GT ವಿರುದ್ಧ ಹೀನಾಯ ಸೋಲು.. ಆರ್​​ಸಿಬಿ ನೆಕ್ಸ್ಟ್​ ಮ್ಯಾಚ್ ಯಾವಾಗ..?

author-image
Ganesh
Updated On
GT ವಿರುದ್ಧ ಆರ್​ಸಿಬಿಗೆ ಬಿಗ್​ ಚಾಲೆಂಜ್.. ಈ 6 ಪ್ರಶ್ನೆಗೆ ಉತ್ತರ ಕಂಡುಕೊಂಡರೆ ಗೆಲುವು ನಮ್ಮದೇ..!
Advertisment
  • ಗುಜರಾತ್ ಟೈಟನ್ಸ್ ವಿರುದ್ಧ ಆರ್​​ಸಿಬಿಗೆ ಸೋಲು
  • ಮುಂದಿನ ಪಂದ್ಯ ಗೆಲ್ಲುವ ವಿಶ್ವಾಸದಲ್ಲಿ ಆರ್​ಸಿಬಿ
  • ಮುಂದಿನ ಪಂದ್ಯಕ್ಕಾಗಿ ಫ್ಯಾನ್ಸ್ ಎಕ್ಸೈಟ್

ಐಪಿಎಲ್​ನ 14ನೇ ಪಂದ್ಯವು ನಿನ್ನೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಿತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ಮುಖಾಮುಖಿ ಆಗಿದ್ದವು. ಆರ್​ಸಿಬಿಯನ್ನು ಗಿಲ್ ಪಡೆ, 8 ವಿಕೆಟ್​ಗಳಿಂದ ಮಣಿಸಿದೆ.

ತವರಿನ ಮೊದಲ ಪಂದ್ಯದಲ್ಲೇ ಸೋಲುವ ಮೂಲಕಕ ಆರ್​​ಸಿಬಿ, ತನ್ನ ಅಭಿಮಾನಿಗಳಿಗೆ ಭಾರೀ ನಿರಾಸೆ ಮಾಡಿದೆ. ಸತತ ಎರಡು ಪಂದ್ಯಗಳನ್ನು ಗೆದ್ದಿದ್ದ ಆರ್​ಸಿಬಿ ಮೂರನೇ ಪಂದ್ಯದಲ್ಲಿ ಸೋತಿರೋದು ಕೊಂಚ ಬೇಸರ ಮೂಡಿಸಿದೆ. ಹೀಗಾಗಿ ಮುಂದಿನ ಪಂದ್ಯಕ್ಕಾಗಿ ಫ್ಯಾನ್ಸ್ ಎಕ್ಸೈಟ್​ ಆಗಿದ್ದಾರೆ.

ಇದನ್ನೂ ಓದಿ: ಆರ್​​ಸಿಬಿ ವಿರುದ್ಧ ಕಣಕ್ಕೆ ಇಳಿಯುತ್ತಿದ್ದಂತೆ ಸಿರಾಜ್​ ಭಾವುಕ.. ಪಂದ್ಯ ಮುಗಿದ ಮೇಲೆ ಹೇಳಿದ್ದೇನು?

publive-image

ಮುಂಬೈ ವಿರುದ್ಧ ಮ್ಯಾಚ್​..!

ಆರ್​ಸಿಬಿಯ ತನ್ನ ಮುಂದಿನ ಪಂದ್ಯವನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ. ವಾಂಖೆಡೆ ಮೈದಾನದಲ್ಲಿ ಏಪ್ರಿಲ್ 7 ರಂದು ಸಂಜೆ 7.30 ರಿಂದ ಪಂದ್ಯ ಆರಂಭವಾಗಲಿದೆ. ಸ್ಟಾರ್​ ಸ್ಪೋರ್ಟ್ಸ್​ ವಾಹಿನಿಗಳಲ್ಲಿ ಪಂದ್ಯ ನೇರಪ್ರಸಾರ ಆಗಲಿದೆ.

ಈಗಾಗಲೇ ಮೂರು ಪಂದ್ಯಗಳನ್ನು ಆಡಿರುವ ಮುಂಬೈ ಇಂಡಿಯನ್ಸ್, ಎರಡರಲ್ಲಿ ಸೋತು ಕೇವಲ ಒಂದು ಪಂದ್ಯವನ್ನು ಗೆದ್ದುಕೊಂಡಿದೆ. ಇನ್ನು ಪಾಯಿಂಟ್ಸ್ ಪಟ್ಟಿಯಲ್ಲಿ ಆರ್​ಸಿಬಿ ಮೂರನೇ ಸ್ಥಾನದಲ್ಲಿದ್ದರೆ, ಮುಂಬೈ ಇಂಡಿಯನ್ಸ್​ ಐದನೇ ಸ್ಥಾನದಲ್ಲಿದೆ. ಆರ್​ಸಿಬಿ ವಿರುದ್ಧದ ಪಂದ್ಯಕ್ಕೂ ಮೊದಲು ಮುಂಬೈ ಇಂಡಿಯನ್ಸ್, ನಾಳೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕಣಕ್ಕೆ ಇಳಿಯಲಿದೆ.

ಇದನ್ನೂ ಓದಿ: ಸೋಲಿನ ಬೆನ್ನಲ್ಲೇ ಆರ್​ಸಿಬಿಗೆ ಮತ್ತೊಂದು ಆಘಾತ; ಪಾಯಿಂಟ್ಸ್​ ಟೇಬಲ್​​ನಲ್ಲಿ ರೂಲ್ ಮಾಡ್ತಿರೋದ್ಯಾರು?

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ 'ರನ್ ಭೂಮಿ' ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

Advertisment