/newsfirstlive-kannada/media/post_attachments/wp-content/uploads/2024/10/Ratan-Tata-3.jpg)
ಪ್ರತಿಯೊಬ್ಬರ ಜೀವನದಲ್ಲೂ ಪ್ರೀತಿಯಾಗಿರುತ್ತೆ. ಆದರೆ ಕೆಲವರು ಹೇಳಿಕೊಂಡರೆ, ಮತ್ತೆ ಹಲವರು ಬಚ್ಚಿಟ್ಟುಕೊಂಡಿರುತ್ತಾರೆ. ಅದರಂತೆಯೇ ರತನ್ ಟಾಟಾ ಜೀವನದಲ್ಲೂ ಪ್ರೀತಿಯಾಗಿತ್ತು. ಯವ್ವನದಲ್ಲಿ ಯುವತಿಯೊಬ್ಬಳ ಪ್ರೀತಿಗೆ ಬಿದ್ದಿದ್ದರು. ಆದರೆ ಆ ಪ್ರೀತಿ ಏನಾಯ್ತು? ರತನ್ ಟಾಟಾ ಆಕೆಯನ್ನು ಮದ್ವೆ ಯಾಕಾಗಿಲ್ಲ? ಈ ಕುರಿತಾಗಿ ಮಾಹಿತಿ ಇಲ್ಲಿದೆ.
ರತನ್ ಟಾಟಾ ಮದುವೆಯಾಗಿಲ್ಲ. ಆದ್ರೆ, ಯವ್ವನದಲ್ಲಿ ಅವರು ಪ್ರೀತಿಯ ಬಲೆಗೆ ಬಿದ್ದಿದ್ದು ನಿಜ. ಕೆಲ ವರ್ಷಗಳ ಹಿಂದಷ್ಟೇ ರತನ್ ಟಾಟಾ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಲವ್ ಸ್ಟೋರಿಯಲ್ಲಿ ಹಂಚಿಕೊಂಡಿದ್ರು.
[caption id="attachment_90877" align="alignnone" width="800"] ಅಜ್ಜಿ ಜೊತೆಗೆ ರತನ್ ಟಾಟಾ[/caption]
ಇದನ್ನೂ ಓದಿ: ಚಿಕ್ಕವಯಸ್ಸಲ್ಲೇ ಹೆತ್ತವರು ದೂರ, ಅಜ್ಜಿ ಜೊತೆ ಬಾಲ್ಯ! ರತನ್ ಟಾಟಾ ಬೆಳೆದು ಬಂದ ಹಾದಿಯೇ ರೋಚಕ
ಕಾಲೇಜಿನ ನಂತರ, ನಾನು ಲಾಸ್ ಏಂಜಲೀಸ್‌ನಲ್ಲಿನ ಆರ್ಕಿಟೆಕ್ಚರ್ ಸಂಸ್ಥೆಯೊಂದರಲ್ಲಿ ಕೆಲಸಕ್ಕೆ ಬಂದೆ. ಅಲ್ಲಿ ನಾನು 2 ವರ್ಷಗಳ ಕಾಲ ಕೆಲಸ ಮಾಡಿದೆ. ಸ್ವಂತ ಕಾರು ಖರೀದಿಸಿದೆ, ನನ್ನ ಕೆಲಸವನ್ನು ಇಷ್ಟಪಟ್ಟೆ. ಲಾಸ್ ಏಂಜಲೀಸ್‌ನಲ್ಲಿ ನಾನು ಒಬ್ಬಾಕೆಯನ್ನು ಪ್ರೀತಿಸುತ್ತಿದ್ದೆ ಮತ್ತು ನಮ್ಮಿಬ್ಬರ ಮದುವೆಯಾಗುವುದು ಖಚಿತವಾಗಿತ್ತು. ಅದೇ ಸಮಯದಲ್ಲಿ ನನ್ನ ಅಜ್ಜಿಯ ಆರೋಗ್ಯ ಸರಿ ಇರ್ಲಿಲ್ಲ. ಹೀಗಾಗಿ ಅವರನ್ನು ನೋಡಲೆಂದು ನಾನು ತಾಯ್ನಾಡಿಗೆ ಹಿಂದಿರುಗಲು ನಿರ್ಧರಿಸಿದ್ದೆ.
ನಾನು ಮದುವೆಯಾಗ ಬಯಸಿದ್ದ ಹುಡುಗಿಯೂ ನನ್ನೊಂದಿಗೆ ಭಾರತಕ್ಕೆ ಬರುತ್ತಾಳೆಂದು ಭಾವಿಸಿದ್ದೆ. ಆದ್ರೆ, ಆಕೆ ಭಾರತಕ್ಕೆ ಬರ್ಲಿಲ್ಲ. 1962ರ ಇಂಡೋ-ಚೀನಾ ಯುದ್ಧದ ಕಾರಣ ಪೋಷಕರು ಆಕೆಯನ್ನು ಎಲ್ಲಿಗೂ ಹೋಗಲು ಬಿಡ್ಲಿಲ್ಲ. ಇದಾದ ಬಳಿಕ ನಮ್ಮ ಸಂಬಂಧ ದೂರವಾಯ್ತು. ಇದಾದ ಮೇಲೆ ನನ್ನ ಬದುಕಿನಲ್ಲಿ ಬಹಳ ಮಂದಿ ಮಹಿಳೆಯರು ಬಂದು ಹೋದರು. ಆದರೆ ಯಾರೂ ತನ್ನ ಕೈಹಿಡಿಯಲಿಲ್ಲ ಎಂದು ರತನ್ ಟಾಟಾ ಹೇಳಿದ್ದರು.
ಇದನ್ನೂ ಓದಿ: ಭಾರತದ ಉದ್ಯೋಗ ವಲಯದ ಪಿತಾಮಹ ಇನ್ನಿಲ್ಲ! ರತನ್ ಟಾಟಾ ಸಾ*ವಿನ ಸುದ್ದಿ ಕೇಳಿ ಓಡೋಡಿ ಬಂದ ಮುಖೇಶ್ ಅಂಬಾನಿ
ಆದರೀಗ ಭಾರತ ಕಂಡ ಶ್ರೇಷ್ಠ ಕೈಗಾರಿಕೋದ್ಯಮಿ, ಟಾಟಾ ಸಮೂಹದ ಮುಖ್ಯಸ್ಥ ರತನ್ ಟಾಟಾ ಅನಾರೋಗ್ಯದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದವರು ತಮ್ಮ 86ನೇ ವಯಸ್ಸಿಗೆ ವಿಧಿವಶರಾಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ