newsfirstkannada.com

ಜಗತ್ ಪ್ರಸಿದ್ಧ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಇನ್ನಿಲ್ಲ

Share :

Published June 11, 2024 at 9:05pm

Update June 11, 2024 at 9:06pm

    ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ರಾಜೀವ್‌ ತಾರಾನಾಥ್‌

    ತಾರಾನಾಥ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಸಂತಾಪ

    ಕ್ಯಾಲಿಪೋರ್ನಿಯಾ ವಿವಿಯ ಕಲಾವಿಭಾಗದ ಮುಖ್ಯಸ್ಥರಾಗಿದ್ದ ರಾಜೀವ್‌

ಮೈಸೂರು: ಜಗತ್ ಪ್ರಸಿದ್ಧ ಸರೋದ್ ವಾದಕ, ಪದ್ಮಶ್ರೀ ಪುರಸ್ಕೃತ ಪಂಡಿತ್ ರಾಜೀವ್ ತಾರಾನಾಥ್ (91) ಇಂದು ಮೈಸೂರಿನಲ್ಲಿ ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ತೀವ್ರ ಅಸ್ವಸ್ಥರಾಗಿ ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇದನ್ನೂ ಓದಿ: ‘ದರ್ಶನ್​​ಗೆ ಯಾವುದೇ ತೊಂದರೆ ಆಗಲ್ಲ, ಯಾಕೆಂದರೆ..’ ಪ್ರಕರಣದ ಬಗ್ಗೆ ವಕೀಲರು ಹೇಳಿದ್ದೇನು?

ತಾರಾನಾಥ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. 1932ರ ಅಕ್ಟೋಬರ್ 17ರಂದು ಬೆಂಗಳೂರಿನಲ್ಲಿ ಜನಿಸಿದ ರಾಜೀವ್ ತಾರಾನಾಥ್ ತಮ್ಮ ತಂದೆ ಪಂಡಿತ್ ತಾರಾನಾಥ್ ಅವರಿಂದ ಗಾಯನ ಸಂಗೀತದಲ್ಲಿ ಆರಂಭಿಕ ತರಬೇತಿಯನ್ನು ಪಡೆದು, ಅತ್ಯಂತ ಕಿರಿಯ ವಯಸ್ಸಿನಲ್ಲೇ (9 ವರ್ಷ) ಸಾರ್ವಜನಿಕ ಕಾರ್ಯಕ್ರಮ ನೀಡಿದ್ದರು.

ಸಾಹಿತ್ಯದಲ್ಲಿ ಪಿಎಚ್‌ಡಿ ಪಡೆದಿದ್ದ ರಾಜೀವ್ ತಾರಾನಾಥ್ ತಿರುಚಿರಾಪಳ್ಳಿಯ ಪ್ರಾದೇಶಿಕ ಎಂಜಿನಿಯರಿಂಗ್ ಕಾಲೇಜಿನಲ್ಲಿ ಇಂಗ್ಲಿಷ್ ಸಾಹಿತ್ಯದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸಿದ್ದರು. ಸಂಗೀತ ಕ್ಷೇತ್ರದೆಡೆಗಿನ ತಮ್ಮ ಆಸಕ್ತಿಗಾಗಿ ವೃತ್ತಿಯನ್ನು ತ್ಯಜಿಸಿ ಕಲ್ಕತ್ತಾದಲ್ಲಿ ಅಲಿ ಅಕ್ಬರ್ ಖಾನ್ ಮಾರ್ಗದರ್ಶನದಲ್ಲಿ ಸರೋದ್ ತರಬೇತಿ ಪಡೆದಿದ್ದರು. ಕ್ಯಾಲಿಪೋರ್ನಿಯಾ ವಿವಿಯ ಕಲಾವಿಭಾಗದ ಮುಖ್ಯಸ್ಥರಾಗಿದ್ದರು. 1995 ರಿಂದ 2005ರ ಅವಧಿಯಲ್ಲಿ ಕಾರ್ಯನಿರ್ವಹಿಸಿದ್ದರು. ರಾಜೀವ ತಾರಾನಾಥರು ಬಳಿಕ ಮೈಸೂರಿನ ನಿವಾಸಿಯಾಗಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಜಗತ್ ಪ್ರಸಿದ್ಧ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಇನ್ನಿಲ್ಲ

https://newsfirstlive.com/wp-content/uploads/2024/06/Pandit-Rajeev-Taranath2.jpg

Load More