ಫ್ಯಾನ್ಸ್​​ಗೆ ಗುಡ್​ನ್ಯೂಸ್​​; ರಶ್ಮಿಕಾ ಮಂದಣ್ಣಗೆ ಕೇಂದ್ರ ಸರ್ಕಾರದಿಂದ ಮಹತ್ವದ ಜವಾಬ್ದಾರಿ

author-image
Veena Gangani
Updated On
ಫ್ಯಾನ್ಸ್​​ಗೆ ಗುಡ್​ನ್ಯೂಸ್​​; ರಶ್ಮಿಕಾ ಮಂದಣ್ಣಗೆ ಕೇಂದ್ರ ಸರ್ಕಾರದಿಂದ ಮಹತ್ವದ ಜವಾಬ್ದಾರಿ
Advertisment
  • ಒಂದಲ್ಲ ಒಂದು ವಿಚಾರಕ್ಕೆ ಸದಾ ಸುದ್ದಿಯಲ್ಲಿರುತ್ತಾರೆ ಈ ಕ್ರಶ್​
  • ಸೋಷಿಯಲ್​ ಮೀಡಿಯಾದಲ್ಲಿ ಶುಭ ಸುದ್ದಿ ಹಂಚಿಕೊಂಡ ನಟಿ
  • ಎಲ್ಲರಿಗೂ ಅರಿವು ಮೂಡಿಸಬೇಕು ಎಂದುಕೊಂಡಿದ್ದೆ ಆದರೆ ಈಗ!

ಕೊಡಗಿನ ಬೆಡಗಿ, ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಌಕ್ಟೀವ್​ ಆಗಿರೋ ನಟಿ. ಅತಿ ಹೆಚ್ಚು ಫ್ಯಾನ್ಸ್​ ಹೊಂದಿರೋ ಇವರು ಒಂದಲ್ಲ ಮತ್ತೊಂದು ವಿಚಾರಕ್ಕೆ ಸದಾ ಸುದ್ದಿಯಾಗುತ್ತಲೇ ಇರುತ್ತಾರೆ. ಆಗಾಗ ಸೋಷಿಯಲ್ ಮೀಡಿಯಾದಲ್ಲಿ ಹೊಸ, ಹೊಸ ಫೋಟೋಗಳ ಮೂಲಕ ಸದ್ದು ಮಾಡ್ತಾ ಇರ್ತಾರೆ ರಶ್ಮಿಕಾ ಮಂದಣ್ಣ.

publive-image

ಆದರೆ ಇದೀಗ ನಟಿ ರಶ್ಮಿಕಾ ಮಂದಣ್ಣ ಅವರನ್ನು ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ (I4C) ಬ್ರಾಂಡ್ ಅಂಬಾಸಿಡರ್ ಆಗಿ ನೇಮಕ ಮಾಡಲಾಗಿದೆ. ಈ ಬಗ್ಗೆ ಖುದ್ದು ನಟಿ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಶೇರ್ ಮಾಡಿಕೊಂಡ ವಿಡಿಯೋದಲ್ಲಿ ನಟಿ ಕೆಲವು ವರ್ಷಗಳ ಹಿಂದೆ ನನ್ನ ಡೀಪ್ ಫೇಕ್ ವಿಡಿಯೋ ವೈರಲ್ ಆಗಿದ್ದು ಗೊತ್ತೇ ಇದೆ. ಅದು ಸೈಬರ್ ಕ್ರೈಂ. ಅದರ ನಂತರ ನಾನು ಸೈಬರ್ ಅಪರಾಧಗಳ ವಿರುದ್ಧ ಹೋರಾಡಬೇಕು ಎಂದು ಯೋಚಿಸಿದೆ. ಈ ಬಗ್ಗೆ ಎಲ್ಲರಿಗೂ ಅರಿವು ಮೂಡಿಸಬೇಕು ಎಂದುಕೊಂಡಿದ್ದೆ.

ಆದರೆ ಈಗ ಈ ಸುದ್ದಿಯನ್ನು ಹಂಚಿಕೊಳ್ಳಲು ಖುಷಿಯಾಗುತ್ತಿದೆ. ನಾನು ಕೇಂದ್ರ ಸರ್ಕಾರದ ಜೊತೆಗೆ ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ ಬ್ರಾಂಡ್ ಅಂಬಾಸಿಡರ್ ಆಗಿದ್ದೇನೆ. ಸೈಬರ್ ಕ್ರಿಮಿನಲ್‌ಗಳು ಎಲ್ಲರನ್ನೂ ಟಾರ್ಗೆಟ್ ಮಾಡುತ್ತಿದ್ದಾರೆ. ಅದಕ್ಕಾಗಿ ನಾವು ಎಚ್ಚರವಾಗಿರಬೇಕು. ಮಾತ್ರವಲ್ಲದೆ ನಮ್ಮನ್ನು ನಾವು ರಕ್ಷಿಸಿಕೊಳ್ಳಬೇಕು ಮತ್ತು ಸೈಬರ್ ಅಪರಾಧಗಳ ವಿರುದ್ಧ ಕೆಲಸ ಮಾಡಬೇಕು. ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ ಬ್ರಾಂಡ್ ಅಂಬಾಸಿಡರ್ ಆಗಿ ನಾನು ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸುತ್ತೇನೆ. ಸೈಬರ್ ಅಪರಾಧಗಳಿಂದ ದೇಶವನ್ನು ರಕ್ಷಿಸಬೇಕು ಎಂದು ಅದು ಹೇಳಿದೆ ಎಂದು ನಟಿ ಹೇಳಿದ್ದಾರೆ.

ಇದನ್ನೂ ಓದಿ:BBK11: ಯಾವನಾದ್ರು ಅಪ್ಪನಿಗೆ ಹುಟ್ಟಿದ್ರೆ.. ಚೈತ್ರಾ ಖಡಕ್ ಲುಕ್ಕು, ಘರ್ಜನೆಗೆ ಜಗದೀಶ್‌ ಸ್ಟನ್ ಆದ್ರಾ?

publive-image

ಕೆಲವು ತಿಂಗಳುಗಳ ಹಿಂದೆ ರಶ್ಮಿಕಾ ಅವರ ಡೀಪ್ ಫೇಕ್ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿ ಸಂಚಲನ ಮೂಡಿಸಿತ್ತು. ಈ ಪ್ರಕರಣದಲ್ಲಿ ಹಲವರನ್ನು ಪೊಲೀಸರು ಬಂಧಿಸಿದ್ದರು. ಇದಾದ ಬಳಿಕ ಬಾಲಿವುಡ್​ ನಟಿಯರಾದ ಕಾಜೋಲ್​, ಆಲಿಯಾ ಸೇರಿದಂತೆ ಹಲವು ನಟಿಯರ ವಿಡಿಯೋಗಳು ಕೂಡ ಇದೇ ರೀತಿ ವೈರಲ್ ಆಗಿತ್ತು. ಆದರೆ ಇದೀಗ ನಟಿ ರಶ್ಮಿಕಾ ಮಂದಣ್ಣ ಇದೀಗ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರಕ್ಕೆ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment