/newsfirstlive-kannada/media/post_attachments/wp-content/uploads/2024/05/RAIN-15.jpg)
ಬೆಂಗಳೂರು: ರಾಜ್ಯದ ಹಲವಡೆ ಸುರಿಯುತ್ತಿರುವ ಮಳೆ ಮುಂದಿನ ಎರಡು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರಿನ ಮೂಡಿಗೆರೆ ಚಿತ್ರದುರ್ಗದ ಹಿರಿಯೂರು, ಮಂಡ್ಯದ ಕೆ.ಆರ್ ಪೇಟೆ, ರಾಮನಗರ, ಮೈಸೂರು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ವರ್ಷಧಾರೆಯಾಗಿದೆ.
ಇಂದು ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅರ್ಲಟ್ ಘೋಷಿಸಿದೆ. ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ದಾವಣಗೆರೆ ಮತ್ತು ವಿಜಯನಗರದಲ್ಲಿ ಮುಂದಿನ 24 ಗಂಟೆ ಯಲ್ಲೋ ಅರ್ಲಟ್ ಘೋಷಿಸಿದೆ.
ಇದನ್ನೂ ಓದಿ:ನಾಳೆ ಆರ್​ಸಿಬಿ ಪಂದ್ಯ.. ಇವತ್ತು ಫೈನಲ್​​ಗೆ ಹೋಗೋದು ಯಾರು..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us