/newsfirstlive-kannada/media/post_attachments/wp-content/uploads/2024/09/Suresh-Kumar-Bjp-MLA.jpg)
ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ, ಬಿಜೆಪಿ ಹಿರಿಯ ನಾಯಕ ಎಸ್. ಸುರೇಶ್ ಕುಮಾರ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಬಹಳ ಆಯಾಸಗೊಂಡಿದ್ದ ಸುರೇಶ್ ಕುಮಾರ್ ಅವರು ಅಪರೂಪದ ಜ್ವರಕ್ಕೆ ತುತ್ತಾಗಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ಮುಡಾ ಹಗರಣದಲ್ಲಿ ಓರ್ವ ಅಧಿಕಾರಿಯ ತಲೆದಂಡ; ಇತ್ತ ಚಾಮುಂಡಿ ಮೊರೆ ಹೋದ CM
ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಸುರೇಶ್ ಕುಮಾರ್ ಅವರು ತೀವ್ರ ಜ್ವರಕ್ಕೆ ತುತ್ತಾಗಿದ್ದರಂತೆ. ಜ್ವರದಿಂದ ಬಳಲುತ್ತಿದ್ದ ಸುರೇಶ್ ಕುಮಾರ್ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರನ್ನು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪೋಲೋ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
/newsfirstlive-kannada/media/post_attachments/wp-content/uploads/2023/12/SURESH-KUMAR.jpg)
ಸುರೇಶ್ ಕುಮಾರ್ ಅವರ ಮೆದುಳಿಗೂ ಜ್ವರ ತಗುಲಿರುವ ಕಾರಣ ICUನಲ್ಲಿ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ಅಪೋಲೋ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಇದನ್ನೂ ಓದಿ: ದೇಶಪಾಂಡೆ CM ಆದರೆ ಸ್ವಾಗತ ಎಂದ ಹೆಬ್ಬಾರ್, ನನಗೂ ಖುಷಿ ಎಂದ ವೈದ್ಯ; ಎಲ್ಲರಿಗೂ ಡಿಕೆ ಶಿವಕುಮಾರ್ ಕೌಂಟರ್..!
ಹಿರಿಯ ನಾಯಕ ಎಸ್. ಸುರೇಶ್‌ಕುಮಾರ್ ಅವರು ಕಳೆದ ತಿಂಗಳು ಬೆಂಗಳೂರಿನಿಂದ ತಿರುಪತಿಗೆ ಸೈಕಲ್‌ನಲ್ಲಿ ಪ್ರಯಾಣ ಬೆಳೆಸಿದ್ದರು. ಬೆಂಗಳೂರಿನಿಂದ ಮೈಸೂರಿಗೆ ನಡೆದ ಬಿಜೆಪಿ-ಜೆಡಿಎಸ್ ನಾಯಕರ ಪಾದಯಾತ್ರೆಯಲ್ಲೂ ಸುರೇಶ್ ಕುಮಾರ್ ಅವರು ಒಂದು ದಿನ ಭಾಗಿಯಾಗಿದ್ದರು. ಇದಾದ ಬಳಿಕ ಕಳೆದ ತಿಂಗಳಿಂದ ಸುರೇಶ್ ಕುಮಾರ್ ಬಹಳ ಆಯಾಸಗೊಂಡಿದ್ದರು ಎನ್ನಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us