ಸುರಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹೆಸರು ಘೋಷಿಸಿದ ಕಾಂಗ್ರೆಸ್​.. ಸ್ಪರ್ಧೆ ಮಾಡೋರು ಇವರೇ..!

author-image
Bheemappa
Updated On
ಸುರಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹೆಸರು ಘೋಷಿಸಿದ ಕಾಂಗ್ರೆಸ್​.. ಸ್ಪರ್ಧೆ ಮಾಡೋರು ಇವರೇ..!
Advertisment
  • BJPಯಿಂದ ಸುರಪುರ ಕ್ಷೇತ್ರದ ಅಭ್ಯರ್ಥಿ ಯಾರಾಗಲಿದ್ದಾರೆ?
  • ರಾಜಾ ವೆಂಕಟಪ್ಪ ನಾಯಕ ನಿಧನದಿಂದ ತೆರವಾಗಿದ್ದ ಸ್ಥಾನ
  • ಸುರಪುರ ಕ್ಷೇತ್ರದ ಮತದಾನ, ಫಲಿತಾಂಶದ ದಿನ ಯಾವುದು?

ಯಾದಗಿರಿ: ಈ ಬಾರಿಯ ಲೋಕಸಭಾ ಕ್ಷೇತ್ರಗಳ ಜೊತೆ ಜೊತೆಗೆ ವಿಧಾನಸಭಾ ಉಪಚುನಾವಣೆ ಕೂಡ ನಡೆಯಲಿವೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನದಿಂದ ತೆರವಾಗಿದ್ದ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯ ಹೆಸರನ್ನು ಕಾಂಗ್ರೆಸ್​ ಘೋಷಣೆ ಮಾಡಿದೆ. ಎಲ್ಲರೂ ಅಂದಕೊಂಡಂತೆ ರಾಜಾ ವೆಂಕಟಪ್ಪ ನಾಯಕ ಅವರ ಹಿರಿಯ ಮಗನಿಗೆ ಟಿಕೆಟ್ ನೀಡಲಾಗಿದೆ.

ದಿವಂಗತ ರಾಜಾ ವೆಂಕಟಪ್ಪ ನಾಯಕ ಅವರ ಹಿರಿಯ ಮಗನಾದ ರಾಜಾ ವೇಣುಗೋಪಾಲ್ ಅವರಿಗೆ ಕಾಂಗ್ರೆಸ್​ ಟಿಕೆಟ್ ಅನ್ನು ಘೋಷಣೆ ಮಾಡಿದೆ. ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯು ಮೇ 7ರಂದು 2ನೇ ಹಂತದಲ್ಲಿ ಮತದಾನ ನಡೆಯಲಿದೆ. ಅದರಂತೆ ಜೂನ್ 4ರಂದು ಫಲಿತಾಂಶ ಹೊರ ಬೀಳಲಿದೆ. ಲೋಕಸಭಾ ಚುನಾವಣೆ ಜೊತೆಯಲ್ಲಿ ದೇಶದ 26 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಈ 26 ವಿಧಾನಸಭಾ ಕ್ಷೇತ್ರಗಳ ಪೈಕಿ ಕರ್ನಾಟಕದ ಸುರಪುರ ಕ್ಷೇತ್ರಕ್ಕೂ ಉಪ ಚುನಾವಣೆ ನಡೆಯಲಿದೆ.

publive-image

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ರಾಜಾ ವೆಂಕಟಪ್ಪ ನಾಯಕ್ ಅವರು ಕಳೆದ ಫೆಬ್ರವರಿ 25ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದರು. 4 ಬಾರಿ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕರನ್ನು ಈ ಬಾರಿಯ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಉಗ್ರಣ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಿತ್ತು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment