/newsfirstlive-kannada/media/post_attachments/wp-content/uploads/2025/03/Rana-Daggubati-Vijay-Deverakonda.jpg)
ಹೈದರಾಬಾದ್: ಟಾಲಿವುಡ್‌ನ 25 ಖ್ಯಾತ ನಟ, ನಟಿಯರಿಗೆ ತೆಲಂಗಾಣ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ರಾಣಾ ದಗ್ಗುಬಾಟಿ, ವಿಜಯ ದೇವರಕೊಂಡ, ಪ್ರಕಾಶ್ ರಾಜ್, ಮಂಚು ಲಕ್ಷ್ಮಿ, ನಿಧಿ ಅಗರವಾಲ್, ಕನ್ನಡದ ನಟಿ ಪ್ರಣೀತಾ ವಿರುದ್ಧ ಕೇಸ್ ದಾಖಲಾಗಿದೆ.
ಟಾಲಿವುಡ್‌ನ ಘಟಾನುಘಟಿ ನಟ, ನಟಿಯರ ವಿರುದ್ಧ ಪೊಲೀಸರು ಕಾನೂನು ಅಸ್ತ್ರ ಪ್ರಯೋಗಿಸಿದ್ದಾರೆ. ಆನ್ ಲೈನ್ ಬೆಟ್ಟಿಂಗ್ ಪ್ರಮೋಷನ್ ಮಾಡಿದ್ದಕ್ಕಾಗಿ ಹೈದರಾಬಾದ್‌ನ ಮಿಯಾಪುರ ಪೊಲೀಸ್ ಠಾಣೆಯಲ್ಲಿ BNS ಸೆಕ್ಷನ್ 318(4), ಸೆಕ್ಷನ್ 112, 49ರಡಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: 86 ವರ್ಷದ ವೃದ್ಧೆ; 2 ತಿಂಗಳ ಡಿಜಿಟಲ್ ಅರೆಸ್ಟ್, 20 ಕೋಟಿ ಸ್ವಾಹ.. ಮುಂಬೈನಲ್ಲಿ ಭಯಾನಕ ಸೈಬರ್ ಕ್ರೈಂ..!
ಇತ್ತೀಚೆಗೆ ಆನ್‌ಲೈನ್ ಬೆಟ್ಟಿಂಗ್ ದಂಧೆಯಿಂದ ಯುವಜನರು ಹಾಳಾಗುತ್ತಿದ್ದಾರೆ. ಸಮಾಜದಲ್ಲಿ ಸಾಕಷ್ಟು ಜನ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಆಘಾತಕಾರಿ ವಿಚಾರ ಗೊತ್ತಿದ್ದರೂ ಖ್ಯಾತ ನಟ, ನಟಿಯರು ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಮೋಟ್ ಮಾಡುತ್ತಿದ್ದಾರೆ.
ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳಿಂದ ಬಹಳಷ್ಟು ಜನರು ಹಣಕಾಸಿನ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕುವಂತೆ ದೂರು ಸಲ್ಲಿಕೆಯಾಗಿತ್ತು. ಈ ದೂರಿನ ಆಧಾರದ ಮೇಲೆ ನಟ, ನಟಿಯರ ವಿರುದ್ಧ ಕೇಸ್ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ