newsfirstkannada.com

Rain alert: ಹವಾಮಾನ ಇಲಾಖೆಯಿಂದ ಮಳೆ ಬಗ್ಗೆ ಎಚ್ಚರಿಕೆ; ಯಾವೆಲ್ಲ ಜಿಲ್ಲೆಗಳಿಗೆ ಅಲರ್ಟ್​ ಘೋಷಣೆ..?

Share :

20-09-2023

    ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಿದೆ

    ಬೆಂಗಳೂರಲ್ಲಿ ಇವತ್ತು ಮಳೆಯಾಗಲಿದೆಯಾ?

    ಮುಂದಿನ 2 ದಿನದಲ್ಲಿ ಮಳೆಯ ಪ್ರಮಾಣ ಹೇಗಿರಲಿದೆ?

ಬೆಂಗಳೂರು: ರಾಜ್ಯದಲ್ಲಿ ಮುಂದಿನ 2 ದಿನಗಳ ಕಾಲ ಮಳೆಯ ಮುನ್ಸೂಚನೆ ನೀಡಲಾಗಿದೆ. ಮುಂದಿನ 2 ದಿನಗಳ ಕಾಲ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ. ಇರುತ್ತದೆ. ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣ ಇದೆ. ಇದರಿಂದ ಮೀನುಗಾಗರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಇನ್ನು ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯಪುರ, ಯಾದಗಿರಿ, ರಾಯಚೂರು, ಚಿತ್ರದುರ್ಗ, ತುಮಕೂರು, ರಾಮನಗರ, ಚಾಮರಾಜಗರ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಉತ್ತಮ ಮಳೆಯಾಗೋ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಸೂಚನೆ ನೀಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Rain alert: ಹವಾಮಾನ ಇಲಾಖೆಯಿಂದ ಮಳೆ ಬಗ್ಗೆ ಎಚ್ಚರಿಕೆ; ಯಾವೆಲ್ಲ ಜಿಲ್ಲೆಗಳಿಗೆ ಅಲರ್ಟ್​ ಘೋಷಣೆ..?

https://newsfirstlive.com/wp-content/uploads/2023/07/KARNATAKA_RAIN.jpg

Load More