newsfirstkannada.com

BREAKING: 23 ಮಹಿಳೆಯರ ಮೇಲೆ ಗ್ಯಾಂಗ್ ರೇಪ್‌.. ರಾಜಸ್ಥಾನದಲ್ಲಿ ಬೆಚ್ಚಿ ಬೀಳಿಸಿದ ಕಾಮುಕರ ಅಟ್ಟಹಾಸ

Share :

Published February 11, 2024 at 3:08pm

    ಅಂಗನವಾಡಿ ಕೆಲಸದ ಅವಶ್ಯಕತೆ ಇರುವ ಮಹಿಳೆಯರೇ ಟಾರ್ಗೆಟ್‌!

    ಆರೋಪಿಗಳಿಂದ ಅತ್ಯಾಚಾರದ ವಿಡಿಯೋ ಮಾಡಿ ಮಹಿಳೆಯರಿಗೆ ಬೆದರಿಕೆ

    ಊಟದಲ್ಲಿ ಮತ್ತು ಬರುವ ಔಷಧಿ ಬೆರೆಸಿ ಸಾಮೂಹಿಕ ಅತ್ಯಾಚಾರ

ಜೈಪುರ: ರಾಜಸ್ಥಾನದ ಸಿರೋಹಿಯಲ್ಲಿ ಇಡೀ ದೇಶವೇ ಬೆಚ್ಚಿ ಬೀಳಿಸೋ ಪ್ರಕರಣ ಬೆಳಕಿಗೆ ಬಂದಿದೆ. ಅಂಗನವಾಡಿಯಲ್ಲಿ ಕೆಲಸ ಕೊಡಿಸೋ ಆಮಿಷವೊಡ್ಡಿ 23 ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರೋ ಗಂಭೀರ ಆರೋಪ ಕೇಳಿ ಬಂದಿದೆ. ಸಂತ್ರಸ್ತ ಮಹಿಳೆಯರಿಂದ ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ ದಾಖಲಾಗಿದೆ.

ರಾಜಸ್ಥಾನದ ಸಿರೋಹಿ ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷ ಮಹೇಂದ್ರ ಮೇವಾಡ ಹಾಗೂ ಮಾಜಿ ಮುನ್ಸಿಪಲ್ ಕೌನ್ಸಿಲ್ ಕಮಿಷನರ್ ಮಹೇಂದ್ರ ಚೌಧರಿ ಅವರೇ ಪ್ರಮುಖ ಆರೋಪಿಯಾಗಿದ್ದಾರೆ. ಇವರು ಅಂಗನವಾಡಿಯಲ್ಲಿ ಮಹಿಳೆಯರಿಗೆ ಕೆಲಸ ಕೊಡಿಸುವ ಭರವಸೆ ಕೊಟ್ಟು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಅನ್ನೋ ದೂರು ದಾಖಲಾಗಿದೆ.

ಮಹೇಂದ್ರ ಮೇವಾಡ ಹಾಗೂ ಮಹೇಂದ್ರ ಚೌಧರಿ ಇಬ್ಬರು ಮಹಿಳೆಯರಿಗೆ ಅಂಗನವಾಡಿಯಲ್ಲಿ ಕೆಲಸ ಕೊಡಿಸುವ ಆಮಿಷ ನೀಡುತ್ತಿದ್ದರು. ಬಳಿಕ ಅತ್ಯಾಚಾರ ನಡೆಸಿ ಬೆದರಿಕೆ ಹಾಕುತ್ತಿದ್ದರು. 20ಕ್ಕೂ ಹೆಚ್ಚು ಮಹಿಳೆಯರು ಇದೇ ರೀತಿ ದೌರ್ಜನ್ಯಕ್ಕೆ ಒಳಗಾದ ಮೇಲೆ ಓರ್ವ ಮಹಿಳೆ ಧೈರ್ಯ ಮಾಡಿ ಪಾಲಿ ಜಿಲ್ಲೆಯ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಆಗ ಈ ಕಾಮುಕರು ನಿಜಬಣ್ಣ ಬಯಲಾಗಿದೆ. ಇದೀಗ 20ಕ್ಕೂ ಹೆಚ್ಚು ಮಹಿಳೆಯರು ಕಾಂಗ್ರೆಸ್ ನಾಯಕರ ವಿರುದ್ಧ ಸಾಮೂಹಿಕ ಅತ್ಯಾಚಾರದ ಆರೋಪ ಮಾಡುತ್ತಿದ್ದಾರೆ.

ಇದನ್ನೂ ಓದಿ: 35 ವರ್ಷದ ಮಹಿಳೆ ನಾಪತ್ತೆ ಕೇಸ್​ಗೆ ಟ್ವಿಸ್ಟ್; ಕುತ್ತಿಗೆ ಕತ್ತರಿಸಿ ಬರ್ಬರವಾಗಿ ಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ

ಅಂಗನವಾಡಿ ಕೆಲಸದ ಅವಶ್ಯಕತೆ ಇರುವ ಮಹಿಳೆಯರನ್ನು ಇವರು ಸಂಪರ್ಕಿಸುತ್ತಿದ್ದರು. ಅವರಿಗೆ ಊಟ, ವಸತಿ ನೀಡುವ ಆಮಿಷವೊಡ್ಡುತ್ತಿದ್ದರು. ಊಟದಲ್ಲಿ ಮತ್ತು ಬರುವ ಔಷಧಿ ಬೆರೆಸಿ ಸಾಮೂಹಿಕ ಅತ್ಯಾಚಾರಕ್ಕೆ ಬಳಸಿಕೊಳ್ಳುತ್ತಿದ್ದರು. ಸಾಮೂಹಿಕ ಅತ್ಯಾಚಾರ ನಡೆಸುತ್ತಿದ್ದ ಆರೋಪಿಗಳು ಅದನ್ನು ಕ್ಯಾಮೆರಾದಲ್ಲಿ ಚಿತ್ರೀಕರಿಸುತ್ತಿದ್ದರು. ಆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡುವ ಬೆದರಿಕೆಯನ್ನು ಹಾಕುತ್ತಿದ್ದಾರೆ. ಇದೇ ವೇಳೆ ಸಂತ್ರಸ್ತೆಯರಿಂದಲೇ 5 ಲಕ್ಷ ರೂಪಾಯಿ ಹಣಕ್ಕೆ ಬ್ಲ್ಯಾಕ್‌ಮೇಲ್ ಕೂಡ ಮಾಡಿದ್ದಾರೆ ಎಂದು ದೂರು ನೀಡಿರುವ ಮಹಿಳೆಯರು ಆರೋಪಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: 23 ಮಹಿಳೆಯರ ಮೇಲೆ ಗ್ಯಾಂಗ್ ರೇಪ್‌.. ರಾಜಸ್ಥಾನದಲ್ಲಿ ಬೆಚ್ಚಿ ಬೀಳಿಸಿದ ಕಾಮುಕರ ಅಟ್ಟಹಾಸ

https://newsfirstlive.com/wp-content/uploads/2024/02/rape-case.jpg

Load More