newsfirstkannada.com

ವಿಶ್ವ ವಿಖ್ಯಾತ ಪುರಿ ಜಗನ್ನಾಥ ರಥೋತ್ಸವದಲ್ಲಿ ಅವಘಡ: ಓರ್ವ ಭಕ್ತ ಸಾವು, ಹಲವರಿಗೆ ಗಂಭೀರ ಗಾಯ

Share :

Published July 7, 2024 at 9:26pm

Update July 7, 2024 at 9:39pm

  ದೇವರ ತಾಳಧ್ವಜ ರಥವನ್ನು ಎಳೆಯುವ ವೇಳೆ ಅವಘಡ

  ಇಂದು ಒಡಿಶಾದ ಪುರಿಯಲ್ಲಿ ನಡೆದ ಜಗನ್ನಾಥ ರಥೋತ್ಸವ

  ಜಗನ್ನಾಥ ರಥೋತ್ಸವದಲ್ಲಿ ಭಾಗಿಯಾಗಿದ್ದ ಲಕ್ಷಾಂತರ ಭಕ್ತರು

ಭುವನೇಶ್ವರ್: ವಿಶ್ವ ವಿಖ್ಯಾತ ಪುರಿ ಜಗನ್ನಾಥ ರಥೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಒಡಿಶಾ ರಾಜ್ಯ ಮಾತ್ರವಲ್ಲ ಇಡೀ ದೇಶವೇ ಕಾತುರದಿಂದ ಎದುರು ನೋಡುತ್ತಿರುವ ಪುರಿ ಜಗನ್ನಾಥ ರಥಯಾತ್ರೆ ಆರಂಭಗೊಂಡಿದೆ. ಈ ರಥೋತ್ಸವವನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗಿಯಾಗಿದ್ದಾರೆ.

ಇದನ್ನೂ ಓದಿ: ದಾಸ ಜೈಲಿನಲ್ಲಿರುವಾಗಲೇ ಶಾಸ್ತ್ರಿ ಥಿಯೇಟರ್‌ಗೆ ಲಗ್ಗೆ.. 20 ವರ್ಷಗಳ ಬಳಿಕ ರೀ ರಿಲೀಸ್​; ಯಾವಾಗ ಗೊತ್ತಾ?

ಪುರಿಯಲ್ಲಿ ನಡೆಯುವ ರಥಯಾತ್ರೆ ದುರಂತವೊಂದು ಸಂಭವಿಸಿದೆ. ಹೌದು, ಇಂದು ನಡೆದ ಪ್ರಸಿದ್ಧ ಜಗನ್ನಾಥ ರಥ ಯಾತ್ರೆಯ ಸಂದರ್ಭದಲ್ಲಿ ನೂಕುನುಗ್ಗಲು ಉಂಟಾದ ಕಾರಣ ಭಕ್ತರೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇತರರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗಿದ್ದರು.

ಇದೇ ವೇಳೆ ದೇವರ ತಾಳಧ್ವಜ ರಥವನ್ನು ಎಳೆಯುವ ಸಂದರ್ಭದಲ್ಲಿ ನೂಕುನುಗ್ಗಲು ಉಂಟಾಗಿದ್ದ ಪರಿಣಾಮ ಕಾಲ್ತುಳಿತಕ್ಕೆ ಓರ್ವ ಭಕ್ತ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೂ ಹಲವಾರು ಭಕ್ತಾದಿಗಳಿಗೆ ಗಂಭೀರ ಗಾಯಗಳಾಗಿವೆ. ಆ ಕೂಡಲೇ ಅವರನ್ನು ಪುರಿ ಜಿಲ್ಲಾಸ್ಪತ್ರೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯಕ್ಕೆ ರಥ ಎಳೆಯುವ ಕಾರ್ಯಕ್ರಮವನ್ನು ದಿನದ ಮಟ್ಟಿಗೆ ಸ್ಥಗಿತಗೊಳಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ವಿಶ್ವ ವಿಖ್ಯಾತ ಪುರಿ ಜಗನ್ನಾಥ ರಥೋತ್ಸವದಲ್ಲಿ ಅವಘಡ: ಓರ್ವ ಭಕ್ತ ಸಾವು, ಹಲವರಿಗೆ ಗಂಭೀರ ಗಾಯ

https://newsfirstlive.com/wp-content/uploads/2024/07/odisa.jpg

Load More