Advertisment

ಭೀಕರ ಭೂಕುಸಿತ.. ಮೃತರ ಸಂಖ್ಯೆ 24ಕ್ಕೆ ಏರಿಕೆ.. ನೂರಾರು ಮಂದಿ ಜೀವಂತ ಸಮಾಧಿ ಆಗಿರುವ ಆತಂಕ..

author-image
Veena Gangani
Updated On
ಭೀಕರ ಭೂಕುಸಿತ.. ಮೃತರ ಸಂಖ್ಯೆ 24ಕ್ಕೆ ಏರಿಕೆ.. ನೂರಾರು ಮಂದಿ ಜೀವಂತ ಸಮಾಧಿ ಆಗಿರುವ ಆತಂಕ..
Advertisment
  • ಧಾರಾಕಾರ ಮಳೆಗೆ ವಯನಾಡಿನಲ್ಲಿ ಸಂಭವಿಸಿದ ಭಾರೀ ಭೂಕುಸಿತ
  • ರಕ್ಷಣಾ ಕಾರ್ಯಾಚರಣೆ ಜೋರಾಗಿ ನಡೆಯುತ್ತಿದೆ, ಮಳೆ ಅಡ್ಡಿ
  • ಭೂಕುಸಿತದಿಂದ ಮನೆ, ಕಾರುಗಳಿಗೆ ಭಾರೀ ಹಾನಿ ಆಗಿದೆ

ಕೇರಳದ ವಯನಾಡಿನಲ್ಲಿ ಮಳೆಯಿಂದಾಗಿ ಭಾರೀ ಭೂ-ಕುಸಿತ ಸಂಭವಿಸಿದ್ದು ಸಾವಿನ ಸಂಖ್ಯೆ 24ಕ್ಕೆ ಏರಿಕೆ ಆಗಿದೆ. ಜೊತೆಗೆ ಮಣ್ಣಿನ ಅಡಿಯಲ್ಲಿ ನೂರಾರು ಮಂದಿ ಜೀವಂತ ಸಮಾಧಿ ಆಗಿರುವ ಆತಂಕ ವ್ಯಕ್ತವಾಗುತ್ತಿದೆ. ವಯನಾಡು ಜಿಲ್ಲೆಯಲ್ಲಿ ಭೂಕುಸಿತದ ನಂತರ ರಕ್ಷಣಾ ಕಾರ್ಯಾಚರಣೆಗಾಗಿ ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳು ಫೀಲ್ಡಿಗೆ ಇಳಿದಿವೆ.

Advertisment

publive-image

ಇದನ್ನೂ ಓದಿ:ಶಿರೂರು ಘಟನೆ ಮಾಸುವ ಮುನ್ನವೇ ಮತ್ತೊಂದು ಭೂಕುಸಿತ.. ಒಂದು ಮಗು ಸೇರಿ 7 ಜನರು ಸಾವು

ಅಲ್ಲಿನ ಜನರಿಗೆ ಸಹಾಯ ಮಾಡಲು ಸಹಾಯವಾಣಿ ಸಂಖ್ಯೆಗಳನ್ನು ನೀಡಲಾಗಿದೆ. ಮೆಪ್ಪಾಡಿ, ಮುಂಡಕ್ಕೈ ಟೌನ್ ಮತ್ತು ಚುರಲ್ ಮಾಲಾದಲ್ಲಿ ಇಂದು ಮುಂಜಾನೆ  ಅನಾಹುತ ಆಗಿದೆ. ಭೂಕುಸಿತದಿಂದ 19 ಮಂದಿ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಭೂಕುಸಿತದಲ್ಲಿ ಗಾಯಗೊಂಡ 50 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಡಕ್ಕೈ ಟೌನ್‌ನಲ್ಲಿ ರಾತ್ರಿ 1 ಗಂಟೆ ಸುಮಾರಿಗೆ ಭಾರೀ ಮಳೆಯ ಸಂದರ್ಭದಲ್ಲಿ ಮೊದಲ ಭೂಕುಸಿತ ಸಂಭವಿಸಿದೆ. ಮುಂಡಕ್ಕೈನಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಮುಂಜಾನೆ 4 ಗಂಟೆ ಸುಮಾರಿಗೆ ಚುರಲ್ ಮಾಳದ ಶಾಲೆಯೊಂದರ ಬಳಿ ಎರಡನೇ ಭೂಕುಸಿತ ಸಂಭವಿಸಿದೆ. ಶಾಲೆಯ ಸುತ್ತಮುತ್ತಲಿನ ಮನೆಗಳು, ಅಂಗಡಿಗಳು ಗುಡ್ಡ ಕುಸಿತದಿಂದ ನಾಶ ಆಗಿವೆ.

publive-image

ತುರ್ತು ಸಹಾಯಕ್ಕಾಗಿ ಸಹಾಯವಾಣಿ ಸಂಖ್ಯೆ 9656938689 ಮತ್ತು 8086010833 ನೀಡಲಾಗಿದೆ. ಜೊತೆಗೆ ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳು ಎಂಐ -17 ಮತ್ತು ಒಂದು ಎಎಲ್‌ಹೆಚ್, ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ ಎಂದು ಕೇರಳ ಮುಖ್ಯಮಂತ್ರಿ ಕಚೇರಿ (CMO) ತಿಳಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment