/newsfirstlive-kannada/media/post_attachments/wp-content/uploads/2025/04/RCB-3.jpg)
ಭಾರತ ಹಾಗೂ ಪಾಕಿಸ್ತಾನದ ನಡುವಿನ ಗಡಿ ಉದ್ವಿಗ್ನ ತೀವ್ರಗೊಂಡಾಗ 2025ರ ಐಪಿಎಲ್ ಟೂರ್ನಿಯನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಎಲ್ಲವೂ ಶಾಂತವಾದ ಹಿನ್ನೆಲೆಯಲ್ಲಿ ಐಪಿಎಲ್ ಪುನರಾರಂಭವಾಗುತ್ತಿದೆ. ಈ ಪುನರಾರಂಭದ ಐಪಿಎಲ್ನ ಮೊದಲ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಆರ್ಸಿಬಿ ಸೆಣಸಾಟ ನಡೆಸಲಿದೆ. ಆದರೆ ಆರ್ಸಿಬಿಗೆ ದೊಡ್ಡ ಪೆಟ್ಟು ಬೀಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ಹೈವೋಲ್ಟೇಜ್ ಮ್ಯಾಚ್ ಮೇ 17 ರಂದು ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಮಹತ್ವದ ಪಂದ್ಯದಿಂದ ಆರ್ಸಿಬಿ ಕ್ಯಾಪ್ಟನ್ ರಜತ್ ಪಾಟಿದಾರ್ ಹೊರಗುಳಿಯುವ ಸಾಧ್ಯತೆ ದಟ್ಟವಾಗಿದೆ ಎಂದು ಹೇಳಲಾಗುತ್ತಿದೆ.
ರಜತ್ ಪಾಟಿದಾರ್ ಮೊದಲ ಬಾರಿಗೆ ಆರ್ಸಿಬಿಯ ನಾಯಕತ್ವ ವಹಿಸಿಕೊಂಡು ಯಶಸ್ಸು ಕಂಡಿದ್ದಾರೆ. ಸದ್ಯ ಈಗ ಪ್ಲೇ ಆಫ್ ಹಂತದಲ್ಲಿ ನಾಯಕ ಬಹು ಮುಖ್ಯ ಪಾತ್ರ ವಹಿಸಬೇಕಿದೆ. ಚೆನ್ನೈ ವಿರುದ್ಧ ಪಂದ್ಯವನ್ನಾಡುವಾಗ ರಜತ್ ಅವರು ಬೆರಳಿನ ಗಾಯಕ್ಕೆ ತುತ್ತಾಗಿದ್ದಾರೆ. ಈಗಾಗಲೇ ಈಗಾಯದಿಂದ ಚೇತರಿಸಿಕೊಂಡಿದ್ದರು ಎನ್ನಲಾಗಿತ್ತು.
ಇದನ್ನೂ ಓದಿ:ಕಿಂಗ್ ಕೊಹ್ಲಿಗಾಗಿ RCB ಅಭಿಮಾನಿಗಳು ಮಾಸ್ಟರ್ ಪ್ಲಾನ್.. ಚಿನ್ನಸ್ವಾಮಿಯಲ್ಲಿ ಸ್ಪೆಷಲ್ ಡೇ, ಏನು ಗೊತ್ತಾ?
ಆದರೆ ಆರ್ಸಿಬಿ ನಾಯಕ ರಜತ್ ಪಾಟಿದಾರ್ ಅವರು ಬೆರಳಿನ ಗಾಯಕ್ಕೆ ಒಳಗಾಗಿದ್ದರಿಂದ ಅವರಿಗೆ ಚೇತರಿಸಿಕೊಳ್ಳಲು ಇನ್ನಷ್ಟು ಸಮಯ ಬೇಕಿದೆ ಎಂದು ಹೇಳಲಾಗುತ್ತಿದೆ. ಕೆಕೆಆರ್ ವಿರುದ್ಧದ ಪಂದ್ಯ ಮಾತ್ರವಲ್ಲ, ಬದಲಾಗಿ ಇಂಗ್ಲೆಂಡ್ ಲಯನ್ಸ್ ವಿರುದ್ಧದ ಟೆಸ್ಟ್ ಮ್ಯಾಚ್ಗೆ ಇಂಡಿಯಾ-ಎ ತಂಡದಲ್ಲಿ ಆಡುವ ಸಾಧ್ಯತೆ ಕೂಡ ಕಡಿಮೆ ಇದೆ.
ಭಾರತ -ಪಾಕಿಸ್ತಾನದ ಘರ್ಷಣೆಯಿಂದ ಸ್ಥಗಿತಗೊಂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಆರ್ಸಿಬಿ ಪಂದ್ಯದಲ್ಲಿ ರಜತ್ ಪಾಟಿದಾರ್ ಅವರು ಆಡುವುದಿಲ್ಲ ಎಂದು ಹೇಳಲಾಗಿತ್ತು. ಈ ಪಂದ್ಯಕ್ಕೆ ವಿಕೆಟ್ ಕೀಪರ್ ಜೀತೇಶ್ ಶರ್ಮಾಗೆ ನಾಯಕತ್ವ ಪಟ್ಟ ನೀಡಲು ಎಲ್ಲ ತಯಾರಿ ನಡೆದಿತ್ತು. ಆದರೆ ಪಂದ್ಯ ಸ್ಥಗಿತವಾಗಿತ್ತು. ಹೀಗಾಗಿ ಕೆಕೆಆರ್ ಜೊತೆ ಮೇ 17 ರಂದು ನಡೆಯುವ ಪಂದ್ಯದಲ್ಲಿ ರಜತ್ ಪಾಟಿದಾರ್ ಕಣಕ್ಕೆ ಇಳಿಯಲಿಲ್ಲ ಎಂದರೆ ಜಿತೇಶ್ ಶರ್ಮಾಗೆ ನಾಯಕನ ಪಟ್ಟ ಕಟ್ಟುವ ಸಾಧ್ಯತೆ ದಟ್ಟವಾಗಿದೆ.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ