/newsfirstlive-kannada/media/post_attachments/wp-content/uploads/2024/11/Rajat-Patidar.jpg)
2025ರ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸುವುದು ಯಾರು? ಅನ್ನೋ ಪ್ರಶ್ನೆ ಕೇಳಿ ಬಂದಿದೆ. ಆರ್‌ಸಿಬಿ ಕ್ಯಾಪ್ಟನ್ ರೇಸ್ನಲ್ಲಿ ಹಲವು ಯುವ ಆಟಗಾರರ ಹೆಸರಿದೆ. ಈ ಸಾಲಿನಲ್ಲಿ ನಿಲ್ಲೋ ಮೊದಲ ಹೆಸರು ರಜತ್ ಪಟಿದಾರ್.
ರಜತ್ ಪಾಟಿದಾರ್ ಆರ್‌ಸಿಬಿ ತಂಡದ ಸ್ಟಾರ್ ಬ್ಯಾಟರ್. ಇವರು ದೇಶೀಯ ಟೂರ್ನಿಯಲ್ಲಿ ಮಧ್ಯಪ್ರದೇಶ ಪರ ಅಮೋಘ ಪ್ರದರ್ಶನ ನೀಡುತ್ತಿದ್ದಾರೆ. ಪಾಟಿದಾರ್ ನಾಯಕತ್ವದಲ್ಲಿ ಮಧ್ಯಪ್ರದೇಶ ಸೈಯದ್ ಮುಷ್ತಾಕ್ ಅಲಿ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಸೆಮಿಫೈನಲ್ ತಲುಪಿದೆ.
ಮಧ್ಯಪ್ರದೇಶಕ್ಕೆ ಭರ್ಜರಿ ಗೆಲುವು
ಸೈಯದ್ ಮುಷ್ತಾಕ್ ಅಲಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಸೌರಾಷ್ಟ್ರ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 173 ರನ್ ಕಲೆ ಹಾಕಿತು. ಈ ಗುರಿ ಬೆನ್ನತ್ತಿದ ಮಧ್ಯಪ್ರದೇಶ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ಇನ್ನು, ಮಧ್ಯಪ್ರದೇಶದ ಪರ ವೆಂಕಟೇಶ್ ಅಯ್ಯರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇವರು 2 ಬೌಂಡರಿ, 2 ಸಿಕ್ಸರ್ ಸಹಾಯದಿಂದ ಅಜೇಯ 24 ರನ್ ಸಿಡಿಸಿದರು. ತಂಡದ ಕ್ಯಾಪ್ಟನ್ ರಜತ್ ಪಟಿದಾರ್ 18 ಎಸೆತಗಳಲ್ಲಿ 28 ರನ್ ಬಾರಿಸಿದರು.
ರಜತ್ಗೆ ಆರ್‌ಸಿಬಿ ಕ್ಯಾಪ್ಟನ್ಸಿ
ಮೆಗಾ ಹರಾಜಿಗೆ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೇವಲ ಮೂರು ಆಟಗಾರರನ್ನು ಉಳಿಸಿಕೊಂಡಿತ್ತು. ಅದರಲ್ಲಿ ಮೊದಲ ಆಯ್ಕೆಯ ಆಟಗಾರನಾಗಿ ವಿರಾಟ್ ಕೊಹ್ಲಿ ಸ್ಥಾನ ಪಡೆದರೆ, ರಜತ್ ಪಟಿದಾರ್ 2ನೇ ಆಯ್ಕೆಯಾಗಿದ್ರು. ಈ ಬಾರಿ ಐಪಿಎಲ್‌ನಲ್ಲಿ ಇವರು ಆರ್‌ಸಿಬಿ ಪರ ಕಣಕ್ಕೆ ಇಳಿಯಲಿದ್ದಾರೆ. ರಜತ್ ಹೆಗಲಿಗೆ ನಾಯಕತ್ವದ ಜವಾಬ್ದಾರಿ ನೀಡುವ ಸಾಧ್ಯತೆ ಇದೆ.
ಇದನ್ನೂ ಓದಿ:ಟೀಮ್ ಇಂಡಿಯಾದ ಸ್ಟಾರ್ ಮನೀಶ್ ಪಾಂಡೆಗೆ ಬಿಗ್ ಶಾಕ್; ತಂಡದಿಂದಲೇ ಔಟ್
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ