/newsfirstlive-kannada/media/post_attachments/wp-content/uploads/2024/11/RAMACHARI-3.jpg)
ಬಿಗ್ಬಾಸ್ ಮನೆಗೆ ವಿಶೇಷ ಅತಿಥಿಗಳ ಆಗಮನವಾಗಿದೆ. ಕಲರ್ಸ್ ಕನ್ನಡದ ಜನಪ್ರಿಯ ಧಾರಾವಾಹಿ ರಾಮಚಾರಿ ಖ್ಯಾತಿಯ ರಾಮಚಾರಿ (ರಿತ್ವಿಕ್ ಕೃಪಾಕರ್) ಮತ್ತು ಚಾರು (ಮೌನ ಗುಡ್ಡೇಮನೆ) ದೊಡ್ಮನೆಗೆ ಅತಿಥಿಗಳಾಗಿ ಎಂಟ್ರಿ ನೀಡಿದ್ದಾರೆ.
ಈ ಜೋಡಿ ಮನೆಗೆ ಎಂಟ್ರಿ ನೀಡುತ್ತಿದ್ದಂತೆಯೇ ಸ್ಪರ್ಧಿಗಳು ಒಂದು ಕ್ಷಣ ಅಚ್ಚರಿಗೆ ಒಳಗಾಗಿದ್ದಾರೆ. ನಂತರ ಆತ್ಮೀಯವಾಗಿ ಬರಮಾಡಿಕೊಂಡ ಸ್ಪರ್ಧಿಗಳು, ಬಿಗ್ಬಾಸ್ ಮನೆಯನ್ನು ಪರಿಚಯಿಸಿದ್ದಾರೆ. ವಿಶೇಷ ಅಂದ್ರೆ ಮನೆಗೆ ಎಂಟ್ರಿ ಆಗ್ತಿದ್ದಂತೆ ಬಿಗ್ಬಾಸ್ ಇಬ್ಬರಿಗೂ ಟಾಸ್ಕ್ ಒಂದನ್ನು ನೀಡಿದ್ದಾರೆ.
ಇದನ್ನೂ ಓದಿ:ಕನಸಿನ ಮನೆಗೆ ಪ್ರವೇಶ ಮಾಡಿದ ಬಿಗ್ಬಾಸ್ ಮಾಜಿ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ; ಇಲ್ಲಿವೆ ಫೋಟೋಸ್
ಅದೇನೆಂದರೆ, ಸದ್ಯ ಬಿಗ್ಬಾಸ್ ಮನೆಯಲ್ಲಿ ಜೋಡಿಗಳ ಟಾಸ್ಕ್ ನಡೆಯುತ್ತಿದೆ. ಹೀಗಾಗಿ ತಾವಿಬ್ಬರು ಜೋಡಿಯಾಗಿ ಇರುವಂತೆ ಒಬ್ಬರನ್ನೊಬ್ಬರು ಬಿಟ್ಟು ಹೋಗದಂತೆ ಜೊತೆಯಾಗಿರಲು ಹಗ್ಗವನ್ನು ನೀಡಿದ್ದಾರೆ. ಸ್ಪರ್ಧಿಗಳಂತೆ ರಾಮಚಾರಿ ಮತ್ತು ಚಾರು ಕೂಡ ಹಗ್ಗವನ್ನು ಕಟ್ಟಿಕೊಂಡಿದ್ದಾರೆ.
ಈ ಜೋಡಿ ಮನೆಯಲ್ಲಿ ಎಂಟರ್ಟೈನ್ಮೆಂಟ್ ನೀಡಲು ಸ್ಪರ್ಧಿಗಳಿಗೆ ಟಾಸ್ಕ್ ನೀಡಿದಂತೆ ಕಾಣ್ತಿದೆ. ಬಿಗ್ಬಾಸ್ ಶೇರ್ ಮಾಡಿರುವ ವಿಡಿಯೋದಲ್ಲಿ, ಚಾರು ಅವರು ಹನುಮಂತಗೆ ತಮ್ಮನ್ನು ಇಂಪ್ರೆಸ್ ಮಾಡುವಂತೆ ಗುಲಾಬಿ ಹೂ ನೀಡಿದ್ದಾರೆ. ಹನುಮಂತ ಅವರು ತಮ್ಮ ಶೈಲಿಯಲ್ಲಿ ಹಾಡನ್ನು ಹೇಳಿ, ಮಂಡಿಯೂರಿ ಚಾರು ಅವರನ್ನು ಇಂಪ್ರೆಸ್ ಮಾಡಲು ಪ್ರಯತ್ನಿಸಿದ್ದಾರೆ.
ಇದನ್ನೂ ಓದಿ:‘ನಂಗೆ ಈ ಅವಾರ್ಡ್ ಬೇಡ ಸರ್’ ಎಂದ ಗೋಲ್ಡ್ ಸುರೇಶ್; ಬಿಗ್ಬಾಸ್ನಲ್ಲಿ ಹೊಸ, ಹೊಸ ಪ್ರಶಸ್ತಿ..!
ದೊಡ್ಮನೆಯಲ್ಲಿ ಚಾರು-ಚಾರಿ
ಬಿಗ್ ಬಾಸ್ ಕನ್ನಡ ಸೀಸನ್ 11 | ಸೋಮ-ಶುಕ್ರ ರಾತ್ರಿ 9:30#BiggBossKannada11#BBK11#HosaAdhyaya#ColorsKannada#BannaHosadaagideBandhaBigiyaagide#ಕಲರ್ಫುಲ್ಕತೆ#colorfulstory#Kicchasudeepa#BBKPromopic.twitter.com/rO8DTCy105— Colors Kannada (@ColorsKannada) November 14, 2024
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ