ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ.. ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

author-image
Ganesh
Updated On
ಮಳೆ, ಪ್ರವಾಹ, ಸಂಕಷ್ಟ.. ಶಾಲಾ-ಕಾಲೇಜುಗಳಿಗೆ ರಜೆ.. ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
Advertisment
  • ರಾಜ್ಯದ ಹಲವು ಭಾಗದಲ್ಲಿ ಅಬ್ಬರಿಸಲಿರುವ ವರುಣ
  • ಕರಾವಳಿ ಭಾಗದಲ್ಲಿ ಮುಂದುವರೆದ ವರುಣಾರ್ಭಟ
  • ಇವತ್ತು ಬೆಂಗಳೂರಲ್ಲಿ ಮಳೆ ಬರುತ್ತಾ? ಮಾಹಿತಿ ಏನು?

ಬೆಂಗಳೂರು: ಕರಾವಳಿ ಜಿಲ್ಲೆಗಳಿಗೆ ಇಂದಿನಿಂದ 4 ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಜುಲೈ 8 ರವರೆಗೆ ಆರೆಂಜ್ ಅಲರ್ಟ್, ಜುಲೈ 9 ರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮಳೆ ಬೀಳುವ ಸೂಚನೆ ಇದೆ. ಇಂದು ಬೆಳಗಾವಿ, ಧಾರವಾಡ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ:‘ಅವರು ಅಳುತ್ತಿದ್ದರು.. ಆಗ ನನ್ನ ಕಣ್ಣಲ್ಲೂ ನೀರು ಬಂತು..’ ರೋಹಿತ್​​ ಕಣ್ಣೀರಿಟ್ಟ ಕ್ಷಣ ವಿವರಿಸಿದ ಕೊಹ್ಲಿ

ಮಲೆನಾಡು ಭಾಗಗಳಿಗೂ ಇವತ್ತು ಆರೆಂಜ್ ಅಲರ್ಟ್ ಇದೆ. ಮುಂದಿನ 3 ದಿನ ಆರೆಂಜ್ ಅಲರ್ಟ್, 2 ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ನಗರದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಸಿಕ್ಕಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment