/newsfirstlive-kannada/media/post_attachments/wp-content/uploads/2024/07/Kohli_-RCB-1.jpg)
ಇತ್ತೀಚೆಗೆ ನಡೆದ ಬಹುನಿರೀಕ್ಷಿತ 2024ರ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಈ ಮೂಲಕ 2ನೇ ಬಾರಿಗೆ ಟಿ20 ವಿಶ್ವಕಪ್ ಟ್ರೋಫಿ ಎತ್ತಿ ಹಿಡಿದಿದೆ.
ಇನ್ನು, 17 ವರ್ಷಗಳಿಂದ ಟೀಮ್ ಇಂಡಿಯಾ ವಿಶ್ವಕಪ್ ಗೆಲ್ಲಲು ಸಾಕಷ್ಟು ಶ್ರಮ ಹಾಕುತ್ತಲೇ ಇತ್ತು. ಕೊನೆಗೂ ಕ್ಯಾಪ್ಟನ್ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ ವಿಶ್ವಕಪ್ ಗೆದ್ದಿದೆ. ಹಾಗಾಗಿ ಕ್ಯಾಪ್ಟನ್ ರೋಹಿತ್ ಶರ್ಮಾಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸ್ಪೆಷಲ್ ಪೋಸ್ಟ್ ಹಾಕಿದೆ. ಎಷ್ಟೋ ವರ್ಷಗಳಿಂದ ಕಾಯುತ್ತಿದ್ದ ನಮಗೆ ವಿಶ್ವಕಪ್ ತಂದುಕೊಟ್ಟಿದ್ದಾಗಿ ಧನ್ಯಾವಾದಗಳು. ಇವು ಅದ್ಭುತ ಕ್ಷಣಗಳು ಎಂದು ರೋಹಿತ್ ಶರ್ಮಾ ಅವರಿಗೆ ಮೆಚ್ಚುಗೆ ವ್ಯಕ್ತಪಡಿಸಿದೆ.
Rohit signs off from T20Is as a T20 World Cup winning captain. ??
Fairytale, we call it the stuff of dreams! ?✨
Thank you for so many wonderful memories, @ImRo45! ? pic.twitter.com/WcnWUjmLrq
— Royal Challengers Bengaluru (@RCBTweets)
Rohit signs off from T20Is as a T20 World Cup winning captain. 🥹🏆
Fairytale, we call it the stuff of dreams! 🤌✨
Thank you for so many wonderful memories, @ImRo45! 🫡 pic.twitter.com/WcnWUjmLrq— Royal Challengers Bengaluru (@RCBTweets) June 29, 2024
">June 29, 2024
ವಿಶ್ವಕಪ್ ಗೆದ್ದ ಕೂಡಲೇ ಟೀಮ್ ಇಂಡಿಯಾದ ಕ್ಯಾಪ್ಟನ್ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ರೂ ತಾನು ಐಪಿಎಲ್ ಆಡೋದಾಗಿ ರೋಹಿತ್ ಹೇಳಿದ್ರು.
ಮುಂದಿನ ಸೀಸನ್ ವೇಳೆಗೆ ರೋಹಿತ್ ಮುಂಬೈ ಇಂಡಿಯನ್ಸ್ ತೊರೆಯೋದು ಗ್ಯಾರಂಟಿ. ಆಕ್ಷನ್ನಲ್ಲಿ ಆರ್ಸಿಬಿ ರೋಹಿತ್ ಶರ್ಮಾ ಅವರನ್ನು ಖರೀದಿ ಮಾಡಲಿ. ರೋಹಿತ್ ಕ್ಯಾಪ್ಟನ್ ಆಗಲಿ, ಕೊಹ್ಲಿ ಆರ್ಸಿಬಿ ಪರ ಚೆನ್ನಾಗಿ ಆಡಿ ಕಪ್ ಗೆಲ್ಲಿಸಲಿ ಎಂದು ಫ್ಯಾನ್ಸ್ ಸೋಷಿಯಲ್ ಮೀಡಿಯಾದಲ್ಲಿ ಫುಲ್ ಟ್ರೆಂಡ್ ಮಾಡುತ್ತಿದ್ದಾರೆ. ಮೂಲಗಳ ಪ್ರಕಾರ ಆರ್ಸಿಬಿ ಫ್ರಾಂಚೈಸಿ ಕೂಡ ಒಂದು ವೇಳೆ ಕೊಹ್ಲಿ ಕ್ಯಾಪ್ಟನ್ ಆಗಲು ನಿರಾಕರಣೆ ಮಾಡಿದ್ರೆ ರೋಹಿತ್ ಶರ್ಮಾ ಅವರನ್ನು ಬೆಂಗಳೂರು ತಂಡಕ್ಕೆ ಕರೆ ತರೋ ಸಾಧ್ಯತೆಗಳು ಇವೆ.
ಇದನ್ನೂ ಓದಿ:ರೋಹಿತ್ಗೆ ಆರ್ಸಿಬಿ ಕ್ಯಾಪ್ಟನ್ಸಿ ಜತೆಗೆ ಮತ್ತೊಂದು ಮಹತ್ವದ ಜವಾಬ್ದಾರಿ; ಏನದು..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ