newsfirstkannada.com

BBMP ಅಧಿಕಾರಿಗಳಿದ್ದ ಸಭೆಯಲ್ಲಿ ಸುರ್ಜೇವಾಲ ಭಾಗಿ -ಹೊಸ ವಿವಾದದಲ್ಲಿ ಸಿದ್ದರಾಮಯ್ಯ ಸರ್ಕಾರ..!

Share :

14-06-2023

    ಫೋಟೋ ನೋಡಿ ಬಿಜೆಪಿ-ಜೆಡಿಎಸ್​ ನಿಗಿನಿಗಿ ಕೆಂಡ

    ‘ಹತ್ತನೇ ನಂಬರಿನ ಹಂಗಿನ ಸರಕಾರ’-HDK ಗೇಲಿ

    ರಾಜ್ಯಪಾಲರಿಗೆ ಇಂದು ಬಿಜೆಪಿಯಿಂದ ದೂರು

ಬೆಂಗಳೂರು: ಬಿಬಿಎಂಪಿ ಸಭೆ ನಡೆಸಿದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಸಭೆಯಲ್ಲಿ ಉಸ್ತುವಾರಿ ರಣದೀಪ್ ಸುರ್ಜೇವಾಲ ಭಾಗವಹಿಸಿದ್ದನ್ನೇ ವಿಪಕ್ಷಗಳು ಅಸ್ತ್ರವನ್ನಾಗಿ ಮಾಡಿಕೊಂಡಿವೆ. ಇದು ಸರ್ಕಾರದ ಸಭೆಯೋ ಇಲ್ಲವೇ ಕಾಂಗ್ರೆಸ್ ಸಭೆಯೋ ಎಂದು ಬಿಜೆಪಿ-ಜೆಡಿಎಸ್​​​ ತರಾಟೆಗೆ ತೆಗೆದುಕೊಂಡಿವೆ.

ಇದು ಸರ್ಕಾರದ ಸಭೆಯಾಗಿದ್ದರೆ ಉಸ್ತುವಾರಿ ಸುರ್ಜೇವಾಲ ಭಾಗವಹಿಸಿದ್ದು ಯಾಕೆ ಎಂದು ಪ್ರಶ್ನೆ ಮಾಡಿರುವ ವಿಪಕ್ಷಗಳು, ಒಂದ್ವೇಳೆ ಕಾಂಗ್ರೆಸ್​ ಸಭೆಯಾದರೂ ಬಿಬಿಎಂಪಿ ಅಧಿಕಾರಿಗಳಿಗೇನು ಕೆಲಸವೆಂದು ಕೇಳಿದೆ. ಈ ಬೆಳವಣಿಗೆ ಕಾರಣದಿಂದ ತೀವ್ರ ಇಕ್ಕಟ್ಟಿಗೆ ಸಿಲುಕಿದೆ. ಇನ್ನೊಂದ್ಕಡೆ, ಸಭೆಯ ಫೋಟೋವನ್ನ ತಮ್ಮ ಟ್ವೀಟರ್​ನಲ್ಲಿ ಹಂಚಿಕೊಂಡಿದ್ದ ಜಮೀರ್​​, ವಿವಾದದ ಬೆನ್ನಲ್ಲೇ ಡಿಲೀಟ್​​ ಮಾಡಿದ್ದಾರೆ.

ಕುಮಾರಸ್ವಾಮಿ ಆಕ್ರೋಶ

ರಾಜ್ಯದಲ್ಲಿರುವುದು ಸಿದ್ದರಾಮಯ್ಯನವರ ನೇತೃತ್ವದ ಸರಕಾರವೋ ಅಥವಾ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರವೋ? ಕನ್ನಡಿಗರು ಮತ ಹಾಕಿದ್ದು ಕೈ ಸರಕಾರಕ್ಕಾ?ಅಥವಾ ಕೈಗೊಂಬೆ ಸರಕಾರಕ್ಕಾ? ಪಾಪ.. ಜನರ ವೋಟು ಹಂಗಿನ ಸರಕಾರದ ಪಾಲಾಗಿದೆ. ಸರ್ಕಾರಕ್ಕೆ ತಿಂಗಳು ತುಂಬುವ ಮೊದಲೇ ಅದು ಸಾಬೀತಾಗಿದೆ. ಸರ್ಕಾರದ ಅಧಿಕೃತ ಸಭೆಗಳನ್ನು ಹೈಕಮಾಂಡಿನ ನಿಲಯದ ಕಲಾವಿದರೇ ನಡೆಸುವ ಕರ್ಮ ಕರ್ನಾಟಕದ್ದು! ನಾನು ಟ್ಯಾಗ್ ಮಾಡಿರುವ ಫೋಟೋ ಆ ದೈನೇಸಿ ಸ್ಥಿತಿಗೆ ಸಾಕ್ಷಿ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸುರ್ಜೆವಾಲಾಗೆ ಸರ್ಕಾರದ ಸಭೆಗಳನ್ನು ನಡೆಸುವ ಜವಾಬ್ದಾರಿ, ಅವಕಾಶ ಕೊಟ್ಟವರು ಯಾರು? ಸಭೆಯಲ್ಲಿ ಹಿರಿಯ ಸಚಿವರಿದ್ದಾರೆ! ಹಿರಿಯ ಐಎಎಸ್ ಅಧಿಕಾರಿಗಳೂ ಹಾಜರಿದ್ದಾರೆ!! ಅಲ್ಲಿಗೆ ಇದು ಅಧಿಕೃತ ಸಭೆಯೇ ಆಯಿತು. ಆದರೆ, ಅಲ್ಲಿ ಸುರ್ಜೆವಾಲಾ ಸೆಂಟರ್ ಸೀಟಿನಲ್ಲಿದ್ದಾರೆ! ಸಚಿವರು ಸೈಡು ಕುರ್ಚಿಗಳ ಪಾಲಾಗಿದ್ದಾರೆ!! ಇದೇನು ವಿಚಿತ್ರ? ಮಾನ್ಯ ಮುಖ್ಯಮಂತ್ರಿಗಳೇ ಉತ್ತರಿಸಬೇಕು ಎಂದು ಆಕ್ರೋಶ ಹೊರ ಹಾಕಿದ್ದಾರೆ.

https://twitter.com/hd_kumaraswamy/status/1668610326194184193/photo/1

ರಾಜ್ಯಪಾಲರಿಗೆ ದೂರು

ಮತ್ತೊಂದು ಕಡೆ ಬಿಜೆಪಿ ನಾಯಕರು ಇವತ್ತು ರಾಜಭವನ ಕದ ತಟ್ಟಲು ಮುಂದಾಗಿದ್ದಾರೆ. ಮಧ್ಯಾಹ್ನ 12:30ಕ್ಕೆ ಮಾಜಿ ಡಿಸಿಎಂ ಅಶೋಕ್ ನೇತೃತ್ವದಲ್ಲಿ ರಾಜ್ಯಪಾಲರಿಗೆ ದೂರು ಕೊಡಲು ತೀರ್ಮಾನಿಸಿದ್ದಾರೆ. ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ಸುರ್ಜೇವಾಲ ಭಾಗಿಯಾಗಿದ್ದರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಲಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BBMP ಅಧಿಕಾರಿಗಳಿದ್ದ ಸಭೆಯಲ್ಲಿ ಸುರ್ಜೇವಾಲ ಭಾಗಿ -ಹೊಸ ವಿವಾದದಲ್ಲಿ ಸಿದ್ದರಾಮಯ್ಯ ಸರ್ಕಾರ..!

https://newsfirstlive.com/wp-content/uploads/2023/06/RANADEEP_SINGH14062023.jpg

Load More