ಮೊದಲ ಬಾರಿ ಐತಿಹಾಸಿಕ ಪಾತ್ರಕ್ಕೆ ಬಣ್ಣ ಹಚ್ಚಿದ ರಶ್ಮಿಕಾ ಮಂದಣ್ಣ; ಏನಿದರ ವಿಶೇಷ? PHOTOS

author-image
admin
Updated On
ಮೊದಲ ಬಾರಿ ಐತಿಹಾಸಿಕ ಪಾತ್ರಕ್ಕೆ ಬಣ್ಣ ಹಚ್ಚಿದ ರಶ್ಮಿಕಾ ಮಂದಣ್ಣ; ಏನಿದರ ವಿಶೇಷ? PHOTOS
Advertisment
  • ಮೊದಲ ಬಾರಿಗೆ ಐತಿಹಾಸಿಕ ಪಾತ್ರಕ್ಕೆ ಬಣ್ಣ ಹಚ್ಚಿದ ರಶ್ಮಿಕಾ ಮಂದಣ್ಣ
  • ಮರಾಠ ಚಕ್ರವರ್ತಿಯ ಮಹಾರಾಣಿಯಾಗಿ ಮಿಂಚಿದ ನ್ಯಾಷನಲ್ ಕ್ರಶ್!
  • ಪುಷ್ಪ 2 ಬಳಿಕ ರಶ್ಮಿಕಾ ಮಂದಣ್ಣ ಮತ್ತೊಂದು ಬಿಗ್ ಬಜೆಟ್ ಸಿನಿಮಾ

ನ್ಯಾಷನಲ್ ಕ್ರಶ್, ಕನ್ನಡತಿ ರಶ್ಮಿಕಾ ಮಂದಣ್ಣ ಮುಟ್ಟಿದೆಲ್ಲಾ ಚಿನ್ನ ಅನ್ನೋ ಹಾಗಾಗಿದೆ. ಸಾಲು, ಸಾಲು ಬ್ಲಾಕ್ ಬಸ್ಟರ್ ಸಿನಿಮಾದಲ್ಲಿ ಅಭಿನಯಿಸುತ್ತಿರುವ ರಶ್ಮಿಕಾ ಮತ್ತೊಂದು ಗುಡ್ ನ್ಯೂಸ್‌ ಕೊಟ್ಟಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಮೊದಲ ಬಾರಿಗೆ ಐತಿಹಾಸಿಕ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಯಶುಬಾಯ್ ಮಹಾರಾಣಿಯಾಗಿ ರಶ್ಮಿಕಾ ಮಿಂಚಿದ್ದು, ಮೊದಲ ಪೋಸ್ಟರ್ ಬಿಡುಗಡೆ ಆಗಿದೆ. ರಶ್ಮಿಕಾ ಮಂದಣ್ಣ ಅವರ ಮಹಾರಾಣಿ ಗೆಟಪ್‌ಗೆ ಅಭಿಮಾನಿಗಳು ಫಿದಾ ಆಗಿದ್ದು, ಫೋಟೋ ಫುಲ್ ವೈರಲ್ ಆಗಿದೆ.

publive-image

ಪುಷ್ಪ 2 ಬಳಿಕ ರಶ್ಮಿಕಾ ಮಂದಣ್ಣ ಅವರು ಛಾವ (Chhaava) ಸಿನಿಮಾದ ಐತಿಹಾಸಿಕ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. Chhaava ಸಿನಿಮಾ ಛತ್ರಪತಿ ಶಿವಾಜಿ ಮಹಾರಾಜರ ಉತ್ತರಾಧಿಕಾರಿ ಛತ್ರಪತಿ ಸಾಂಭಾಜಿ ಮಹಾರಾಜ್ ಜೀವನನಾಧಾರಿತ ಚಿತ್ರ. ಈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಇದನ್ನೂ ಓದಿ: ನಂಬಲು ಅಸಾಧ್ಯ, ಹೃದಯ ವಿದ್ರಾವಕ -ರಶ್ಮಿಕಾ ಮಂದಣ್ಣ ಆಕ್ರೋಶ 

ಸಾಂಭಾಜಿ ಮಹಾರಾಜ್ ಪತ್ನಿ ಯಶುಬಾಯ್ ಮಹಾರಾಣಿಯಾಗಿ ರಶ್ಮಿಕಾ ಮಂದಣ್ಣ ಅಭಿನಯಿಸಿದ್ದು, ಇದೇ ಫೆಬ್ರವರಿ 14ರಂದು ಛಾವ (Chhaava) ಬಿಡುಗಡೆ ಆಗುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment