/newsfirstlive-kannada/media/post_attachments/wp-content/uploads/2024/07/RCB_News.jpg)
ಇತ್ತೀಚೆಗಷ್ಟೇ ಬಿಸಿಸಿಐ ಕ್ರಿಕೆಟ್ ದಿಗ್ಗಜ ಮಾಜಿ ಆರಂಭಿಕ ಬ್ಯಾಟರ್ ಗೌತಮ್ ಗಂಭೀರ್ ಅವರನ್ನು ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ನೇಮಿಸಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಘೋಷಿಸಿದೆ. ರಾಹುಲ್ ದ್ರಾವಿಡ್ ಅವರ ಉತ್ತರಾಧಿಕಾರಿ ಆಗಿ ಗಂಭೀರ್ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧಿಕೃತವಾಗಿ ಅನೌನ್ಸ್ ಮಾಡಿದೆ. ಈ ಬೆನ್ನಲ್ಲೇ ಸಪೋರ್ಟಿಂಗ್ ಸ್ಟ್ಯಾಫ್ ಬಗ್ಗೆ ಕೂಡ ಚರ್ಚೆ ಶುರುವಾಗಿದೆ.
ಇನ್ನು, ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಸಪೋರ್ಟಿಂಗ್ ಕೋಚ್ ಆಗಿರೋ ಅಭಿಷೇಕ್ ನಾಯರ್ ಅವರು ಭಾರತ ಕ್ರಿಕೆಟ್ ತಂಡದ ಸಹಾಯಕ ತರಬೇತುದಾರರು ಆಗಲಿದ್ದಾರೆ ಎಂದು ವರದಿಯಾಗಿದೆ. ಇದಕ್ಕೆ ಕಾರಣ ಗೌತಮ್ ಗಂಭೀರ್ ಮತ್ತು ಅಭಿಷೇಕ್ ನಾಯರ್ ಅವರು ಒಟ್ಟಿಗೆ ಕೆಲಸ ಮಾಡಿದ್ದಾರೆ.
ಇಷ್ಟೇ ಇಲ್ಲ ಸದ್ಯ ಲಭ್ಯವಾಗಿರೋ ಮಾಹಿತಿ ಪ್ರಕಾರ ಭಾರತ ತಂಡದ ಬೌಲಿಂಗ್ ಕೋಚ್ ಹುದ್ದೆಗೆ ಲೆಜೆಂಡರಿ ಕ್ರಿಕೆಟರ್ಸ್ ಆದ ಜಹೀರ್ ಖಾನ್ ಮತ್ತು ಲಕ್ಷ್ಮೀಪತಿ ಬಾಲಾಜಿ ಅವರನ್ನು ಬಿಸಿಸಿಐ ಶಾರ್ಟ್ ಲಿಸ್ಟ್ ಆಗಿದೆ.
ಮತ್ತೊಂದೆಡೆ ಕನ್ನಡಿಗ ಮತ್ತು ಮಾಜಿ ಆರ್ಸಿಬಿ ಪ್ಲೇಯರ್ ವಿನಯ್ ಕುಮಾರ್ ಅವರನ್ನು ಬೌಲಿಂಗ್ ಕೋಚ್ ಆಗಿ ನೇಮಿಸಬೇಕು ಎಂದು ಬಿಸಿಸಿಐಗೆ ಟೀಮ್ ಇಂಡಿಯಾ ಮುಖ್ಯ ಕೋಚ್ ಗಂಭೀರ್ ಬಿಸಿಸಿಐಗೆ ಮನವಿ ಮಾಡಿದ್ದಾರೆ. ಫೀಲ್ಡಿಂಗ್ ಕೋಚ್ ಆಗಿದ್ದ ಟಿ ದಿಲೀಪ್ ಅವರನ್ನು ಗೌತಮ್ ಗಂಭೀರ್ ಉಳಿಸಿಕೊಳ್ಳುವ ಸಾಧ್ಯತೆಯಿದೆ.
ಇದನ್ನೂ ಓದಿ:3ನೇ ಪಂದ್ಯದಲ್ಲೂ ಟೀಮ್ ಇಂಡಿಯಾಗೆ ಭರ್ಜರಿ ಗೆಲುವು.. ಜಿಂಬಾಬ್ವೆಗೆ ಹೀನಾಯ ಸೋಲು!
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ