IPL-2025ರ ಮೊದಲು ಮೆಗಾ ಹರಾಜು ಡಿಸೆಂಬರ್ನಲ್ಲಿ ನಡೆಯಲಿದೆ
ಮೊದಲ ಟ್ರೋಫಿಗಾಗಿ ಕಾಯುತ್ತಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು
ಆಲ್ರೌಂಡರ್ಗಳನ್ನೇ ಟಾರ್ಗೆಟ್ ಮಾಡಲು ಸಿದ್ಧತೆ ನಡೆಸಿರುವ RCB
IPL-2025ರ ಮೊದಲು ಮೆಗಾ ಹರಾಜು ನಡೆಯಲಿದೆ. ಈ ಹರಾಜಿಗೆ ಎಲ್ಲಾ ತಂಡಗಳು ಸಿದ್ಧತೆ ಆರಂಭಿಸಿವೆ. ಐಪಿಎಲ್‌ನ ಅತ್ಯಂತ ಜನಪ್ರಿಯ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಮೊದಲ ಟ್ರೋಫಿಗಾಗಿ ಕಾಯುತ್ತಿದೆ. ಈ ಬಾರಿಯ ಹರಾಜಿನಲ್ಲಿ ಆರ್ಸಿಬಿ ಫ್ರಾಂಚೈಸಿ ಬಲಿಷ್ಠ ಆಲ್‌ರೌಂಡರ್ ಮೇಲೂ ಕಣ್ಣಿಡಲಿದೆ. ಅದರಲ್ಲೂ ಮೂವರು ಆಲ್ರೌಂಡರ್ಗಳನ್ನೇ ಟಾರ್ಗೆಟ್ ಮಾಡಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ.
ಇದನ್ನೂ ಓದಿ:ಗಾಯಕ್ವಾಡ್ಗೆ ಬಿಗ್ ಶಾಕ್; ಧೋನಿ ಶಿಷ್ಯನಿಗೆ ಗಾಳ ಹಾಕಿದ CSK, ಕ್ಯಾಪ್ಟನ್ಸಿ ಆಫರ್..!
ಲಿಯಾಮ್ ಲಿವಿಂಗ್‌ಸ್ಟೋನ್
ಇಂಗ್ಲೆಂಡ್‌ನ ಸ್ಟಾರ್ ಆಲ್‌ರೌಂಡರ್ ಲಿವಿಂಗ್‌ಸ್ಟೋನ್ ಪಂಜಾಬ್ ಕಿಂಗ್ಸ್‌ನ ಭಾಗವಾಗಿದ್ದಾರೆ. ಲಿವಿಂಗ್‌ಸ್ಟೋನ್ ಬ್ಯಾಟಿಂಗ್, ಬೌಲಿಂಗ್ ಎರಡರಲ್ಲೂ ಚರಿತ್ರೆ ಸೃಷ್ಟಿಸಬಲ್ಲರು. ಕಳೆದ ಋತುವಿನಲ್ಲಿ ಅವರಿಗೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಐಪಿಎಲ್ 2024ರ 7 ಇನ್ನಿಂಗ್ಸ್‌ಗಳಲ್ಲಿ 22.20 ಸರಾಸರಿಯಲ್ಲಿ 111 ರನ್ ಗಳಿಸಿದರು. ಬೌಲಿಂಗ್ನಲ್ಲಿ ಕೇವಲ 3 ವಿಕೆಟ್ ಪಡೆದರು. ಹೀಗಾಗಿ ಅವರನ್ನು ಪಂಜಾಬ್ ತಂಡವು ಅವರನ್ನು ಬಿಡುಗಡೆ ಮಾಡಬಹುದು. ಒಂದು ವೇಳೆ ಪಂಜಾಬ್ ಅವರನ್ನು ಬಿಡುಗಡೆ ಮಾಡಿದರೆ, ಆರ್ಸಿಬಿ ಖರೀದಿಸಲು ಪ್ಲಾನ್ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ:ಸ್ಟಾರ್ಗಳಿಗೊಂದು ನ್ಯಾಯ, ಉಳಿದವರಿಗೊಂದು ನ್ಯಾಯ; ಬಿಸಿಸಿಐ ವಿರುದ್ಧ ಭುಗಿಲೆದ್ದ ಆಕ್ರೋಶ
ಗ್ಲೆನ್ ಫಿಲಿಪ್ಸ್
ಗ್ಲೆನ್ ಫಿಲಿಪ್ಸ್ ಐಪಿಎಲ್ 2024ರಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ನ ಭಾಗವಾಗಿದ್ದರು. ಆದರೆ ಅವರಿಗೆ ಒಂದೇ ಒಂದು ಪಂದ್ಯವನ್ನು ಆಡಲು ಅವಕಾಶ ಸಿಗಲಿಲ್ಲ. ಗ್ಲೆನ್ ಫಿಲಿಪ್ಸ್ ಟಿ20 ಕ್ರಿಕೆಟ್‌ನಲ್ಲಿ ಅತ್ಯಂತ ಅಪಾಯಕಾರಿ ಬ್ಯಾಟ್ಸಮನ್. ಅಗ್ರ ಕ್ರಮಾಂಕದಲ್ಲಿ ಬ್ಯಾಟ್ ಬೀಸುತ್ತಾರೆ. ಜೊತೆಗೆ ಬೌಲಿಂಗ್ ಮೂಲಕವೂ ತಂಡಕ್ಕೆ ಆಧಾರವಾಗಿರುತ್ತಾರೆ. ಇವರು ಆಫ್ ಸ್ಪಿನ್ ಬೌಲರ್. ಅಂತಹ ಪರಿಸ್ಥಿತಿಯಲ್ಲಿ ಫಿಲಿಪ್ಸ್ ಹರಾಜಿನ ಭಾಗವಾದರೆ RCB ಅವರನ್ನು ದೊಡ್ಡ ಮೊತ್ತಕ್ಕೆ ಖರೀದಿಸಬಹುದು.
ಅಶುತೋಷ್ ಶರ್ಮಾ
ಅಶುತೋಷ್ ಶರ್ಮಾ 2024ರಲ್ಲಿ ಚೊಚ್ಚಲ ಐಪಿಎಲ್ ಟೂರ್ನಿ ಆಡಿದ್ದಾರೆ. ಪಂಜಾಬ್ ಕಿಂಗ್ಸ್ ಪರ ಅದ್ಭುತ ಪ್ರದರ್ಶನ ನೀಡಿ ಎಲ್ಲರ ಮನ ಗೆದ್ದಿದ್ದಾರೆ. 17 ವರ್ಷಗಳ ಐಪಿಎಲ್ ಇತಿಹಾಸದಲ್ಲಿ 8ನೇ ಕ್ರಮಾಂಕದಲ್ಲಿ ಬಂದು ಒಂದು ಋತುವಿನಲ್ಲಿ 100 ಕ್ಕಿಂತ ಹೆಚ್ಚು ರನ್ ಗಳಿಸಿದ ಮೊದಲ ಭಾರತೀಯ ಆಟಗಾರ. ಐಪಿಎಲ್ 2024ರಲ್ಲಿ ಅಶುತೋಷ್ 11 ಪಂದ್ಯಗಳಲ್ಲಿ 167.26 ಸ್ಟ್ರೈಕ್ ರೇಟ್‌ನಲ್ಲಿ 189 ರನ್ ಗಳಿಸಿದ್ದಾರೆ. ಇವರು ಹರಾಜಿಗೆ ಹೋದರೆ RCB ಖರೀದಿಸಲು ಪ್ಲಾನ್ ಮಾಡಿಕೊಂಡಿದೆ ಎನ್ನಲಾಗಿದೆ.
ಇದನ್ನೂ ಓದಿ: ತುಂಬಾ ವರ್ಷಗಳ ನಂತರ.. ಮತ್ತೆ ತಂಡ ಕೂಡಿಕೊಳ್ಳಲಿದ್ದಾರೆ RCB ಮೂವರು ಹಳೇ ಆಟಗಾರರು..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ