ಹ್ಯಾಟ್ರಿಕ್ ಸೋಲಿನ ಬೆನ್ನಲ್ಲೇ ಆರ್​ಸಿಬಿಗೆ ಮತ್ತೊಂದು ಆಘಾತ..!

author-image
Ganesh
Updated On
ಭಾರತ ತಂಡದಲ್ಲಿ ನನಗೆ ಚಾನ್ಸ್​ ಸಿಕ್ಕಾಗ ವಿರಾಟ್​ ಕೊಹ್ಲಿ ಕಾಲಿನಿಂದ ಒದ್ದಿದ್ದರು- IPL ಪ್ಲೇಯರ್
Advertisment
  • ಪಂಜಾಬ್ ಕಿಂಗ್ಸ್​ ವಿರುದ್ಧ ಸೋತ ಆರ್​ಸಿಬಿ
  • 7 ಪಂದ್ಯಗಳಲ್ಲಿ ಮೂರು ಮ್ಯಾಚ್​ ಸೋಲು
  • ಗೆದ್ದ ಪಂಜಾಬ್​​ ಸ್ಥಾನ ಭದ್ರ, ಅಂಕಪಟ್ಟಿ ಕತೆ ಏನಾಯ್ತು?

ಬೆಂಗಳೂರಿನ ಎಂ.ಚಿನ್ನಸ್ವಾಮಿ ಮೈದಾನದಲ್ಲಿ ಹ್ಯಾಟ್ರಿಕ್ ಸೋಲಿನ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್​​ ಬೆಂಗಳೂರು ತಂಡಕ್ಕೆ ಮತ್ತೊಂದು ಆಘಾತ ಆಗಿದೆ. ಪಾಯಿಂಟ್ಸ್​ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದ ಆರ್​​ಸಿಬಿ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ.

ಬೆಂಗಳೂರು ವಿರುದ್ಧ ಗೆದ್ದ ಪಂಜಾಬ್, ಎರಡನೇ ಸ್ಥಾನಕ್ಕೆ ಜಿಗಿದಿದೆ. ಈ ಮೊದಲು ಪಂಜಾಬ್, ನಾಲ್ಕನೇ ಸ್ಥಾನದಲ್ಲಿತ್ತು. ಒಟ್ಟು 7 ಪಂದ್ಯಗಳನ್ನು ಆಡಿರುವ ಪಂಜಾಬ್, ಎರಡರಲ್ಲಿ ಸೋತು ಐದು ಮ್ಯಾಚ್​ ಗೆದ್ದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್​ 6 ಪಂದ್ಯಗಳಲ್ಲಿ ಐದರಲ್ಲಿ ಗೆದ್ದುಕೊಂಡು ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಇದನ್ನೂ ಓದಿ: ಆರ್​ಸಿಬಿಗೆ ಸೋಲು.. ಚಿನ್ನದಂಥ ಅವಕಾಶ ಕೈಚೆಲ್ಲಿದ ಕನ್ನಡಿಗ ಮನೋಜ್ ಭಾಂಡಗೆ..!

ಇನ್ನು ಗುಜರಾತ್ ಟೈಟನ್ಸ್ ಮೂರನೇ ಸ್ಥಾನದಲ್ಲಿದ್ದರೆ, ಎಲ್​ಎಸ್​ಜಿ ಐದನೇ ಹಾಗೂ ಕೆಕೆಆರ್​​ ಆರನೇ ಸ್ಥಾನದಲ್ಲಿದೆ. 7 ಪಂದ್ಯಗಳಲ್ಲಿ ಕೇವಲ ಎರಡರಲ್ಲಿ ಮಾತ್ರ ಗೆದ್ದಿರುವ ಸಿಎಸ್​​ಕೆ ಅಂಕಪಟ್ಟಿಯಲ್ಲಿ ಲಾಸ್ಟ್​​ನಿಂದ ಮೊದಲ ಸ್ಥಾನದಲ್ಲಿದೆ. ಸನ್ ರೈಸರ್ಸ್ ಹೈದರಾಬಾದ್ 9ನೇ ಸ್ಥಾನದಲ್ಲಿದೆ. ಹಾಗೆ ಮುಂಬೈ ಇಂಡಿಯನ್ಸ್​ 7 ಮತ್ತು ರಾಜಸ್ಥಾನ್ ರಾಯಲ್ಸ್​ 8ನೇ ಸ್ಥಾನದಲ್ಲಿವೆ.

ಇದನ್ನೂ ಓದಿ: ರಿಕ್ಕಿ ರೈ ಪ್ರಕರಣಕ್ಕೆ ಟ್ವಿಸ್ಟ್.. ಕಾರು ಚಾಲಕ ನೀಡಿದ ದೂರಿನಲ್ಲಿ ಏನಿದೆ..?

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ 'ರನ್ ಭೂಮಿ' ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

Advertisment