/newsfirstlive-kannada/media/post_attachments/wp-content/uploads/2023/08/ratan_TATA.jpg)
ಭಾರತದ ಶ್ರೀಮಂತ ಉದ್ಯಮಿ ಮತ್ತು ಟಾಟಾ ಸನ್ಸ್ ಚೇರ್ಮನ್ ಆಗಿರೋ ರತನ್ ಟಾಟಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಹೀಗಾಗಿ, ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
86 ವರ್ಷದ ಹಿರಿಯ ಜೀವಿಗಳಾದ ರತನ್ ಟಾಟಾ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಎಂದಿನಂತೆಯೇ ಜನರಲ್ ಚೆಕಪ್ಗಾಗಿ ಆಸ್ಪತ್ರೆಗೆ ಭೇಟಿ ನೀಡಿರುವುದಾಗಿ ತಾವೇ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೀಗ, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಯಾರು ಈ ರತನ್ ಟಾಟಾ?
1991ರಲ್ಲಿ ಟಾಟಾ ಸನ್ಸ್ ಚೇರ್ಮನ್ ಆಗಿದ್ದ ರತನ್ ಟಾಟಾ 2012ರವರೆಗೂ ಈ ಹುದ್ದೆಯಲ್ಲಿದ್ದರು. ತಮ್ಮ ಮರಿ ಮುತ್ತಜ್ಜ ಸ್ಥಾಪನೆ ಮಾಡಿದ್ದ ಗ್ರೂಪ್ ಅನ್ನು ದೊಡ್ಡ ಮಟ್ಟದಲ್ಲಿ ಬೆಳೆಸಿದ ಯಶಸ್ಸು ಇವರಿಗಿದೆ. ಟಾಟಾ ಸನ್ಸ್, ಟಾಟಾ ಇಂಡಸ್ಟ್ರೀಸ್, ಟಾಟಾ ಮೋಟಾರ್ಸ್, ಟಾಟಾ ಸ್ಟೀಲ್ ಮತ್ತು ಟಾಟಾ ಕೆಮಿಕಲ್ಸ್ ಕೂಡ ಇದೆ.
ಇದನ್ನೂ ಓದಿ:ಬಾಂಗ್ಲಾ ವಿರುದ್ಧ 2ನೇ T20; ಬಲಿಷ್ಠ ಟೀಮ್ ಇಂಡಿಯಾ ಕಣಕ್ಕೆ; ಸ್ಟಾರ್ ಆಟಗಾರರಿಗೆ ಕೊಕ್!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ