/newsfirstlive-kannada/media/post_attachments/wp-content/uploads/2024/08/RCB-Team_IPL-2025.jpg)
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ನಾಲ್ಕು ಪಂದ್ಯಗಳ T20 ಸರಣಿ ಇಂದಿನಿಂದ ಆರಂಭವಾಗ್ತಿದೆ. ಡರ್ಬನ್‌ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್‌ಸಿಬಿಯ ಇಬ್ಬರು ವೇಗದ ಬೌಲರ್‌ಗಳಿಗೆ ಅದೃಷ್ಟ ಖುಲಾಯಿಸುವ ಸಾಧ್ಯತೆ ಇದೆ. ಯಶ್ ದಯಾಳ್ ಮತ್ತು ವಿಜಯ್‌ಕುಮಾರ್ ವೈಶಾಖ್ ಟಿ-20 ಕ್ರಿಕೆಟ್​​ಗೆ ಪದಾರ್ಪಣೆ ಮಾಡುವ ನಿರೀಕ್ಷೆ ಇದೆ.
ಯಶ್ ದಯಾಳ್ ಈ ಹಿಂದೆ ಟೀಮ್ ಇಂಡಿಯಾದ ಭಾಗವಾಗಿದ್ದರು. ಪ್ಲೇಯಿಂಗ್-11ನಲ್ಲಿ ಅವಕಾಶ ಸಿಕ್ಕಿರಲಿಲ್ಲ. ವಿಜಯ್‌ಕುಮಾರ್ ವೈಶಾಖ್ ಇದೇ ಮೊದಲ ಬಾರಿಗೆ ಟೀಂ ಇಂಡಿಯಾಗೆ ಆಯ್ಕೆ ಆಗಿದ್ದಾರೆ.
ವೈಶಾಖ್​​ಗೆ ಶಾಕ್ ಕೊಟ್ಟ ಆರ್​ಸಿಬಿ
ಕೆಲವು ದಿನಗಳ ಹಿಂದೆ ಐಪಿಎಲ್ ತಂಡಗಳು ಉಳಿಸಿಕೊಳ್ಳಲಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿವೆ. ಆರ್​ಸಿಬಿ ಮೂವರು ಆಟಗಾರರನ್ನು ಮಾತ್ರ ಉಳಿಸಿಕೊಂಡಿದೆ. ಕೈಬಿಟ್ಟಿರುವ ಆಟಗಾರರ ಪಟ್ಟಿಯಲ್ಲಿ ವೈಶಾಖ್ ಹೆಸರು ಇದೆ. ಕಳೆದ ಋತುವಿನಲ್ಲಿ ಆರ್​ಸಿಬಿ ಪರ 4 ಪಂದ್ಯವನ್ನು ವಿಜಯ್ ಆಡಿದ್ದರು. 2023ರಲ್ಲಿ ಐಪಿಎಲ್​​ಗೆ ಪದಾರ್ಪಣೆ ಮಾಡಿದ್ದಾರೆ.
ಇದನ್ನೂ ಓದಿ:IND vs SA ಮೊದಲ ಟಿ20 ಪಂದ್ಯ; ಎಷ್ಟು ಗಂಟೆಯಿಂದ ಮ್ಯಾಚ್? Live ಇರುತ್ತಾ, ಇಲ್ವಾ?
ಯಶ್ ದಯಾಳ್: ತಮ್ಮ ವೃತ್ತಿ ಜೀವನದಲ್ಲಿ ಇದುವರೆಗೆ 56 ಟಿ20 ಪಂದ್ಯಗಳನ್ನು ಆಡಿದ್ದಾರೆ. 56 ಇನ್ನಿಂಗ್ಸ್‌ನಲ್ಲಿ 29.45 ಸರಾಸರಿಯಲ್ಲಿ 53 ವಿಕೆಟ್‌ಗಳನ್ನು ಕಬಳಿಸಿದ್ದಾರೆ. 3/20 ಅವರ ಅತ್ಯುತ್ತಮ ಬೌಲಿಂಗ್ ಆಗಿದೆ.
ವಿಜಯ್‌ಕುಮಾರ್ ವೈಶಾಖ್: ಇಲ್ಲಿಯವರೆಗೆ 30 ಟಿ-20 ಪಂದ್ಯಗಳನ್ನು ಆಡಿದ್ದಾರೆ. 20.88 ಸರಾಸರಿಯಲ್ಲಿ 42 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಅತ್ಯುತ್ತಮ ಬೌಲಿಂಗ್ ಅಂಕಿಅಂಶ 3/5 ಆಗಿದೆ.
ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ 'ರನ್ ಭೂಮಿ' ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us