3 ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆ
ಮುನ್ನೆಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ
ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ರಾಜ್ಯದಲ್ಲಿ ಇನ್ನೂ 3 ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ. ಮಾತ್ರವಲ್ಲ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಯಾವ್ಯಾವ ಜಿಲ್ಲೆಗಳಿಗೆ ಎಚ್ಚರಿಕೆ..?
ಹವಾಮಾನ ಇಲಾಖೆಯ ಸೂಚನೆಯಂತೆ ನಾಳೆಯಿಂದ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳು, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ, ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ ಗರಿಷ್ಠ ಉಷ್ಣಾಂಶವು 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ