newsfirstkannada.com

ಭಾರತ್ ಜೋಡೋ ನ್ಯಾಯ್‌ ಯಾತ್ರೆ ಅಂತ್ಯ.. ರಾಹುಲ್ ಗಾಂಧಿ ಮುಂದಿನ ಪ್ಲಾನ್ ಏನು?

Share :

Published March 17, 2024 at 9:10am

Update March 17, 2024 at 9:34am

    63 ದಿನ.. 14 ರಾಜ್ಯಗಳು.. 100 ಲೋಕಸಭಾ ಕ್ಷೇತ್ರದಲ್ಲಿ ರಾಹುಲ್‌ ಸಂಚಾರ

    ಮೋದಿ ಗ್ಯಾರಂಟಿ ವಿರುದ್ಧ 15 ಗ್ಯಾರಂಟಿಯನ್ನು ಘೋಷಿಸಿರುವ ಕಾಂಗ್ರೆಸ್

    ಇಂದು ಮುಂಬೈನಲ್ಲಿ ಇಂಡಿಯಾ ಮೈತ್ರಿ ನಾಯಕರಿಂದ ಶಕ್ತಿ ಪ್ರದರ್ಶನ

63 ದಿನ.. 14 ರಾಜ್ಯಗಳು.. 100 ಲೋಕಸಭಾ ಕ್ಷೇತ್ರ.. 337 ವಿಧಾನಸಭಾ ಕ್ಷೇತ್ರ.. 6,713 ಕಿಲೋ ಮೀಟರ್ ದೂರ. ಮಣಿಪುರದಿಂದ ಆರಂಭವಾದ ಭಾರತ್ ಜೋಡೋ ನ್ಯಾಯ ಯಾತ್ರೆ ಮುಂಬೈಯನ್ನು ತಲುಪಿದ್ದು, ಅಂತ್ಯ ಮಾಡಲಾಗಿದೆ. ಜನವರಿ 14ರಂದು ಮಣಿಪುರದ ಇಂಫಾಲ್‌ನಲ್ಲಿ ಶುರುವಾದ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆ ಅಂತಿಮ ಹಂತಕ್ಕೆ ಬಂದಿದೆ. ನಾಗಾಲ್ಯಾಂಡ್‌, ಅಸ್ಸಾಂ, ಅರುಣಾಚಲಪ್ರದೇಶ, ಮೇಘಾಲಯ, ಪಶ್ಚಿಮ ಬಂಗಾಳ, ಬಿಹಾರದ ಮೂಲಕ ಉತ್ತರ ಭಾರತವನ್ನ ತಲುಪಿತ್ತು. ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್‌ ಮೂಲಕ ಹಾದು ಹೋದ ರಾಹುಲ್ ಗಾಂಧಿ ಯಾತ್ರೆ ಮಾರ್ಚ್‌ 16ರಂದು ಮುಂಬೈ ಮಹಾನಗರವನ್ನು ತಲುಪಿತ್ತು.

ಇಂದು ಮುಂಬೈನಲ್ಲಿ ‘ಇಂಡಿಯಾ’ ನಾಯಕರ ಸಮಾಗಮ
ಲೋಕಸಭಾ ಚುನಾವಣೆಗೆ ಒಗ್ಗಟ್ಟಿನ ಶಕ್ತಿ ಪ್ರದರ್ಶನ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆ ಅಂತ್ಯವಾಗಿದೆ. ಮುಂಬೈ ಶಿವಾಜಿ ಪಾರ್ಕ್‌ನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ. ಸಮಾಪ್ತಿ ಸಮಾರಂಭದಲ್ಲಿ ಇಂಡಿಯಾ ಮೈತ್ರಿಕೂಟದ ಘಟಾನುಘಟಿ ನಾಯಕರು ಆಗಮಿಸಿ ಒಗ್ಗಟ್ಟಿನ ಶಕ್ತಿ ಪ್ರದರ್ಶನ ಮಾಡುತ್ತಿದ್ದಾರೆ. ಮುಂಬೈನಲ್ಲಿ ರಾಹುಲ್ ಗಾಂಧಿ ಅವರಿಗೆ ಸಹೋದರಿ ಪ್ರಿಯಾಂಕಾ ಕೂಡ ಸಾಥ್ ನೀಡಿದ್ದಾರೆ.

ಯಾರೆಲ್ಲಾ ಬರ್ತಾರೆ?
ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಇಂಡಿಯಾ ಮೈತ್ರಿಕೂಟದಲ್ಲಿ ಘಟಾಘಟಿ ನಾಯಕರೇ ಆಗಮಿಸುತ್ತಿದ್ದಾರೆ. ತಮಿಳುನಾಡಿನ ಸಿಎಂ ಎಂ.ಕೆ. ಸ್ಟಾಲಿನ್, ಮಹಾರಾಷ್ಟ್ರ ಮಾಜಿ ಸಿಎಂ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ರಾಷ್ಟ್ರೀಯ ಜನತಾ ದಳ ನಾಯಕ ತೇಜಸ್ವಿ ಯಾದವ್ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಗಿಯಾಗೋದು ಖಚಿತವಾಗಿದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷ ಕಿಸಾನ್ ನ್ಯಾಯ್, ಯುವ ನ್ಯಾಯ್ ಹಾಗೂ ಮಹಿಳಾ ನ್ಯಾಯ್​​ ಸೇರಿ 15 ಗ್ಯಾರಂಟಿಗಳನ್ನು ಘೋಷಿಸಿದೆ. ಈ ಎಲ್ಲ ಗ್ಯಾರಂಟಿಗಳು ಬಡವರಿಗೆ ಅನುಕೂಲ ಆಗುವಂತವು. ಎಲ್ಲರಿಗೂ ಸಮಾನ ನ್ಯಾಯ ಸಿಗಬೇಕು. ಸಾಮಾಜಿಕ, ರಾಜಕೀಯ ಸಮಾನತೆ ಎಲ್ಲರಿಗೆ ಸಿಗಬೇಕು. ಸಂಘಟಿತ, ಅಸಂಘಟಿತ ಕಾರ್ಮಿಕರಿಗೆ ಕಾರ್ಯಕ್ರಮ, ಸಾಮಾಜಿಕ ನ್ಯಾಯ, ಕನಿಷ್ಠ ವೇತನ ಕಾಯ್ದೆ. ಭವಿಷ್ಯ ನಿಧಿ ಕಾಯ್ದೆ, ವಿಮೆ ಕಾಯ್ದೆ ಹೊಸ ಗ್ಯಾರಂಟಿಯಲ್ಲಿ ಇರಲಿದೆ. ನಮ್ಮ ಸರ್ಕಾರ ಬಂದರೆ ಇವುಗಳನ್ನು ಜಾರಿಗೆ ತರಲಿದ್ದೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಲೋಕಸಭಾ ಚುನಾವಣೆಗೂ ಮುನ್ನ ದೇಶಾದ್ಯಂತ ರಾಹುಲ್ ಗಾಂಧಿ ಅವರು ಅವರು ಎರಡು ಬಾರಿ ಯಾತ್ರೆ ನಡೆಸಿದ್ದಾರೆ. ಭಾರತ್ ಜೋಡೋ ಯಾತ್ರೆ ಅದಾದ ಬಳಿಕ ಭಾರತ್ ಜೋಡೋ ನ್ಯಾಯ ಯಾತ್ರೆಯಿಂದ ದೇಶದ ಗಮನ ಸೆಳೆದಿದ್ದಾರೆ. 63 ದಿನಗಳ ಕಾಲ ನಡೆದ ರಾಹುಲ್ ಗಾಂಧಿ ಪಾದಯಾತ್ರೆ ಸಮಾಪ್ತಿ ಆಗಿದೆ. ಇದೀಗ ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿ ಆಗಿರೋದ್ರಿಂದ ಕಾಂಗ್ರೆಸ್‌ ನಾಯಕರ ಈ ಯಾತ್ರೆ ಹಾಗೂ ಇಂಡಿಯಾ ಮೈತ್ರಿಕೂಟದ ಶಕ್ತಿ ಪ್ರದರ್ಶನ ಮತದಾರರ ಮನ ಗೆಲ್ಲುತ್ತಾ ಕಾದು ನೋಡಬೇಕು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಭಾರತ್ ಜೋಡೋ ನ್ಯಾಯ್‌ ಯಾತ್ರೆ ಅಂತ್ಯ.. ರಾಹುಲ್ ಗಾಂಧಿ ಮುಂದಿನ ಪ್ಲಾನ್ ಏನು?

https://newsfirstlive.com/wp-content/uploads/2024/03/Rahul-gandhi-Nyaya-Yatra.jpg

Load More