/newsfirstlive-kannada/media/post_attachments/wp-content/uploads/2025/05/rcb2.jpg)
ಚಿತ್ರದುರ್ಗ: ಮೊನ್ನೆಯಷ್ಟೇ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಜಯಭೇರಿ ಬಾರಿಸಿತ್ತು. ಕೇವಲ 2 ರನ್ಗಳಿಂದ ರಜತ್ ಪಡೆ ಗೆಲುವು ಸಾಧಿಸಿತ್ತು. ಇದೇ ಖುಷಿಯಲ್ಲಿದ್ದ ಆರ್ಸಿಬಿ ಅಭಿಮಾನಿಗಳು ಯಡವಟ್ಟು ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:ದೇಶದ 244 ಜಿಲ್ಲೆಗಳಲ್ಲಿ ನಾಳೆ ಮಾಕ್ ಡ್ರಿಲ್.. ಈ ಯುದ್ಧ ಕವಾಯತ್ನ ಉದ್ದೇಶ ಏನು..?
ಸಿಎಸ್ಕೆ ವಿರುದ್ಧ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ಗೆಲ್ಲುತ್ತಿದ್ದಂತೆ ಕೊಹ್ಲಿ ಬ್ಯಾನರ್ ಮುಂದೆ ಅಭಿಮಾನಿಗಳು, ಮೇಕೆ ಬಲಿಕೊಟ್ಟು ಸಂಭ್ರಮಿಸಿದ್ದಾರೆ. ಆದ್ರೆ ಆ ಸಂಭ್ರಮ ಹೆಚ್ಚು ಕಾಲ ಉಳಿಯಲಿಲ್ಲ. ಹೌದು, ಮೊಳಕಾಲ್ಮೂರು ತಾಲೂಕಿನ ಮಾರಮ್ಮನಹಳ್ಳಿ ಗ್ರಾಮದಲ್ಲಿ ಆರ್ಸಿಬಿ ಅಭಿಮಾನಿಗಳು ಮಚ್ಚಿನಿಂದ ಮೇಕೆಯನ್ನು ಕಡಿದು ಕೊಹ್ಲಿ ಪೊಸ್ಟರ್ಗೆ ರಕ್ತಾಭಿಷೇಕ ಮಾಡಿದ್ದಾರೆ. ಇದೇ ದೃಶ್ಯವನ್ನು ತಮ್ಮ ಫೋನ್ನಲ್ಲಿ ಸೆರೆ ಮಾಡಿಕೊಂಡು call-me-143-kalki ಹೆಸರಿನ ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿದ್ದಾರೆ.
ಇದೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಶಾಕ್ ಆಗಿದ್ದಾರೆ. ಆ ಕೂಡಲೇ ಮೂವರು ಯುವಕರಾದ ಸಣ್ಣ ಪಾಲಯ್ಯ, ಜಯ್ಯಣ್ಣ, ತಿಪ್ಪೇಸ್ವಾಮಿ ವಿರುದ್ದ ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ