Breaking: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಬೆಂಗಳೂರಲ್ಲಿ ಐದು ಕಡೆ NIA ದಾಳಿ

author-image
Ganesh
Updated On
Breaking: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಬೆಂಗಳೂರಲ್ಲಿ ಐದು ಕಡೆ NIA ದಾಳಿ
Advertisment
  • ಬೆಳ್ಳಂಬೆಳಗ್ಗೆ ಫೀಲ್ಡಿಗೆ ಇಳಿದ ಎನ್​ಐಎ ಅಧಿಕಾರಿಗಳು
  • ಐದು ನಿವಾಸಗಳ ಮೇಲೆ ದಾಳಿ ಮಾಡಿ ತನಿಖೆ ತೀವ್ರಗೊಳಿಸಿದ್ದಾರೆ
  • ಮಾರ್ಚ್​ 1 ರಂದು ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ನಡೆದಿತ್ತು

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ತೀವ್ರಗೊಳಿಸಿದೆ. ಇಂದು ಬೆಂಗಳೂರಿನ ಐದು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದೆ.

ಅನುಮಾನಾಸ್ಪದರ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸ್ತಿದ್ದಾರೆ. ಕಳೆದ ಮಾರ್ಚ್ 1ರಂದು ಬೆಂಗಳೂರಿನಲ್ಲಿರುವ ರಾಮೇಶ್ವರಂ ಕೆಫೆಗೆ ಶಂಕಿತ ಆರೋಪಿ ಟೋಪಿ ಹಾಕಿಕೊಂಡು ಬಂದಿದ್ದ. ಕೆಫೆಯಲ್ಲಿ ಸ್ಫೋಟಕ ವಸ್ತುವಿನ ಬ್ಯಾಗ್ ಇಟ್ಟು ಅಲ್ಲಿಂದ ಹೊರಗೆ ಹೋಗಿದ್ದ. ಶಂಕಿತ ಆರೋಪಿ ಈ ಸಂಚು ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ಮಂಡ್ಯದಲ್ಲಿ ಕಾಂಗ್ರೆಸ್​ಗೆ ಕುಮಾರಸ್ವಾಮಿ ಚೆಕ್​ಮೇಟ್​​.. ಆಪರೇಷನ್‌ಗೇ ರಿವರ್ಸ್ ಆಪರೇಷನ್..!

ಈ ಕೃತ್ಯದಿಂದ 9 ಮಂದಿ ಗಾಯಗೊಂಡಿದ್ದರು. ಪ್ರಕರಣ ತನಿಖೆಯನ್ನು ನಡೆಸುತ್ತಿರುವ ಅಧಿಕಾರಿಗಳು ಈಗಾಗಲೇ ಹಲವು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇದೀಗ ಬೆಂಗಳೂರಿನ ಐದು ನಿವಾಸಗಳ ಮೇಲೆ ದಾಳಿ ಮಾಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment