/newsfirstlive-kannada/media/post_attachments/wp-content/uploads/2025/03/bangaluru-rain2.jpg)
ಸಂಜೆಯಾಗುತ್ತಿದ್ದಂತೆ ಸಿಲಿಕಾನ್ ಸಿಟಿಯಲ್ಲಿ ಮತ್ತೆ ವರುಣನ ಅಬ್ಬರ ಶುರುವಾಗಿದೆ. ಕೋರಮಂಗಲ, ಆಡುಗೋಡಿ, ಎಲೆಕ್ಟ್ರಾನ್ ಸಿಟಿ ಸುತ್ತಮುತ್ತ ಇಂದು ಮಳೆಯಾಗಿದ್ದು, ಬಿಸಿಲ ಬೇಗೆಗೆ ಕಾದಿದ್ದವರು ಫುಲ್ ಕೂಲ್ ಆಗಿದ್ದಾರೆ.
ನಗರದ ಹಲವೆಡೆ ಇಂದು ಸಂಜೆ ಮುಂಗಾರು ಪೂರ್ವ ಮಳೆಯಾಗಿದ್ದು, ರಸ್ತೆಯಲ್ಲಿ ಸಿಲುಕಿದ್ದ ವಾಹನ ಸವಾರರು ಪರದಾಡುವ ದೃಶ್ಯ ಕಂಡು ಬಂದಿದೆ. ಬೆಳಗ್ಗೆಯಿಂದಲೇ ಬೆಂಗಳೂರಿನ ಹಲವೆಡೆ ಮೋಡ ಕವಿದ ವಾತಾವರಣ ಇತ್ತು.
ಸಾಮಾನ್ಯವಾಗಿ ಏಪ್ರಿಲ್ ತಿಂಗಳು ಬೆಂಗಳೂರಲ್ಲಿ ಬಿಸಿಲಿನ ವಾತಾವರಣ ಇರೋದು ಸಾಮಾನ್ಯ. ಆದರೆ ಈ ಬಾರಿ ಸಿಲಿಕಾನ್ ಸಿಟಿ ಫುಲ್ ಕೂಲ್ ಆಗಿದೆ. ಇವತ್ತು ಸಂಡೇ ಆಗಿರೋದ್ರಿಂದ ಕೂಲ್ ವಾತಾವರಣ ನೋಡಿ ಸಿಲಿಕಾನ್ ಸಿಟಿ ಮಂದಿ ಫುಲ್ ಖುಷಿ ಆಗಿದ್ದಾರೆ. ಮಳೆಯ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಡು ಸಿಲಿಕಾನ್ ಸಿಟಿಯ ಸೊಬಗು ಹೆಚ್ಚಿಸಿದ್ದಾರೆ.
ಹವಾಮಾನ ಇಲಾಖೆ ಅಲರ್ಟ್ ಏನು?
ಕೆಲ ದಿನಗಳಿಂದ ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆ ಉತ್ತಮವಾಗಿದೆ. ಬೆಂಗಳೂರಲ್ಲಿ ಮುಂದಿನ ಕೆಲವು ದಿನಗಳು ವರುಣನ ಅಬ್ಬರ ಮುಂದುವರೆಯುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದ್ದು, ಏಪ್ರಿಲ್ 24, 25ರಂದು ಮತ್ತೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಇದನ್ನೂ ಓದಿ: RCB ಪಂದ್ಯಕ್ಕೆ ಮಳೆ ಬಂದ್ರೂ ಏನೂ ಆಗಲ್ಲ.. ಚಿನ್ನಸ್ವಾಮಿ ಸ್ಟೇಡಿಯಂಗೆ ಇದೆ ಉನ್ನತ ತಂತ್ರಜ್ಞಾನದ ಟಚ್!
ಇನ್ನು ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ದಾವಣಗೆರೆ, ರಾಮನಗರ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ ಜಿಲ್ಲೆಯ ಒಂದು ಅಥವಾ ಎರಡು ಕಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರದ ಒಂದು ಅಥವಾ 2 ಕಡೆ ಗುಡುಗು ಸಹಿತ ಭಾರೀ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಗಾಳಿ ಸಹಿತ ಮಳೆಯಿಂದಾಗಿ ಕೆಲವು ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ವ್ಯತ್ಯಯ ಆಗಲಿದೆ. ಮರದ ಕೊಂಬೆಗಳು ಮುರಿದು ಬೀಳುವ ಸಾಧ್ಯತೆ ಇದೆ. ಈ ಭಾಗದ ನಿವಾಸಿಗಳು ಸಾಧ್ಯವಾದಷ್ಟು ಮನೆಯೊಳಗೆ ಇರಿ, ಕಿಟಕಿಗಳು ಮತ್ತು ಬಾಗಿಲುಗಳನ್ನು ಮುಚ್ಚಬೇಕು.
ಮರಗಳ ಕೆಳಗೆ ಆಶ್ರಯ ಪಡೆಯಬೇಡಿ. ವಾಹನ ಚಲಾಯಿಸುತ್ತಿದ್ದರೆ ಎಚ್ಚರಿಕೆಯಿಂದ ಚಾಲನೆ ಮಾಡಿ ಹಾಗೂ ಸಾಧ್ಯವಾದರೆ ಪ್ರಯಾಣವನ್ನು ತಪ್ಪಿಸಿ ಅನ್ನೋ ಮುನ್ಸೂಚನೆ ನೀಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ