Breaking: ಬೆಳ್ಳಂಬೆಳಗ್ಗೆ ಹೃದಯ ವಿದ್ರಾವಕ ಘಟನೆ.. ಮಳೆಗೆ ಗೋಡೆ ಕುಸಿದು 4 ವರ್ಷದ ಮಗು ಸೇರಿ 7 ಸಾವು

author-image
Ganesh
Updated On
Breaking: ಬೆಳ್ಳಂಬೆಳಗ್ಗೆ ಹೃದಯ ವಿದ್ರಾವಕ ಘಟನೆ.. ಮಳೆಗೆ ಗೋಡೆ ಕುಸಿದು 4 ವರ್ಷದ ಮಗು ಸೇರಿ 7 ಸಾವು
Advertisment
  • ಮೃತರೆಲ್ಲ ವಲಸೆ ಕಾರ್ಮಿಕರು ಎಂದು ಪೊಲೀಸರಿಂದ ಮಾಹಿತಿ
  • ಕಟ್ಟಡ ನಿರ್ಮಾಣ ಕಾರ್ಯಕ್ಕಾಗಿ ವಲಸೆ ಬಂದಿದ್ದ ಕಾರ್ಮಿಕರು
  • ಮರಣೋತ್ತರ ಪರೀಕ್ಷೆ ನಡೆಸಿರುವ ಪೊಲೀಸ್ ಅಧಿಕಾರಿಗಳು

ಭಾರೀ ಮಳೆಯಿಂದಾಗಿ ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದು ದುರಂತ ಸಂಭವಿಸಿದೆ. ಇಂದು ಬೆಳಗ್ಗೆ ನಾಲ್ಕು ವರ್ಷದ ಮಗು ಸೇರಿ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ. ತೆಲಂಗಾಣದ ಬಚುಪಳ್ಳಿಯಲ್ಲಿ ಮಳೆಯಿಂದಾಗಿ ದುರಂತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಚುಪಳ್ಳಿ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ.. ಮೃತರು ಒಡಿಶಾ ಹಾಗೂ ಛತ್ತೀಸ್​ಗಢ ಮೂಲದ ವಲಸೆ ಕಾರ್ಮಿಕರು. ಬಿಲ್ಡಿಂಗ್ ನಿರ್ಮಾಣ ಸಂಬಂಧ ತೆಲಂಗಾಣಕ್ಕೆ ಬಂದಿದ್ದರು. ಮೃತರ ದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಕೊರೊನಾ ವ್ಯಾಕ್ಸಿನ್ ಹಿಂತೆಗೆದುಕೊಂಡ AstraZeneca; ಲಸಿಕೆ ಪಡೆದವರಲ್ಲಿ ಹೆಚ್ಚಿದ ಮತ್ತಷ್ಟು ಆತಂಕ..!

ತೆಲಂಗಾಣ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಪರಿಣಾಮ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಹೈದರಾಬಾದ್​ನಲ್ಲಿ ಮಳೆಯಿಂದ ನಗರ ತತ್ತರಿಸಿ ಹೋಗಿದೆ. ರಸ್ತೆಗಳಲ್ಲಿ ನೀರು ನಿಂತಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ. ಡಿಆರ್​ಎಫ್ ಘಟಕ ರಕ್ಷಣೆಗೆ ದೌಡಾಯಿಸಿದೆ ಎಂದು ಗ್ರೇಟರ್​ ಹೈದರಾಬಾದ್ ಮುನ್ಸಿಪಾಲ್ ಕಾರ್ಪೊರೇಷನ್​​ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:48 ಗಂಟೆಯಲ್ಲಿ.. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯ ಎಚ್ಚರಿಕೆ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment