newsfirstkannada.com

ಗಾಳಿ ಮಳೆಗೆ ಭಾರೀ ಅನಾಹುತ.. ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು, ಮೂವರು ಗಂಭೀರ

Share :

Published May 12, 2024 at 7:20pm

  ಭಾರೀ ಗಾಳಿ ಮಳೆಗೆ ಮಹಿಳೆ ಹಾಗೂ ಕಾರಿನ ಮೇಲೆ ಬಿದ್ದ ಬೃಹತ್ ಮರ

  ಘಟನಾ ಸ್ಥಳಕ್ಕೆ ಎನ್.ಆರ್.ಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ

  ಗಾಯಗೊಂಡ ಮೂವರು ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲು

ಚಿಕ್ಕಮಗಳೂರು: ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆ ಮೇಲೆ ಮರ ಬಿದ್ದು ದಾರುಣವಾಗಿ ಸಾವನ್ನಪ್ಪಿರೋ ಘಟನೆ ಎನ್.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದಲ್ಲಿ ನಡೆದಿದೆ. ಕೊಪ್ಪ ಮೂಲದ ಸವಿತಾ (48) ಮೃತ ದುರ್ದೈವಿ.

ಇದನ್ನೂ ಓದಿ: ರಾಧಾ ರಮಣ ಸೀರಿಯಲ್ ನಟಿ ಪವಿತ್ರಾ ಜಯರಾಂ ನಿಧನ; ಅಸಲಿಗೆ ಆಗಿದ್ದೇನು?

ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆ ಹಾಗೂ ಕಾರಿನ ಮೇಲೆ ಏಕಾಏಕಿ ಬೃಹತ್​ ಗಾತ್ರದ ಮರ ಬಿದ್ದಿದೆ. ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದ್ದು, ಓರ್ವ ಮಹಿಳೆ ಮೃತಪಟ್ಟಿದ್ದಾಳೆ. ಕಾರಿನಲ್ಲಿದ್ದ ಮೂವರಿಗೂ ಗಂಭೀರ ಗಾಯಗಳಾಗಿದ್ದು, ಕೂಡಲೇ ಅವರನ್ನು ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಎನ್.ಆರ್.ಪುರ ಪೊಲೀಸರು ಭೇಟಿ ನೀಡ ಪರಿಶೀಲನೆ ನಡೆಸಿದ್ದಾರೆ. ಸದ್ಯ ಬೃಹತ್​ ಮರ ಬಿದ್ದು ಜಖಂಗೊಂಡಿರುವ ಕಾರನ್ನು ತೆರವುಗೊಳಿಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಗಾಳಿ ಮಳೆಗೆ ಭಾರೀ ಅನಾಹುತ.. ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು, ಮೂವರು ಗಂಭೀರ

https://newsfirstlive.com/wp-content/uploads/2024/05/rain3.jpg

Load More