newsfirstkannada.com

ಬಿಸಿಲಿನಿಂದ ಬೇಸತ್ತ ಜನರಿಗೆ ಗುಡ್​ನ್ಯೂಸ್.. ಇಂದು ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ

Share :

Published April 15, 2024 at 1:09pm

Update April 15, 2024 at 1:14pm

  ರಾಜ್ಯದ ಯಾವ್ಯಾವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.?

  ಉತ್ತರ ಭಾರತದ ಈ ರಾಜ್ಯಗಳಲ್ಲಿ ವರುಣನ ಆರ್ಭಟ ಜೋರು!

  ದೆಹಲಿನಲ್ಲಿ ಬಿರುಗಾಳಿ ಸಮೇತ ಭಾರೀ ಮಳೆಯಾಗುವ ಸಾಧ್ಯತೆ

ಬಿಸಿಲಿನಿಂದ ಬೇಸತ್ತಿದ್ದ ಜನರಿಗೆ ಅಲ್ಲಾಲ್ಲಿ ಮಳೆಯ ಸಿಂಚನ ಆಗುತ್ತಿದ್ದರಿಂದ ಕೊಂಚ ನಿಟ್ಟುಸಿರು ಬಿಡುತ್ತಿದ್ದಾರೆ. ಬಿರು ಬಿಸಿಲಿನಿಂದ ತತ್ತರಿಸಿದ್ದ ಕರ್ನಾಟಕದ ಜನರಿಗೂ ಮಳೆರಾಯ ತಂಪೆರೆಯುತ್ತಿದ್ದಾನೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ವರದಿ ಪ್ರಕಾರ ಇಂದು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.

ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೀದರ್, ಕಲಬುರಗಿ ವಿಜಯಪುರ, ಬಾಗಲಕೋಟೆ, ಯಾದಗಿರಿ, ರಾಯಚೂರು, ಕೊಪ್ಪಳ ಗದಗ್, ಬೆಳಗಾವಿ ಹಾಗೂ ಧಾರವಾಡದ ಕೆಲ ಪ್ರದೇಶಗಳಲ್ಲಿ ಮಳೆಯಾಗುವ ಸಂಭವವಿದೆ. ಧಾರವಾಡದಲ್ಲಿ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗ್ತಿದೆ. ದಾವಣಗೆರೆ, ಹಾವೇರಿ ಜಿಲ್ಲೆಗಳಲ್ಲೂ ಮಳೆ ಸಂಭವವಿದೆ ಎನ್ನಲಾಗಿದೆ.

ಇನ್ನುಳಿದಂತೆ ದಕ್ಷಿಣ ಕರ್ನಾಟಕದ ಜಿಲ್ಲೆಗಳಾದ ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ, ಉತ್ತರ ಕನ್ನಡದಲ್ಲಿ ಮಳೆ ಸಾಧ್ಯತೆ ಹೆಚ್ಚಾಗಿ ಇದೆ. ಇದರಲ್ಲಿ ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡದ ಹಲವು ಪ್ರದೇಶಗಳಲ್ಲಿ 13.5 ಮಿ.ಮೀ. ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹೇಳಿದೆ.

ಇದನ್ನೂ ಓದಿ: ಅತಿಯಾದ್ರೆ ಅಮೃತವೂ ವಿಷ, ಧೋನಿ ಅಭಿಮಾನಿ ಮಾಡಿದ್ದು ಸರಿನಾ.. ಸೋಶಿಯಲ್ ಮೀಡಿಯಾದಲ್ಲಿ ಪರ- ವಿರೋಧ ಚರ್ಚೆ

ಉತ್ತರ ಭಾರತದಲ್ಲೂ ಮಳೆ ಸಾಧ್ಯತೆ ಹೇಗಿದೆ?

ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಗುಡುಗು ಸಹಿತ ಮಳೆಯಾಗಬಹುದು. ಆದರೆ ಏ.19 ಮತ್ತು 20ರಂದು ದೇಹಲಿಯಲ್ಲಿ ಬಿರುಗಾಳಿ ಸಮೇತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿಹಾರದಲ್ಲೂ ಸಣ್ಣ ಪ್ರಮಾಣದಲ್ಲಿ ಬಳೆಯಾಗುವ ಸಾಧ್ಯತೆ ಇದ್ದು ಮಧುಬನಿ, ಸಿತಾಮರ್ಹಿ, ಸುಪೌಲ್, ಅರಾರಿಯಾ, ಭಬುವಾ, ಔರಂಗಾಬಾದ್ ಮತ್ತು ಉತ್ತರ ಬಿಹಾರದ ರೋಹ್ತಾಸ್ ಪ್ರದೇಶಗಳಲ್ಲಿ ಮಳೆಯಾಗಲಿದೆ.

ಇದನ್ನೂ ಓದಿ: ಜಸ್ಟ್​ ಕಾರಿಗೆ ಬೈಕ್​ ಡಿಕ್ಕಿ, ವ್ಯಕ್ತಿಯ ಎದೆ ಮೇಲಿನ ಶರ್ಟ್​ ಹಿಡಿದ ಯುವತಿ.. ಮುಂದೇನಾಯ್ತು?

ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ವಿವಿಧ ಸ್ಥಳಗಳಲ್ಲಿ ಆಲಿಕಲ್ಲು ಮಳೆ ಸಾಧ್ಯತೆ ಇದೆ. ಏ.16 ರಂದು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಹಲವು ಪ್ರದೇಶಗಳಲ್ಲಿ ಆಲಿಕಲ್ಲು ಸಮೇತ ಮಳೆ ಆಗುತ್ತೆ ಎಂದು ಹೇಳಲಾಗಿದೆ. ಜಮ್ಮು-ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶದಲ್ಲಿ ಈಗಾಗಲೇ ಮಳೆಯ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಎನ್ನಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬಿಸಿಲಿನಿಂದ ಬೇಸತ್ತ ಜನರಿಗೆ ಗುಡ್​ನ್ಯೂಸ್.. ಇಂದು ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ

https://newsfirstlive.com/wp-content/uploads/2024/04/RAIN-RAIN.jpg

Load More