ಇತ್ತೀಚೆಗೆ ಮಾಲೂರಿನಲ್ಲಿ ಗ್ರಾಮ ಪಂಚಾಯ್ತಿ ಸದಸ್ಯನ ಕೊಲೆ ಆಗಿತ್ತು
ಈ ಘಟನೆ ಮಾಸುವ ಮುನ್ನವೇ ಕೋಲಾರದಲ್ಲಿ ಮತ್ತೊಂದು ಕೊಲೆ!
ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತನನ್ನು ಕೊಚ್ಚಿ ಕೊಂದೇಬಿಟ್ರು
ಕೋಲಾರ: ಇತ್ತೀಚೆಗೆ ಮಾಲೂರಿನಲ್ಲಿ ಅನಿಲ್ ಕುಮಾರ್ ಅನ್ನೋ ಗ್ರಾಮ ಪಂಚಾಯ್ತಿ ಸದಸ್ಯನ ಕೊಲೆ ಆಗಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಕೊಲೆ ನಡೆದಿದೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತ ಮಾಜಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಎಂ. ಶ್ರೀನಿವಾಸ್ ಎಂಬುವರನ್ನು ಕೊಂದು ಹಾಕಲಾಗಿದೆ.
ಇನ್ನು, ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಮಾತಾಡಿದ ಕೋಲಾರದ ಎಸ್ಪಿ ನಾರಾಯಣ್ ಅವರು, ಶ್ರೀನಿವಾಸಪುರ ಪಟ್ಟಣದ ಹೊರವಲಯ ಹೊಗಳಗೆರೆ ಬಳಿ ಆರು ಜನ ದುಷ್ಕರ್ಮಿಗಳು ಶ್ರೀನಿವಾಸ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಂದಿದ್ದಾರೆ. ಮೊದಲು ಪೆಪ್ಪರ್ ಸ್ಪ್ರೇ ಮಾಡಿ ಚಾಕುವಿನಿಂದ ಚುಚ್ಚಿ ಸಾಯಿಸಿದ್ದಾರೆ ಎಂದರು.
ಕೊಲೆಗಾರರನ್ನು ಬಂಧಿಸಲು ಮೂರು ಪೊಲೀಸ್ ತಂಡಗಳನ್ನು ರಚನೆ ಮಾಡಲಾಗಿದೆ. ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಕೋಲಾರಕ್ಕೆ ಭೇಟಿ ನೀಡುತ್ತಿದ್ದಾರೆ. ಶ್ರೀನಿವಾಸ್ ಅವರ ಅಂತ್ಯಕ್ರಿಯೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಹಂತಕರು ಹೊರ ರಾಜ್ಯದಿಂದ ಬಂದಿರೋ ಶಂಕೆ ಇದ್ದು, ಯಾರನ್ನು ಬಿಡಲ್ಲ ಎಂದರು.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ