/newsfirstlive-kannada/media/post_attachments/wp-content/uploads/2025/04/BNG_RAIN.jpg)
ಬೆಂಗಳೂರು: ಉದ್ಯಾನ ನಗರಿ ಸೇರಿದಂತೆ ರಾಜ್ಯದ ವಿವಿಧೆಡೆ ಇಂದು ಮಳೆಯಾಗುವ ಮುನ್ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿತ್ತು. ಇದರ ಬೆನ್ನಲ್ಲೇ ಸಿಲಿಕಾನ್ ಸಿಟಿಯಲ್ಲಿ ಈಗಾಗಲೇ ಮಳೆ ಶುರುವಾಗಿದೆ.
ಬೆಂಗಳೂರಿನ ಹಲವೆಡೆ ಮಳೆ ಶುರುವಾಗಿದ್ದು ವೈಟ್ ಫೀಲ್ಡ್, ಜಯನಗರ, ಕೆಂಗೇರಿ, ಟೌನ್ ಹಾಲ್, ಸುಧಾಮನಗರ ಸೇರಿದಂತೆ ಹಲವೆಡೆ ಮಳೆ ಆರಂಭವಾಗಿದೆ. ಇನ್ನುಳಿದಂತೆ ಮಾರತಹಳ್ಳಿ, ಮಹದೇವಪುರ ಭಾಗದಲ್ಲಿ ಭರ್ಜರಿ ಮಳೆಯಾಗುತ್ತಿದೆ. ಜೋರು ಮಳೆ ಬರುತ್ತಿದ್ದರಿಂದ ರಸ್ತೆಯಲ್ಲಿ ಬೈಕ್ ಸವಾರರು ಪರದಾಡಿದ್ದಾರೆ. ಹೀಗಾಗಿ ಬ್ರಿಡ್ಜ್ ಕೆಳಗೆ, ಪೆಟ್ಟಿ ಅಂಗಡಿಗಳಲ್ಲಿ, ಬಸ್ ನಿಲ್ದಾಣದಲ್ಲಿ ಬೈಕ್ ಸವಾರರು ಆಶ್ರಯ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ:46ನೇ ವಯಸ್ಸಿಗೆ ಮೊದಲ ಮಗುವಿಗೆ ಅಪ್ಪನಾದ ಮಾಜಿ ಕ್ರಿಕೆಟರ್ ಜಹೀರ್ ಖಾನ್.. ಇಟ್ಟ ಹೆಸರೇನು?
ರಾಜ್ಯದ ಹಲವೆಡೆ ಮಳೆ ಆಗಲಿದೆ ಎಂದು ಈಗಾಗಲೇ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 20ರ ವರೆಗೆ ಮಳೆ ಈ ಮುನ್ಸೂಚನೆ ಇದೆ. ಅದರಂತೆ ಇಂದು ಬೆಂಗಳೂರಿನಲ್ಲಿ ಮಳೆ ಆರಂಭವಾಗಿದೆ. ಉಳಿದಂತೆ ಬೆಂಗಳೂರು ಗ್ರಾಮಾಂತರ, ಉಡುಪಿ, ಹಾವೇರಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ