newsfirstkannada.com

ಸ್ಮೃತಿ ಇರಾನಿ VS ರಾಹುಲ್​ ಗಾಂಧಿ; ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೈಯಲ್ಲಿ ಮುಂದಿನ ಅಧಿಕಾರ?

Share :

Published May 2, 2024 at 6:20am

    24 ಗಂಟೆಗಳ ಒಳಗೆ ಅಮೇಥಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್​ ಅಭ್ಯರ್ಥಿ ಯಾರು?

    ಮೇ 20ರಂದು ನಡೆಯಲಿರೋ ಐದನೇ ಹಂತದ ಲೋಕಸಭೆ ಚುನಾವಣೆ 2024

    ಅಮೇಥಿಯಿಂದ ಮೂರನೇ ಬಾರಿಗೆ ನಾಮಪತ್ರ ಸಲ್ಲಿಸಿರುವ ಸ್ಮೃತಿ ಇರಾನಿ

ಲಕ್ನೋ: ಇತ್ತೀಚೆಗೆ ಉತ್ತರ ಪ್ರದೇಶದ ಪ್ರತಿಷ್ಠಿತ ಅಮೇಠಿ ಮತ್ತು ರಾಯ್‌ಬರೇಲಿ ಕ್ಷೇತ್ರಗಳ ಲೋಕಸಭಾ ಅಭ್ಯರ್ಥಿಗಳ ಬಗ್ಗೆ ಎಲ್ಲರಲ್ಲೂ ಸಾಕಷ್ಟು ಕುತೂಹಲ ಮೂಡಿತ್ತು. ಇದೀಗ ಆ ಸಸ್ಪೆನ್ಸ್​ಗೆ ಅಂತ್ಯ ಹಾಡಲು ಕಾಂಗ್ರೆಸ್ ಸಜ್ಜಾಗಿದ್ದು, ಪಕ್ಷದ ಕೇಂದ್ರ ಚುನಾವಣಾ ಸಮಿತಿಯು (ಸಿಇಸಿ) ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನಿರ್ಧಾರ ತೆಗೆದುಕೊಳ್ಳಲು ಅಧಿಕಾರ ನೀಡಿದೆ. ಇನ್ನು, 24 ಗಂಟೆಗಳ ಒಳಗೆ ಪಕ್ಷದ ಅಭ್ಯರ್ಥಿ ಯಾರೆಂದು ಪ್ರಕಟಿಸಲಾಗುವುದು. ಇಲ್ಲಿ ಯಾರೂ ಹೆದರುವುದಿಲ್ಲ, ಯಾರೂ ಓಡಿಹೋಗುವುದಿಲ್ಲ ಎಂದು ಪಕ್ಷದ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

ಇದನ್ನೂ ಓದಿ: ಅಮೇಥಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ರಾಹುಲ್​ ಗಾಂಧಿ ಕಣಕ್ಕೆ? ಇಬ್ಬರಲ್ಲಿ ಗೆಲ್ಲೋದ್ಯಾರು?

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ.. ಪ್ರಧಾನಿ ಮೋದಿಗೆ ರಾಹುಲ್‌ ಗಾಂಧಿ ಖಡಕ್ ಪ್ರಶ್ನೆ; ಹೇಳಿದ್ದೇನು?

ಮಂಗಳವಾರ ಬಿಡುಗಡೆಯಾದ ಲೋಕಸಭೆ ಚುನಾವಣೆಯ ಇತ್ತೀಚಿನ ಹೆಸರುಗಳ ಪಟ್ಟಿಯಲ್ಲಿ ಅಮೇಥಿ ಮತ್ತು ರಾಯ್‌ಬರೇಲಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಹೆಸರಿಸದೆ ಕಾಂಗ್ರೆಸ್ ಕುತೂಹಲ ಉಳಿಸಿಕೊಂಡಿದೆ. ಘೋಷಣೆ ವಿಳಂಬವಾಗುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಿನ್ನೆ ಅಮೇಥಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಇದೀಗ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನಿರ್ಧಾರ ತೆಗೆದುಕೊಳ್ಳಲು ಅಧಿಕಾರ ನೀಡಿದೆ. ಎರಡೂ ಸ್ಥಾನಗಳಿಗೆ ಐದನೇ ಹಂತವಾದ ಮೇ 20 ರಂದು ಚುನಾವಣೆ ನಡೆಯಲಿದೆ. ಯುಪಿಯ 80 ಲೋಕಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ 17 ರಲ್ಲಿ ಸ್ಪರ್ಧಿಸಲಿದೆ. ಉಳಿದ 63 ಇಂಡಿಯಾ ಬ್ಲಾಕ್ ಮಿತ್ರ ಸಮಾಜವಾದಿ ಪಕ್ಷ ಮತ್ತು ಪ್ರಾದೇಶಿಕ ಪಕ್ಷಗಳಿಗೆ ಹೋಗಲಿದೆ.

ಇದನ್ನೂ ಓದಿ: ದುನಿಯಾ ವಿಜಯ್ ಅಭಿಯನದ ಸಿನಿಮಾದಲ್ಲಿ ‘ಟೋಬಿ’.. ರಾಜ್ ಬಿ ಶೆಟ್ಟಿದು ಯಾವ ಪಾತ್ರ?

ಇನ್ನು, 2019ರಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಅಮೇಥಿಯಿಂದ ಕಣಕ್ಕಿಳಿಸಲಾಗಿತ್ತು. ಆದರೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಈ ಬಾರಿಯೂ ಕೂಡ ಅಮೇಥಿ ಮತ್ತು ಕೇರಳದ ವಯನಾಡ್‌ನಲ್ಲಿ ಸ್ಮೃತಿ ಇರಾನಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಆದರೆ ಇನ್ನೂ 24 ಗಂಟೆಗಳ ಒಳಗೆ ಪಕ್ಷದ ಅಭ್ಯರ್ಥಿ ಯಾರೆಂದು ಪ್ರಕಟಿಸಲಾಗುವುದು. ಈಗಾಗಲೇ ಅಮೇಥಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ನಾಮಪತ್ರ ಸಲ್ಲಿಸಿ ಮತ್ತೊಮ್ಮೆ ಕಾಂಗ್ರೆಸ್​​ಗೆ ಸೆಡ್ಡು ಹೊಡೆಯಲು ತಯಾರಿ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಕುರಿತಾದ ಗದ್ದಲದ ಕುರಿತು ಕಾಂಗ್ರೆಸ್ ನಾಯಕ ರಾಜೀವ್ ಶುಕ್ಲಾ ಅವರು ಸಿಇಸಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸ್ಮೃತಿ ಇರಾನಿ VS ರಾಹುಲ್​ ಗಾಂಧಿ; ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೈಯಲ್ಲಿ ಮುಂದಿನ ಅಧಿಕಾರ?

https://newsfirstlive.com/wp-content/uploads/2024/05/rahul3.jpg

Load More