/newsfirstlive-kannada/media/post_attachments/wp-content/uploads/2025/04/rashmika3.jpg)
ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ 29ನೇ ವಂತಕ್ಕೆ ಕಾಲಿಟ್ಟಿದ್ದಾರೆ. 29ನೇ ವರ್ಷದ ಹುಟ್ಟುಹಬ್ಬವನ್ನು ಇನ್ನಷ್ಟು ಸ್ಪೆಷಲ್ ಆಗಿ ಸೆಲೆಬ್ರೇಟ್ ಮಾಡೋಕೆ ನ್ಯಾಷನಲ್ ಕ್ರಶ್ ಗಲ್ಫ್ ರಾಷ್ಟ್ರವಾದ ಓಮನ್ಗೆ ಹಾರಿದ್ದಾರೆ.
ಇದನ್ನೂ ಓದಿ:ಮತ್ತೆ ಕಿರುತೆರೆ ಲೋಕಕ್ಕೆ ಎಂಟ್ರಿ ಕೊಟ್ಟ ಬಿಗ್ಬಾಸ್ ಖ್ಯಾತಿಯ ಭವ್ಯಾ ಗೌಡ; ಯಾವ ಸೀರಿಯಲ್?
ರಶ್ಮಿಕಾ ಜೊತೆ ವಿಜಯ್ ದೇವರಕೊಂಡ ಕೂಡ ಹೋಗಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮೊನ್ನೆ ಇಬ್ಬರೂ ಒಂದೇ ಏರ್ಪೋರ್ಟ್ನಲ್ಲಿ ಕಾಣಿಸಿಕೊಂಡಿದ್ದು. ಅಲ್ಲದೇ ಕಳೆದ ವರ್ಷದ ಬರ್ತ್ ಡೇ ವೆಕೇಷನ್ಲ್ಲಿ ವಿಜಯ್ ದೇವರಕೊಂಡ ಭಾಗಿಯಾಗಿದ್ರು. ಸದ್ಯ ನಟಿ ರಶ್ಮಿಕಾ ತನ್ನ ಪ್ರವಾಸದ ಅದ್ಭುತ ಫೋಟೋಗಳನ್ನು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ.
View this post on Instagram
ರಶ್ಮಿಕಾ ಶೇರ್ ಮಾಡಿಕೊಂಡ ಫೋಟೋದಲ್ಲಿ ತಲೆಗೆ ಟೋಪಿ, ಕಪ್ಪು ಬಣ್ಣದ ಶಾರ್ಟ್ ಸ್ಕರ್ಟ್ಧರಿಸಿ ಕ್ಯಾಮೆರಾಗೆ ಸ್ಟೈಲಿಶ್ ಆಗಿ ಪೋಸ್ ಕೊಟ್ಟಿದ್ದಾರೆ. ಇದೇ ಫೋಟೋಸ್ ನೋಡಿದ ಅಭಿಮಾನಿಗಳು ನೆಚ್ಚಿನ ನಟಿಗೆ ಕಾಮೆಂಟ್ಸ್ ಮಾಡುವ ಮೂಲಕ ಹುಟ್ಟು ಹಬ್ಬಕ್ಕೆ ಶುಭ ಹಾರೈಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ