/newsfirstlive-kannada/media/post_attachments/wp-content/uploads/2025/03/bangaluru-rain2.jpg)
ಬೆಂಗಳೂರು: ಇಂದಿನಿಂದ ಒಂದು ವಾರ ಕಾಲ ರಾಜ್ಯದಲ್ಲಿ ಗಾಳಿ ಸಹಿತ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತಗಳು ಚುರುಕುಗೊಂಡ ಹಿನ್ನೆಲೆಯಲ್ಲಿ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಬೀಳಲಿದೆ. ವಿವಿಧ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಎಂದಿದೆ.
ಇದನ್ನೂ ಓದಿ: ಬೆಲೆ ಏರಿಕೆ, ಗೊಂದಲ, ಗದ್ದಲದ ನಡುವೆ ದೆಹಲಿಗೆ ಫ್ಲೈಟ್ ಬುಕ್ ಮಾಡಿದ CM, DCM.. ಮುಂದೇನು..?
ಏಪ್ರಿಲ್ 03, ಏಪ್ರಿಲ್ 04, ಏಪ್ರಿಲ್ 05ರಂದು ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗುವುದು. ಹಾಸನ, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಮತ್ತು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲೂ ಮಳೆ ಬೀಳಲಿದೆ. ಈ ಭಾಗದಲ್ಲೂ ಮಳೆಯ ಮುಂಜಾಗೃತ ಕ್ರಮಗಳನ್ನ ಕೈಕೊಳ್ಳಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: RCB vs GT: ಬೆಂಗಳೂರಲ್ಲೇ ಪಂದ್ಯ, ಹೆಚ್ಚು ಬಾರಿ ಗೆದ್ದ ತಂಡ ಯಾವುದು? ಕಂಪ್ಲೀಟ್ ಮಾಹಿತಿ..!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ 'ರನ್ ಭೂಮಿ' ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್