newsfirstkannada.com

ದಕ್ಷಿಣ ಭಾರತದ ಜೈನ ಮುಖಂಡ, ಬೆಳಗಾವಿಯ ಖ್ಯಾತ ಉದ್ಯಮಿ ರಾವಸಾಹೇಬ ಪಾಟೀಲ ಇನ್ನಿಲ್ಲ

Share :

Published June 25, 2024 at 2:28pm

    ಹಿರಿಯ ಸಹಕಾರಿ ಧುರೀಣರು, ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದರು

    ಅರಿಹಂತ ಉದ್ಯೋಗ ಸಮೂಹ ಸಂಸ್ಥೆಯ ಸಂಸ್ಥಾಪಕ‌ ಅಧ್ಯಕ್ಷ ಇನ್ನಿಲ್ಲ

    ದಕ್ಷಿಣ ಭಾರತ ಜೈನ ಸಮಾಜದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು

ಬೆಳಗಾವಿ: ದಕ್ಷಿಣ ಭಾರತ ಜೈನ ಸಮಾಜದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ರಾವುಸಾಹೇಬ ಪಾಟೀಲ ಅವರು ನಿಧನರಾಗಿದ್ದಾರೆ. ರಾವಸಾಹೇಬ ಪಾಟೀಲರು ಜೈನ ಮುಖಂಡರು, ಖ್ಯಾತ ಉದ್ಯಮಿಯೂ ಆಗಿದ್ದರು.

ಖ್ಯಾತ ಉದ್ಯಮಿ ರಾವಸಾಹೇಬ ಪಾಟೀಲರಿಗೆ 80 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಹಿರಿಯ ಸಹಕಾರಿ ಧುರೀಣರು, ಸಾಮಾಜಿಕ, ಧಾರ್ಮಿಕ, ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದ ಇವರು ಇಂದು ಬೆಳಗ್ಗೆ ಇಹಲೋಕವನ್ನು ತ್ಯಜಿಸಿದ್ದಾರೆ.

ರಾವಸಾಹೇಬ ಪಾಟೀಲರ ನಿಧನದ ಹಿನ್ನೆಲೆಯಲ್ಲಿ ಕುಟುಂಬಸ್ಥರು, ಅಭಿಮಾನಿಗಳ ಆಂಕ್ರದನ ಮುಗಿಲು ಮುಟ್ಟಿದೆ. ಮೃತರ ಹುಟ್ಟೂರಾದ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೊರಗಾಂವ ಪಟ್ಟಣದಲ್ಲಿ ಇಂದು ಸಂಜೆ ಅಂತ್ಯಸಂಸ್ಕಾರ ನಡೆಯಲಿದೆ.

ಇದನ್ನೂ ಓದಿ: EXCLUSIVE: ಒಂದಲ್ಲ.. ಎರಡಲ್ಲ.. 8 ಮಂದಿ ಐ ವಿಟ್ನೆಸ್; ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಹೊಸ ಟ್ವಿಸ್ಟ್‌! 

ರಾವಸಾಹೇಬ ಪಾಟೀಲರು ಅರಿಹಂತ ಉದ್ಯೋಗ ಸಮೂಹ ಸಂಸ್ಥೆಯ ಸಂಸ್ಥಾಪಕ‌ ಅಧ್ಯಕ್ಷರಾಗಿದ್ದರು. ಹಲವಾರು ಉದ್ಯಮ ಜೊತೆಗೆ ಅರಿಹಂತ ಬ್ಯಾಂಕ್‌ ಶಾಖೆಗಳನ್ನ ಹೊಂದಿದ್ದರು. ಸದ್ಯ ದಕ್ಷಿಣ ಭಾರತ ಜೈನ ಸಮಾಜದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ದಕ್ಷಿಣ ಭಾರತದ ಜೈನ ಮುಖಂಡ, ಬೆಳಗಾವಿಯ ಖ್ಯಾತ ಉದ್ಯಮಿ ರಾವಸಾಹೇಬ ಪಾಟೀಲ ಇನ್ನಿಲ್ಲ

https://newsfirstlive.com/wp-content/uploads/2024/06/Chikkodi-Rao-Saheb-Patil.jpg

Load More