿ ದೆಹಲಿ, ಛತ್ತೀಸ್‌ಗಢ, ಕೇರಳ, ತೆಲಂಗಾಣ, ಕರ್ನಾಟಕ ಮತ್ತು ಈಶಾನ್ಯ ರಾಜ್ಯಗಳ ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರು ಪರಿಗಣಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಲೋಕಸಭಾ ಚುನಾವಣೆ; ಮತ್ತೆ ಕೇರಳದ ವಯನಾಡ್ ಕ್ಷೇತ್ರದಿಂದಲೇ ರಾಹುಲ್​ ಗಾಂಧಿ ಕಣಕ್ಕೆ!

https://newsfirstlive.com/wp-content/uploads/2024/03/RAHUL-GANDHI.jpg

Load More