ಕ್ರಿಕೆಟ್ ಲೋಕದಲ್ಲಿ ಈಗ ಇಂಡಿಯನ್ ಪ್ರೀಮಿಯರ್ ಲೀಗ್ನದ್ದೇ ಸದ್ದು
ವರ್ಷದ ಕೊನೆಗೆ ನಡೆಯಲಿರೋ 2025ರ ಐಪಿಎಲ್ ಮೆಗಾ ಹರಾಜು..!
ಈ ಮುನ್ನವೇ ಆರ್ಸಿಬಿ ತಂಡವನ್ನು ಮ್ಯಾಕ್ಸಿ ಅನ್ಫಾಲೋ ಮಾಡಿದ್ದೇಕೆ?
2025ರ ಇಂಡಿಯನ್ ಪ್ರೀಮಿಯರ್ ಲೀಗ್ಗೆ ಮುನ್ನ ತಮ್ಮನ್ನು ರೀಟೈನ್ ಮಾಡಿಕೊಳ್ಳುವುದಿಲ್ಲ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮ್ಯಾನೇಜ್ಮೆಂಟ್ ಸ್ಟಾರ್ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಅವರಿಗೆ ತಿಳಿಸಿದೆ. ಹಾಗಾಗಿ ಮ್ಯಾಕ್ಸ್ವೆಲ್ ಆರ್ಸಿಬಿ ತಂಡವನ್ನು ಇನ್ಸ್ಟಾಗ್ರಾಮ್ನಲ್ಲಿ ಅನ್ಫಾಲೋ ಮಾಡಿದ್ದಾರೆ.
ಕಳೆದ ಮೂರು ವಾರಗಳ ಹಿಂದೆಯೇ ಮ್ಯಾಕ್ಸ್ವೆಲ್ಗೆ ಆರ್ಸಿಬಿ ಈ ಮಾಹಿತಿ ನೀಡಿದೆ. ಇದರಿಂದ ಸಿಟ್ಟಿಗೆದ್ದ ಸ್ಟಾರ್ ಆಲ್ರೌಂಡರ್ ಮ್ಯಾಕ್ಸ್ವೆಲ್ ಆರ್ಸಿಬಿಯನ್ನು ಇನ್ಸ್ಟಾಗ್ರಾಮ್ನಲ್ಲಿ ಮಾತ್ರವಲ್ಲ ಟ್ವಿಟರ್ನಲ್ಲೂ ಅನ್ಫಾಲೋ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಮುಂಬರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ಗಾಗಿ ಇಡೀ ಕ್ರೀಡಾ ಜಗತ್ತೇ ಕಾಯುತ್ತಿದೆ. ಈ ವರ್ಷದ ಕೊನೆಗೆ 2025ರ ಐಪಿಎಲ್ ಮೆಗಾ ಆಕ್ಷನ್ ನಡೆಯಲಿದೆ. ಇದಕ್ಕೂ ಮುನ್ನವೇ ಐಪಿಎಲ್ ತಂಡಗಳು ತಮಗೆ ಬೇಕಾದ ಆಟಗಾರರನ್ನು ರೀಟೈನ್ ಮಾಡಿಕೊಳ್ಳಬಹುದು. ಬಳಿಕ ಉಳಿದ ಆಟಗಾರರನ್ನು ಆಕ್ಷನ್ಗಾಗಿ ಬಿಡಲೇಬೇಕಿದೆ.
ಇನ್ನು, ಆರ್ಸಿಬಿ ತಂಡವು ವಿರಾಟ್ ಕೊಹ್ಲಿ ಹೊರತುಪಡಿಸಿ ಮತ್ಯಾರನ್ನ ರೀಟೈನ್ ಮಾಡಿಕೊಳ್ಳಲಿದೆ ಎಂದು ಇದುವರೆಗೂ ಸ್ಪಷ್ಟನೆ ನೀಡಿಲ್ಲ. ರೀಟೈನ್ ಲಿಸ್ಟ್ನಲ್ಲಿ ಕೊಹ್ಲಿ ಜೊತೆಗೆ ವಿಲ್ ಜಾಕ್ಸ್, ಮೊಹಮ್ಮದ್ ಸಿರಾಜ್ ಇದೆ ಎಂದು ಹೇಳಲಾಗುತ್ತಿದೆ. ಗ್ಲೆನ್ ಮ್ಯಾಕ್ಸ್ವೆಲ್ ಹೆಸರು ಇತ್ತು ಎಂದು ವರದಿ ಆಗಿತ್ತು. ಈ ಬೆನ್ನಲ್ಲೇ ಗ್ಲೆನ್ ಮ್ಯಾಕ್ಸ್ವೆಲ್ ಅವರನ್ನು ರೀಟೈನ್ ಮಾಡಿಕೊಳ್ಳುವುದು ಡೌಟ್ ಎಂದು ಆರ್ಸಿಬಿ ಮೂಲಗಳು ತಿಳಿಸಿವೆ. ಈಗ ಮ್ಯಾಕ್ಸ್ವೆಲ್ ಆರ್ಸಿಬಿ ಖಾತೆಯನ್ನು ಇನ್ಸ್ಟಾದಲ್ಲಿ ಅನ್ಫಾಲೋ ಮಾಡಿದ್ದು, ಇದು ಖಚಿತವಾಗಿದೆ.
ಮ್ಯಾಕ್ಸ್ವೆಲ್ ಕಳಪೆ ಪ್ರದರ್ಶನ
ಕಳೆದ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಮ್ಯಾಕ್ಸ್ವೆಲ್ ಕಳಪೆ ಪ್ರದರ್ಶ ನೀಡಿದ್ರು. ಒಂದು ಮ್ಯಾಚ್ನಲ್ಲೂ 30ಕ್ಕಿಂತಲೂ ಹೆಚ್ಚು ರನ್ ಮ್ಯಾಕ್ಸಿ ಗಳಿಸಲೇ ಇಲ್ಲ. ಇದು ತಂಡದ ಫಲಿತಾಂಶಗಳ ಮೇಲೆ ಕೆಟ್ಟ ಪರಿಣಾಮ ಬೀರಿತ್ತು. ತಾನು ಆಡಿದ 10 ಪಂದ್ಯಗಳಲ್ಲಿ ಕೇವಲ 52 ರನ್ ಗಳಿಸಿದ್ರು. ಈ ಪೈಕಿ ಹೈಎಸ್ಟ್ ಸ್ಕೋರ್ 28 ಆಗಿತ್ತು.
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್