Advertisment

ಅಭಿಮಾನಿಗಳಿಗೆ ಬಿಗ್ ಶಾಕ್.. ಪೊಲೀಸರ ಮುಂದೆ ಹಾಜರಾದ ರಶ್ಮಿಕಾ ಮಂದಣ್ಣ.. ಏನಾಯ್ತು..

author-image
Ganesh
Updated On
ಅಭಿಮಾನಿಗಳಿಗೆ ಬಿಗ್ ಶಾಕ್.. ಪೊಲೀಸರ ಮುಂದೆ ಹಾಜರಾದ ರಶ್ಮಿಕಾ ಮಂದಣ್ಣ.. ಏನಾಯ್ತು..
Advertisment
  • ದೆಹಲಿ ಪೊಲೀಸ್ ವಿಶೇಷ ಘಟಕದ ಮುಂದೆ ರಶ್ಮಿಕಾ ಹಾಜರು
  • ಪ್ರಕರಣಕ್ಕೆ ಸಂಬಂಧಿಸಿ ಎಲ್ಲಾ ಆಯಾಮದಲ್ಲೂ ತನಿಖೆ ತೀವ್ರ
  • ನ್ಯಾಷನಲ್ ಕ್ರಷ್ ರಶ್ಮಿಕಾ ವಿಚಾರಣೆಗೆ ಹಾಜರಾಗಿದ್ದು ಯಾಕೆ..?

ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಅವರ ‘ಪುಷ್ಪ 2 : ದಿ ರೂಲ್​​’ ಸಿನಿಮಾಗಾಗಿ ಅಭಿಮಾನಿಗಳು ಕಾತುರದಿಂದ ಕಾದು ಕೂತಿದ್ದಾರೆ. ಈ ಮಧ್ಯೆ ಫ್ಯಾನ್ಸ್​ ಕೊಂಚ ಆಘಾತಕ್ಕೆ ಒಳಗಾಗಿ ನಿಟ್ಟುಸಿರು ಬಿಟ್ಟಿದ್ದಾರೆ.

Advertisment

ದೆಹಲಿ ಪೊಲೀಸರು ರಶ್ಮಿಕಾ ಮಂದಣ್ಣ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂಬ ಸುದ್ದಿ ಅಭಿಮಾನಿಗಳಲ್ಲಿ ಆತಂಕ ಮೂಡಿಸಿತ್ತು. ಇದೀಗ ಸಿಕ್ಕಿರುವ ಮಾಹಿತಿ ಪ್ರಕಾರ, ಇತ್ತೀಚೆಗೆ ರಶ್ಮಿಕಾ ಮಂದಣ್ಣಗೆ ಸಂಬಂಧಿಸಿದ ಡೀಪ್ ಫೇಕ್ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು.

ಇದನ್ನೂ ಓದಿ: ಖರ್ಚಿಗಾಗಿ ಅಮ್ಮನಿಗೆ 200 ರೂಪಾಯಿ ಕೊಟ್ಟ ಮಗ.. ಇಬ್ಬರು ಮಕ್ಕಳ ಜೊತೆ ಹಾಳು ಬಾವಿಗೆ ಹಾರಿದ ಪತ್ನಿ..

publive-image

ಈ ಸಂಬಂಧ ದೆಹಲಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿ ಹೊಸ ಅಪ್​ಡೇಟ್ ಸಿಕ್ಕಿದ್ದು, ರಶ್ಮಿಕಾ ಮಂದಣ್ಣ ದೆಹಲಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ದೆಹಲಿ ಪೊಲೀಸ್ ವಿಶೇಷ ಘಟಕದ ಐಎಫ್​ಎಸ್​ಓ ತಂಡವು ರಶ್ಮಿಕಾ ಮಂದಣ್ಣರ ಹೇಳಿಕೆಯನ್ನು ದಾಖಲಿಸಿಕೊಂಡಿದೆ.

Advertisment

ಆರೋಪಿ ಬಂಧನ
ಡೀಪ್ ಫೇಕ್ ವಿಡಿಯೋ ಪ್ರಕರಣದಲ್ಲಿ ಜನವರಿ 21 ರಂದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇ. ನವೀನ್ ಎಂಬಾತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ರಶ್ಮಿಕಾ ಮಂದಣ್ಣ ಸೇರಿ ದಕ್ಷಿಣ ಭಾರತದ ಇಬ್ಬರು ನಟಿಯರ ಸೆಲೆಬ್ರಿಟಿ ಪೇಜ್​ಗಳನ್ನು ನಡೆಸುತ್ತಿದ್ದ. ರಶ್ಮಿಕಾ ಅವರ ಡೀಪ್ ಫೇಕ್ ವಿಡಿಯೋ ಮೂಲಕ ಫಾಲೋವರ್ಸ್​ ಹೆಚ್ಚಿಸಿಕೊಳ್ಳಲು ಹೀಗೆ ಮಾಡಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ.

ಇದನ್ನೂ ಓದಿಕ್ರೆಡಿಟ್ ಕಾರ್ಡ್​ ಬಳಕೆದಾರರಿಗೆ ಬಿಗ್ ಶಾಕ್.. ನೀವು ಓದಲೇಬೇಕಾದ ಶಾಕಿಂಗ್ ನ್ಯೂಸ್..!

publive-image

ರಶ್ಮಿಕಾ ಮಂದಣ್ಣ ಅಭಿನಯದ ಅನಿಮಲ್ ಚಿತ್ರ ಬಿಡುಗಡೆಗೂ ಮೊದಲು ಅಂದರೆ ನವೆಂಬರ್ 6, 2023ರಂದು ಸೋಶಿಯಲ್ ಮೀಡಿಯಾದಲ್ಲಿ ಡೀಪ್ ಫೇಕ್ ವಿಡಿಯೋ ವೈರಲ್ ಆಗಿತ್ತು. ಬ್ರಿಟಿಷ್ ಸೋಶಿಯಲ್ ಮೀಡಿಯಾ ಸ್ಟಾರ್ ಝಾರ ಪಟೇಲ್ ವಿಡಿಯೋಗೆ ರಶ್ಮಿಕಾರ ಫೋಟೋ ಬಳಸಿಕೊಳ್ಳಲಾಗಿತ್ತು. ಇದನ್ನು ಬಿಗ್​ಬಿ ಅಮಿತಾಬ್ ಬಚ್ಚನ್ ಸೇರಿದಂತೆ ದೇಶದ ಅನೇಕ ಸ್ಟಾರ್​ಗಳು ಖಂಡಿಸಿದ್ದರು.

Advertisment

ಇದನ್ನೂ ಓದಿ:ಕೋರ್ಟ್​ ಮುಂದೆ ಸತ್ಯ ಒಪ್ಪಿಕೊಂಡ ಕೊರೊನಾ ಲಸಿಕೆ ಕಂಪನಿ.. ಕೋವಿಶೀಲ್ಡ್​ ತೆಗೆದುಕೊಂಡವ್ರಿಗೆ ಗಢಗಢ..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment