/newsfirstlive-kannada/media/post_attachments/wp-content/uploads/2024/06/RAIN-RAIN-3.jpg)
ರಾಜ್ಯದಲ್ಲಿ ಮಳೆರಾಯನ ಅಬ್ಬರ ಮುಂದುವರೆದಿದೆ. ನಿನ್ನೆಯೂ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದ್ದು, ಮುಂದಿನ ಐದು ದಿನಗಳ ಕಾಲ ಮತ್ತೆ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಇಂದಿನಿಂದ ಜೂನ್ 29ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆ ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗಿದೆ. ಇಂದೂ ಕೂಡ ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ. ಇಂದು ಉತ್ತರ ಒಳನಾಡು ಭಾಗಗಕ್ಕೂ ಪ್ರತ್ಯೇಕ ಅಲರ್ಟ್ ನೀಡಲಾಗಿದೆ. ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ರಾಯಚೂರು, ಬಳ್ಳಾರಿ, ಯಾದಗಿರಿ ಭಾಗದಲ್ಲಿ ಭಾರೀ ಮಳೆಯಾಗು ಮುನ್ಸೂಚನೆ ಇದೆ ಎಂದಿದೆ.
ಇದನ್ನೂ ಓದಿ:ಒಂದಲ್ಲ.. ಆಸ್ಟ್ರೇಲಿಯಾ ವಿರುದ್ಧ ಒಟ್ಟು 3 ಲೆಕ್ಕ ಚುಕ್ತಾ ಬಾಕಿ ಇದೆ.. ಇಂದು ಪ್ರತೀಕಾರದ ಮ್ಯಾಚ್..!
ಜೂನ್ 27ರವರೆಗೆ ಆರೆಂಜ್ ಅಲರ್ಟ್!
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಿಗೆ ಜೂನ್ 27ರ ವರೆಗೆ ಆರೆಂಜ್ ಅಲರ್ಟ್ ಹಾಗೂ ಉತ್ತರ ಒಳನಾಡು ಪ್ರದೇಶಗಳಿಗೆ 27ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
- ಆರೆಂಜ್ ಅಲರ್ಟ್: ಮಂಗಳೂರು, ಉಡುಪಿ, ಸುಳ್ಯ, ಪುತ್ತೂರು, ಸಂಪಾಜೆ, ಕುಂದಾಪುರ, ಆದಿ ಉಡುಪಿ, ಆಗುಂಬೆ, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ದೊಡ್ಡಬಳ್ಳಾಪುರ, ಕೊಡಗು
- ಯೆಲ್ಲೋ ಅಲರ್ಟ್: ಬಾಗಲಕೋಟೆ, ಧಾರವಾಡ, ಯಾದಗಿರಿ, ಬಳ್ಳಾರಿ, ರಾಯಚೂರು, ಬೆಳಗಾವಿ, ಬೀದರ್, ಹಾವೇರಿ
ಇದನ್ನು ಓದಿ:ಚಾರ್ಜ್ಶೀಟ್ ಆದ್ಮೆಲೆ ದರ್ಶನ್ಗೆ ಮತ್ತೊಂದು ಸಂಕಷ್ಟ.. ಸಿನಿಮಾ ಮಾಡೋರಿಗೂ ಆಘಾತಕಾರಿ ವಿಚಾರ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ