/newsfirstlive-kannada/media/post_attachments/wp-content/uploads/2025/06/rain-8.jpg)
ಬೆಂಗಳೂರು: ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಮಳೆ ಅಲರ್ಟ್​ ನೀಡಲಾಗಿದೆ. ಕರಾವಳಿ ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​..
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್​ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ: ಎಲ್ಲೆಲ್ಲೂ ಮಳೆ.. ರುದ್ರಪ್ರಯಾಗ, ಕೇದಾರನಾಥದಲ್ಲಿ ಅನಾಹುತ.. ಯಾವೆಲ್ಲ ರಾಜ್ಯದಲ್ಲಿ ಮಳೆ ಜೋರಾಗಿದೆ..?
ಯೆಲ್ಲೋ ಅಲರ್ಟ್​: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಬೆಳಗಾವಿ, ಧಾರವಾಡ, ಕೋಲಾರ, ತುಮಕೂರು, ಚಿತ್ರದುರ್ಗ, ಹಾವೇರಿ, ದಾವಣಗೆರೆ, ವಿಜಯನಗರ, ಬಳ್ಳಾರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ವಿಜಯಪುರ, ಗದಗ, ಯಾದಗಿರಿ, ಕಲಬುರಗಿ, ಚಾಮರಾಜನಗರ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.
ಬೆಂಗಳೂರಲ್ಲಿ ಕಳೆದ ಎರಡ್ಮೂರು ದಿನಗಳಿಂದ ಮೋಡ ಕವಿದ ವಾತಾವರಣ ಇದೆ. ಆಗಾಗ ಮಳೆ ಕೂಡ ಬೀಳುತ್ತಿದೆ. ಇದೇ ರೀತಿಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಮತ್ತೆ ಮಳೆಯಾಗುತ್ತಿದೆ.
ಇದನ್ನೂ ಓದಿ: ಮರ ಬಿದ್ದು ಬೈಕ್ ಸವಾರರಿಗೆ ಗಾಯ.. ರಾಜ್ಯದಲ್ಲಿ ಮಳೆ ಅಬ್ಬರ ಜೋರು..
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ