48 ಗಂಟೆಯಲ್ಲಿ.. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯ ಎಚ್ಚರಿಕೆ

author-image
Ganesh
Updated On
48 ಗಂಟೆಯಲ್ಲಿ.. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯ ಎಚ್ಚರಿಕೆ
Advertisment
  • ಹವಾಮಾನ ಇಲಾಕೆ ಕೊಟ್ಟ ಎಚ್ಚರಿಕೆ ಏನು ಗೊತ್ತಾ?
  • ಬೆಂಗಳೂರಿಗೆ ಯೆಲ್ಲೋ ಅಲರ್ಟ್​ ಘೋಷಣೆ ಆಗಿದೆ
  • ಬೆಳಗ್ಗೆಯಿಂದಲೇ ಜಿಟಿಜಿಟಿ ಮಳೆ ಶುರುವಾಗಿದೆ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಗುಡುಗು, ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ತಿಳಿಸಿದೆ.

ಇಂದು ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರದ ಕೆಲ ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ. ತುಮಕೂರು, ಬೀದರ್, ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀಟರ್ ವೇಗದಲ್ಲಿ ಬಿರುಗಾಳಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ:ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟಗಳು ಎದುರಾಗೋದು ಪಕ್ಕಾ.. ಯಾಕಂದರೆ..!

ಇನ್ನು ಬೆಂಗಳೂರಲ್ಲಿ ಬೆಳಗ್ಗೆಯಿಂದ ಜಿಟಿಜಿಟಿ ಮಳೆಯಾಗುತ್ತಿದೆ. ಟೌನ್ ಹಾಲ್, ಮೆಜೆಸ್ಟಿಕ್, ಲಾಲ್​ಬಾಗ್, ಕತ್ರಿಗುಪ್ಪೆ ಸೇರಿದಂತೆ ಹಲವು ಭಾಗಗಳಲ್ಲಿ ತುಂತುರು ಮಳೆ ಬೀಳುತ್ತಿದೆ. ಇನ್ನು ಹವಾಮಾನ ಇಲಾಖೆ ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಇದನ್ನೂ ಓದಿ:ಕೊರೊನಾ ವ್ಯಾಕ್ಸಿನ್ ಹಿಂತೆಗೆದುಕೊಂಡ AstraZeneca; ಲಸಿಕೆ ಪಡೆದವರಲ್ಲಿ ಹೆಚ್ಚಿದ ಮತ್ತಷ್ಟು ಆತಂಕ..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment