ಇಂದು ಆರ್ಸಿಬಿ, ಗುಜರಾತ್ ಟೈಟನ್ಸ್ ತಂಡದ ಮಧ್ಯೆ ರೋಚಕ ಪಂದ್ಯ
ಎಂ. ಚಿನ್ನಸ್ವಾಮಿ ಸ್ಟೇಡಿಯಮ್ನಲ್ಲಿ ನಡೆಯಲಿರೋ ಹೈವೋಲ್ಟೇಜ್ ಮ್ಯಾಚ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಬ್ಯಾಡ್ನ್ಯೂಸ್!
ನಿನ್ನೆಯಿಂದ ಇಡೀ ರಾಜ್ಯಾದ್ಯಂತ ಭಾರೀ ಮಳೆಯಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಲ್ಲೂ ಜೋರು ಮಳೆಯಾಗಿದ್ದು, ಇನ್ನೂ ಮೂರು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಎಂ. ಚಿನ್ನಸ್ವಾಮಿ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯಲಿರೋ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟನ್ಸ್ ನಡುವಿನ ಪಂದ್ಯ ರದ್ದಾಗಲಿದೆ ಎನ್ನಲಾಗುತ್ತಿದೆ.
ಆರ್ಸಿಬಿ ಇತ್ತೀಚೆಗಷ್ಟೇ ಬ್ಯಾಕ್ ಟು ಬ್ಯಾಕ್ 2 ಪಂದ್ಯ ಗೆದ್ದು ಕಮ್ಬ್ಯಾಕ್ ಮಾಡಿದೆ. 10 ಪಂದ್ಯಗಳಲ್ಲಿ ಕೇವಲ 6 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ. ಕಳೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ರೋಚಕ ಗೆಲುವು ಸಾಧಿಸಿತ್ತು. ಇದರಿಂದ ನೆಟ್ ರನ್ ರೇಟ್ ಚೂರು ಸುಧಾರಿಸಿದೆ.
ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್ಸಿಬಿ ತಂಡವನ್ನು ಯಾವುದೇ ಕಾರಣಕ್ಕೂ ಗುಜರಾತ್ ಟೈಟನ್ಸ್ ಕಡೆಗಣಿಸುವಂತಿಲ್ಲ. ಆದರೆ, ಎಲ್ಲರೂ ತಮ್ಮ ಪ್ರದರ್ಶನದಲ್ಲಿ ಸ್ಥಿರವಾಗಿರಬೇಕು. ಈಗಂತೂ ವಿರಾಟ್, ದಿನೇಶ್ ಕಾರ್ತಿಕ್, ಫಾಫ್ ಡುಪ್ಲೆಸಿಸ್, ರಜತ್ ಪಾಟಿದಾರ್, ವಿಲ್ ಜಾಕ್ಸ್ ಎಲ್ಲರೂ ಫಾರ್ಮ್ಗೆ ಬಂದಿದ್ದಾರೆ.
ಇನ್ನು, ಆರ್ಸಿಬಿ ಮತ್ತು ಗುಜರಾತ್ ನಡುವಿನ ಪಂದ್ಯದಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ರಾತ್ರಿ ಮ್ಯಾಚ್ ನಡೆಯೋ ಕಾರಣ ಭರ್ಜರಿ ಮಳೆಯಾಗೋ ಸಾಧ್ಯತೆ ಇದೆ. ರಾತ್ರಿ 7 ಗಂಟೆಯಿಂದ 10ರ ನಡುವೆ ಮಳೆ ಬರುವ ಸಾಧ್ಯತೆ ಇದ್ದು, ಪಂದ್ಯ ರದ್ದು ಕೂಡ ಆಗಬಹುದು.
ಇದನ್ನೂ ಓದಿ: ಆರ್ಸಿಬಿಯಲ್ಲಿ ಹೊಸ ಗ್ಯಾಂಗ್..! KGF ಫ್ಲಾಪ್ ಬೆನ್ನಲ್ಲೇ KJP ಬ್ಲಾಕ್ಬಸ್ಟರ್ ಹಿಟ್..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ