ಅರ್ಚಕರಿಗೆ ಗುಡ್ನ್ಯೂಸ್ ಕೊಟ್ಟ ಸರ್ಕಾರ..!
ಸಚಿವ ರಾಮಲಿಂಗಾರೆಡ್ಡಿ ಮಹತ್ವದ ನಿರ್ಧಾರ
ಸಚಿವರ ಪತ್ರಿಕಾ ಪ್ರಕಟಣೆ ಹೈಲೈಟ್ಸ್ ಹೀಗಿದೆ
ಬೆಂಗಳೂರು: ಮುಜರಾಯಿ ಇಲಾಖೆಗೆ ಸಂಬಂಧಿಸಿದ ಅರ್ಚಕರ ಕೆಲ ಅಗತ್ಯ ಬೇಡಿಕೆಗಳನ್ನು ಸಚಿವ ರಾಮಲಿಂಗಾ ರೆಡ್ಡಿಯವರು ಈಡೇರಿಸಿದ್ದಾರೆ. ಈ ಮೂಲಕ ಅರ್ಚಕರಿಗೆ ಗುಡ್ನ್ಯೂಸ್ ಕೊಟ್ಟಿದ್ದಾರೆ.
ಸಚಿವರ ಪತ್ರಿಕಾ ಪ್ರಕಟಣೆಯ ಹೈಲೈಟ್ಸ್ ಹೀಗಿದೆ..!
1. ಕರ್ನಾಟಕ ಭಾರತ ಗೌರವ ಕಾಶಿ ದರ್ಶನ ರೈಲು ಯಾತ್ರೆಯ ಮೂಲಕ ತೆರಳುವ ಪುಣ್ಯ ಕ್ಷೇತ್ರಗಳಾದ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗ್-ರಾಜ್ ಕ್ಷೇತ್ರಗಳ ಪ್ಯಾಕೇಜ್ ಯಾತ್ರೆಯಲ್ಲಿ ಈ ಬಾರಿ ಬಿಹಾರದ ಗಯಾ ಕ್ಷೇತ್ರದ ದರ್ಶನ ಸೇರ್ಪಡೆಗೊಳಿಸಿ, 8 ದಿನಗಳ ಪ್ರವಾಸವನ್ನು 9 ದಿನಗಳಿಗೆ ಹೆಚ್ಚಿಸಲಾಗಿದೆ.
2. ಈ ಯೋಜನೆ ಅಡಿಯಲ್ಲಿ ಸದರಿ ಪ್ಯಾಕೇಜ್ಗೆ ಈ ಹಿಂದೆ ನಿಗದಿ ಮಾಡಲಾಗಿದ್ದ ಸರ್ಕಾರದಿಂದ ನೀಡಲಾಗುವ ಸಹಾಯ ಧನ ರೂ.5000/- ಗಳ ಮೊತ್ತವನ್ನು ರೂ.7500/- ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ.
3. ಸದರಿ ಪ್ಯಾಕೇಜ್ ಯೋಜನೆಯಲ್ಲಿ ಹೊಸದಾಗಿ LHB ಕೋಚ್ಗಳನ್ನು ಅಳವಡಿಸಲಾಗಿದ್ದು, ಇದರಲ್ಲಿ ಸುಸಜ್ಜಿತವಾದ ಅಡುಗೆ ಮನೆ ಹಾಗೂ ಇಬ್ಬರು ವೈದ್ಯರು ಸಹ ಯಾತ್ರಾರ್ಥಿಗಳ ಜೊತೆಯಲ್ಲಿ ಸೇವಾ ನಿರತರಾಗಿರುತ್ತಾರೆ.
4. ಆಗಸ್ಟ್ ಮಾಹೆಯಲ್ಲಿ ಹೊರಡಲಿರುವ 5ನೇ ಟ್ರಿಪ್ ದಿನಾಂಕ 29.08.2023 ರಂದು ನಿರ್ಗಮನವಾಗಿ ದಿನಾಂಕ 06.09.2023 ರಂದು ಆಗಮನ ಅಂತೆಯೇ ಸೆಪ್ಟೆಂಬರ್ ಮಾಹೆಯಲ್ಲಿ ಹೊರಡಲಿರುವ 6ನೇ ಟ್ರಿಪ್ ದಿನಾಂಕ 23.09.2023 ರಂದು ನಿರ್ಗಮನ, ದಿನಾಂಕ 02.10.2023 ರಂದು ಆಗಮನವಿರುತ್ತದೆ.
5. ಸದರಿ ಯಾತ್ರೆಗೆ ತುಮಕೂರಿನಲ್ಲಿ ಬೋರ್ಡಿಂಗ್ ಮತ್ತು ಡಿ-ಬೋರ್ಡಿಂಗ್ ವ್ಯವಸ್ಥೆಯನ್ನು ಹೊಸದಾಗಿ ಕಲ್ಪಿಸಲಾಗಿರುತ್ತದೆ.
6. ಅಯೋಧ್ಯೆಗೆ ಭೇಟಿ ನೀಡುವ ರಾಜ್ಯದ ಭಕ್ತರ ಅನುಕೂಲಕ್ಕಾಗಿ ಕರ್ನಾಟಕ ಭವನ ವಸತಿ ಸಂಕೀರ್ಣ ನಿರ್ಮಾಣ ಮಾಡಲು ಉತ್ತರ ಪ್ರದೇಶದ ಮಾನ್ಯ ಮುಖ್ಯಮಂತ್ರಿಯವರಿಗೆ ಸುಮಾರು 5 ಎಕರೆ ಭೂಮಿ ಮಂಜೂರು ಮಾಡುವಂತೆ ಪತ್ರ ಬರೆದು ಕೋರಲಾಗುವುದು ಹಾಗೂ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಮುಜರಾಯಿ ಇಲಾಖೆರವರು ಸಮನ್ವಯ ಸಾಧಿಸಿ ತ್ವರಿತ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.
7. ರಾಜ್ಯದ ದೇವಸ್ಥಾನಗಳ ಪೂಜಾ ಕಾರ್ಯ ಇತ್ಯಾದಿಗಳ ಕೆಲಸಕ್ಕೆಂದು ಸರ್ಕಾರ ಬಿಡುಗಡೆ ಮಾಡುವ ʼತಸ್ತಿಕ್ʼ ಹಣವನ್ನು ನೇರವಾಗಿ ಅರ್ಚಕರ ಬ್ಯಾಂಕ್ ಖಾತೆಗೆ ವರ್ಗಾಯಿಸಲು ಸೂಚನೆ ನೀಡಲಾಗಿದೆ.
ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ